Arrested: ಭಾರತ-ಆಸ್ಟ್ರೇಲಿಯಾ ಟಿ 20 ಪಂದ್ಯದ ವೇಳೆ ಪಾಕ್ ಪರ ಘೋಷಣೆ; ಇಬ್ಬರ ಸೆರೆ
Team Udayavani, Dec 3, 2023, 9:55 AM IST
ಬೆಂಗಳೂರು: ಎರಡು ದಿನಗಳ ಹಿಂದೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರಪ್ಪನಪಾಳ್ಯ ನಿವಾಸಿಗಳಾದ ಇನಾಯತ್ ಉಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಬಂಧಿತರು.
ಪಬ್ ವ್ಯವಸ್ಥಾಪಕ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ಜೆ.ಪಿ.ನಗರ 2ನೇ ಹಂತದಲ್ಲಿರುವ ಮೊಹಾಲಿಕಾ ಪಬ್‌ನಲ್ಲಿ ಭಾರತ- ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ-20 ಕ್ರಿಕೆಟ್ ಪಂದ್ಯ ವೀಕ್ಷಣೆಗಾಗಿ ಶುಕ್ರವಾರ ವ್ಯವಸ್ಥೆ ಮಾಡಲಾಗಿತ್ತು. ಆರೋಪಿಗಳು ಶುಕ್ರವಾರ ರಾತ್ರಿ ಪಬ್‌ಗ ಹೋಗಿದ್ದಾರೆ. ಪಂದ್ಯ ನಡೆಯುವಾಗ ಪಬ್ ನಲ್ಲಿ ಕೂಗಾಡಿದ್ದ ಆರೋಪಿಗಳು, ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದರು. ಆರೋಪಿಗಳ ವರ್ತನೆಯನ್ನು ಪ್ರಶ್ನಿಸಿದ್ದ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ನಂತರ, ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ದೂರು ನೀಡಲಾಗಿತ್ತು.
ಸ್ಥಳಕ್ಕೆ ಹೋಗಿದ್ದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಬಳಿಕ ಪಬ್‌ನ ವ್ಯವಸ್ಥಾಪಕ ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.