ಸೋಮಣ್ಣ ನಿವಾಸದಲ್ಲಿ ಅಮಿತ್ ಶಾ ಮಹತ್ವದ ಚರ್ಚೆ
Team Udayavani, Jan 1, 2023, 7:00 AM IST
ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಸಚಿವ ವಿ.ಸೋಮಣ್ಣ ನಿವಾಸದಲ್ಲಿ ಪ್ರಮುಖ ನಾಯಕರ ಜತೆ ಎರಡು ಗಂಟೆಗಳ ಕಾಲ ಚರ್ಚಿಸಿದ್ದು ಕುತೂಹಲ ಮೂಡಿಸಿದೆ. ರಾಜ್ಯ ಉಸ್ತುವಾರಿ ಅರುಣ್‌ಸಿಂಗ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ರಾಜ್ಯದಲ್ಲಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಯಾವ್ಯಾವ ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಕ್ತಿಯುತವಾಗಿದೆ. ಬಿಜೆಪಿಗೆ ಬರಲು ಬಯಸಿರುವವರು ಮತ್ತು ಅವರ ಷರತ್ತಿನ ಬಗ್ಗೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಗೆಲುವು ಸಾಧಿಸಿರುವ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಯಕರ ಜತೆ ಮಾತನಾಡಿದರು. ವಿ.ಸೋಮಣ್ಣ ಅವರು ಸಹ ಇದೇ ಸಂದರ್ಭದಲ್ಲಿ ಹಲವು ವಿಚಾರ ತಿಳಿಸಿದರು ಎಂದು ಹೇಳಲಾಗಿದೆ.
ಸೋಮಣ್ಣ ಅವರ ನಿವಾಸದಲ್ಲೇ ಅಮಿತ್ ಶಾ ಸಂಜೆ ಇಡ್ಲಿ, ಕೇಸರಿಬಾತ್, ಉಪ್ಪಿಟ್ಟು ಹಾಗೂ ಬಜ್ಜಿ ಉಪಾಹಾರ ಸೇವಿಸಿದ್ದು ವಿಶೇಷ. ಬಳಿಕ ಅಮಿತ್ ಶಾ ಅವರು ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು.
ಇದನ್ನೂ ಓದಿ: ಸವಾಲು ಎದುರಿಸಲು ಪತ್ತೇದಾರಿ ಸಂಸ್ಥೆ ನೆರವು : ಕೇಂದ್ರ ಸಚಿವ ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.