ಹೊಸ ಆವಿಷ್ಕಾರದಿಂದ ಕೃಷಿ ಸಮಸ್ಯೆಗೆ ಪರಿಹಾರ
Team Udayavani, Aug 17, 2021, 2:47 PM IST
ಬೆಂಗಳೂರು: ಹೊಸ ಆವಿಷ್ಕಾರಗಳ ಮೂಲಕ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಉಪರಾಷ್ಟ್ರ ಪತಿ ಎಂ.ವೆಂಕಯ್ಯ ನಾಯ್ಡು ಹೇಳಿದರು.
ಜಕ್ಕೂರು ಆವರಣದಲ್ಲಿರುವ ಜವಾಹರ್‌ಲಾಲ್ ನೆಹರು ಸೆಂಟರ್ ಅಡ್ವಾನ್ಸ್ ಸೈಂಟಿಫಿಟಿಕ್ ಸಂಶೋಧನಾ ಕೇಂದ್ರದ ನಾವೀನ್ಯತೆ ಮತ್ತು ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಈ ಸಂಸ್ಥೆ ವಿಜ್ಞಾನ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದೆ. ತಮ್ಮ ಅನುಪಮ ಸಾಧನೆಗಳಿಂದ ಜಗತ್ತಿನ ಗಮನ ಸೆಳೆದಿರುವುದು ಖುಷಿ ಪಡುವ ಸಂಗತಿ ಆಗಿದೆ. ವಿಜ್ಞಾನಿಗಳು ರೈತರಿಗೆ ವೈಜ್ಞಾನಿಕವಾಗಿ ತಮ್ಮ ಸಂಶೋಧನೆಗಳ ಮೂಲಕ ಸೇವೆ ಮಾಡಬೇಕಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಇದನ್ನೂ ಓದಿ:ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ: ಅ.24ರಂದು ಭಾರತ-ಪಾಕ್ ಮುಖಾಮುಖಿ
ಕನ್ನಡದಲ್ಲಿಯೇ ತಮ್ಮ ಮಾತು ಆರಂಭಿಸಿದ ವೆಂಕಯ್ಯ ನಾಯ್ಡು, ಈ ಕೇಂದ್ರದ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ವಿಭಿನ್ನ ವೈಜ್ಞಾನಿಕ ಸಂಶೋಧನೆಗಳ ಮೂಲಕ 300 ಪೇಟೆಂಟ್‌ಗಳನ್ನು ಸಂಸ್ಥೆ ತನ್ನದಾಗಿಸಿಕೊಂಡಿದೆ. ನೂತನ ಆವಿಷ್ಕಾರಗಳ ಮೂಲಕ ವಿಶ್ವದ ಗಮನ ಸೆಳೆದಿದೆ ಎಂದು ಹೇಳಿದರು.
ಬೆಂಗಳೂರಿನ ಕೆರೆಗಳ ಸಂರಕ್ಷಣೆ ಆಗಬೇಕು:ಸಿಲಿಕಾನ್ ಸಿಟಿ ಬೆಂಗಳೂರುಈ ಹಿಂದೆ ಕೆರೆಗಳು ಊರಾಗಿತ್ತು. ಆದರೆ ಈಗ ಒತ್ತುವರಿಯ ಹಿನ್ನೆಲೆಯಲ್ಲಿ ಹಲವು ಕೆರೆಗಳು ಮರೆಯಾಗಿವೆ. ಇದೀಗ ಈಗ ಉಳಿದ ಕೆರೆಗಳ ನ್ನಾದರೂ ಪುನಶ್ಚೇತನ ಮಾಡುವ ಮೂಲಕ ಸಂರಕ್ಷಣೆ ಮಾಡಬೇಕಿದೆ ಎಂದು ತಿಳಿಸಿದರು.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡೈನಾಮಿಕ್ ಆಗಿದ್ದು ಅವರು ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ಕೆರೆಗಳ ಸಂರಕ್ಷಣೆಗೆ ಸಕಾಲದಲ್ಲಿ ಉತ್ತಮ ನಿರ್ಧಾರ ವನ್ನು ಕೈಗೊಳ್ಳಲಿದ್ದಾರೆ. ಕ್ರಿಯಾತ್ಮಕ ವಾಗಿ ಒತ್ತುವರಿಯನ್ನು ತೆರವುಗೊಳಿಸಲಿದ್ದಾರೆ
ಎಂದು ವೆಂಕಯ್ಯ ನಾಯ್ಡು ಭರವಸೆ ವ್ಯಕ್ತಪಡಿಸಿದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು ಪೇಟ ತೊಡಿಸಿ ಸ್ವಾಗತಿಸಿದ ಸಿಎಂ
ಆರು ದಿನಗಳ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಬಂದಳಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡುಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಪೇಟ ತೊಡಿಸಿ,ಹಾರಹಾಕಿ ಸ್ವಾಗತಿಸಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಂಸದ ಪಿ.ಸಿ.ಮೋಹನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.