ಸಮಾಜ ಕಲ್ಯಾಣ ಇಲಾಖೆ: 22 ಸಾವಿರ ಹುದ್ದೆ ಭರ್ತಿಗೆ ನಿರ್ಧಾರ


Team Udayavani, May 21, 2017, 3:45 AM IST

h-20.jpg

ಬೆಂಗಳೂರು: ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು ಮತ್ತು ಅವುಗಳ ವ್ಯಾಪ್ತಿಯಲ್ಲಿ ಬರುವ ನಿಗಮಗಳಲ್ಲಿ ಖಾಲಿ ಇರುವ 22,342 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದೆ.

ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಇಲಾಖೆಗಳಲ್ಲಿ ಕೆಲಸ ಸುಗಮವಾಗಿ ನಡೆಯುವಂತೆ ನೋಡಿಕೊಂಡು ಕಲ್ಯಾಣ ಕಾರ್ಯಕ್ರಮಗಳನ್ನು ಎಲ್ಲಾ ವರ್ಗಗಳಿಗೂ ತಲುಪುವಂತೆ ಮಾಡುವುದರ ಜತೆಗೆ ಇದೇ ಮೊದಲ ಬಾರಿ ಭಾರೀ ಪ್ರಮಾಣದಲ್ಲಿ ನೇಮಕಾತಿ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಪರ್ವದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ವಸತಿ ಶಾಲೆಗಳ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು, ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಕೆಪಿಎಸ್‌ಸಿ ಮೂಲಕ ಭರ್ತಿ ಮಾಡಲಾಗುವುದು. ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ಸ್ವತ್ಛತಾ ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯ ಸಮಿತಿ ಮೂಲಕ ಭರ್ತಿ ಮಾಡಲಾಗುತ್ತದೆ ಎಂದರು.

ಎಲ್ಲೆಲ್ಲಿ ಎಷ್ಟು ಹುದ್ದೆಗಳು ಭರ್ತಿ?:
ಇಲಾಖೆಗಳ ವಸತಿ ಶಾಲೆಗಳನ್ನು ನಡೆಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 13,205, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 3841, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 5296 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಮಂಜೂರಾದ 15,383 ಹುದ್ದೆಗಳ ಪೈಕಿ 4226 ಹುದ್ದೆಗಳು ಭರ್ತಿಯಾಗಿವೆ. ಉಳಿದ ಹುದ್ದೆಗಳು ಸೇರಿದಂತೆ ಈ ವರ್ಷ ಹೊಸದಾಗಿ ಆರಂಭಿಸುವ ವಸತಿ ಶಾಲೆಗಳಿಗೆ ಅಗತ್ಯ ಸಿಬ್ಬಂದಿ ಸೇರಿ 13,205 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4122 ಹುದ್ದೆಗಳ ಭರ್ತಿಗೆ ಈಗಾಗಲೇ ಕೆಪಿಎಸ್‌ಸಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಅದೇ ರೀತಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 8964 ಹುದ್ದೆಗಳ ಪೈಕಿ 3841 ಭರ್ತಿ ಮಾಡಲಾಗುತ್ತಿದ್ದು, 760 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಗೆ ಬರೆದಿದ್ದು, ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಅದೇ ರೀತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 948 ಹುದ್ದಗಳಿಗೆ ನೇಮಕಾತಿ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕೆಪಿಎಸ್‌ಸಿ ಹಾಗೂ ಇಲಾಖಾ ಹಂತದಲ್ಲಿ ಪ್ರಕ್ರಿಯೆ ಆರಂಭವಾಗಿದೆ ಎಂದು ವಿವರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭರ್ತಿ ಮಾಡಲಾಗುತ್ತಿರುವ 5296 ಹುದ್ದೆಗಳ ಪೈಕಿ ಬಹುತೇಕವು ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರು, ಸ್ವತ್ಛತಾ ಸಿಬ್ಬಂದಿ ಆಗಿದ್ದು, ಈ ಹುದ್ದೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ನಿಗದಿಪಡಿಸಿ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯ ಸಮಿತಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ತಾತ್ಕಾಲಿಕ ನೌಕರರಿಗೆ ತೊಂದರೆ ಮಾಡುವುದಿಲ್ಲ:
ಹೊಸದಾಗಿ ಹುದ್ದೆಗಳನ್ನು ಭರ್ತಿ ಮಾಡಿದರೂ ಆ ಹುದ್ದೆಗಳಲ್ಲಿ ಅನೇಕ ವರ್ಷಗಳಿಂದ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತೊಂದರೆ ಮಾಡುವುದಿಲ್ಲ. ಈಗ ನೇಮಕವಾಗುತ್ತಿರುವ ಹುದ್ದೆಗಳ ಪೈಕಿ ಸಾಕಷ್ಟು ಹುದ್ದೆಗಳು ಹೊಸದಾಗಿ ಸೃಜನೆಯಾಗುವಂತಹದ್ದು. ಅನೇಕ ವರ್ಷಗಳಿಂದ ಇಲಾಖೆಯಲ್ಲಿ ತಾತ್ಕಾಲಿಕವಾಗಿ ಕೆಲಸ ಮಾಡುತ್ತಿರುವವರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ ಎಂದು ಅವರು ಭರವಸೆ ನೀಡಿದರು.

ಅಡುಗೆಯವರು, ಅಡುಗೆ ಸಹಾಯಕರಿಗೂ ಎಸ್ಸೆಸ್ಸೆಲ್ಸಿ ವಿದಾರ್ಹತೆ ನಿಗದಿಪಡಿಸಿರುವ ಕ್ರಮವನ್ನು ಸಮರ್ಥಿಸಿಕೊಂಡ ಸಚಿವರು, ಸರ್ಕಾರಿ ನೇಮಕಾತಿಯಲ್ಲಿ ಡಿ ದರ್ಜೆ ನೌಕರರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಕಡ್ಡಾಯಗೊಳಿಸಿದ್ದು, ಈ ಹುದ್ದೆಗಳು ಡಿ ದರ್ಜೆ ವ್ಯಾಪ್ತಿಗೆ ಬರುವುದರಿಂದ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಆದರೆ, ಅಡುಗೆಯವರು ಮತ್ತು ಸಹಾಯಕರನ್ನು ನೇಮಕ ಮಾಡಿಕೊಳ್ಳುವಾಗ ಅವರಿಗೆ ಆ ಕೆಲಸ ಬರುತ್ತದೆಯೇ ಎಂಬುದನ್ನು ತಿಳಿದುಕೊಂಡೇ ನೇಮಕ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.