“ಸೂದ್‌ ಹಠಾವೋ’ ನಡೆದೀತು ಎಚ್ಚರ…


Team Udayavani, Jul 24, 2017, 11:43 AM IST

sood-hatvo.jpg

ಬೆಂಗಳೂರು: “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿನ ಹಿಂದಿ ನಾಮಫ‌ಲಕಗಳಿಗೆ ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಕ್ರಮವನ್ನು ಸಾಹಿತಿಗಳು, ರಂಗಕರ್ಮಿಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಸಮರ್ಥಿಸಿಕೊಂಡಿವೆ. ಅಲ್ಲದೆ, ಕಾರ್ಯಕರ್ತರ ವಿರುದ್ಧ ದಾಖಲಿಸಿರುವ “ಕೋಮುಗಲಭೆ ಪ್ರಕರಣ’ ಹಿಂಪಡೆಯದಿದ್ದರೆ “ಹಿಂದಿ ಹಠಾವೋ’ ಜತೆಗೆ ನಗರ ಪೊಲೀಸ್‌ ಆಯುಕ್ತ “ಪ್ರವೀಣ್‌ ಸೂದ್‌ ಹಠಾವೋ’ ಚಳವಳಿಯನ್ನೂ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳು, ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಾಡು-ನುಡಿ ರಕ್ಷಣೆಗಾಗಿ ಹೋರಾಟ ನಡೆಸುವುದು ಹಕ್ಕು ಮತ್ತು ಹೊಣೆಗಾರಿಕೆ. ಆದರೆ, ದುರುದ್ದೇಶದಿಂದ ಹೋರಾಟಗಾರರ ಮೇಲೆ ಕೋಮುಗಲಭೆಯಂತಹ ಗಂಭೀರ ಪ್ರಕರಣ ದಾಖಲಿಸಿ, ಹೋರಾಟ ಹತ್ತಿಕ್ಕುವುದು ಖಂಡನೀಯ. ಕೂಡಲೇ ಕೋಮುಗಲಭೆ ಅಡಿ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ, “ಪ್ರವೀಣ್‌ ಸೂದ್‌ ಹಠಾವೋ’ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. 

ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ನಾಡು-ನುಡಿ ರಕ್ಷಣೆಗಾಗಿ ಹೋರಾಟ ನಡೆಸುವುದು ಪ್ರಜೆಗಳ ಹಕ್ಕು ಮತ್ತು ಅದು ಸಮಗ್ರತೆಯ ಒಂದು ಭಾಗ. ಅದಕ್ಕೆ ತಕ್ಕಂತೆ ಕಾನೂನು ರೀತಿ ಕ್ರಮ ಕೈಗೊಳ್ಳಲಿ. ಅದುಬಿಟ್ಟು, ಹೋರಾಟ ಹತ್ತಿಕ್ಕುವ ದುರುದ್ದೇಶದಿಂದ ಇಲ್ಲ-ಸಲ್ಲದ ಕೇಸುಗಳನ್ನು ಹಾಕಿ, ಹಿಂಸೆ ನೀಡುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಹಿಂದಿ ಹೇರಿಕೆ ವಿರುದ್ಧದ ಹೋರಾಟ ಯಾವ್ಯಾವುದೋ ತಿರುವು ಪಡೆದು, ಒಬ್ಬ ಅಧಿಕಾರಿ ವಿರುದ್ಧ ಹೋಗಬಾರದು ಎಂಬುದು ನಮ್ಮ ಉದ್ದೇಶ. ಅದರಂತೆ ಅಧಿಕಾರಿ ಕೂಡ ಈ ಕೇಸುಗಳನ್ನು ವಾಪಸ್‌ ಪಡೆಯುತ್ತಾರೆ ಎಂಬ ವಿಶ್ವಾಸ ಇದೆ. ಹಾಗೊಂದು ವೇಳೆ ಹಿಂಪಡೆಯದಿದ್ದರೆ, ಹಿಂದಿ ಹಠಾವೋ ಜತೆಗೆ ಪೊಲೀಸ್‌ ಅಧಿಕಾರಿ ಪ್ರವೀಣ್‌ ಸೂದ್‌ ಹಠಾವೋ ಹೋರಾಟ ಕೂಡ ಆರಂಭಿಸಬೇಕಾಗುತ್ತದೆ ಎಂದು ತಿಳಿಸಿದರು. 

ನಿರ್ಧಾರ ಪ್ರಕಟಿಸಲಿ ಸಿಎಂ: ರಂಗಕರ್ಮಿ ಪ್ರಕಾಶ್‌ ಬೆಳವಾಡಿ ಮಾತನಾಡಿ, ಕನ್ನಡಪರ ಹಲವು ತೀರ್ಮಾನಗಳನ್ನು ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ “ಹಿಂದಿ ಹೇರಿಕೆ’ ವಿಚಾರದಲ್ಲಿ ಕೂಡ ಈ ಹಂತದಲ್ಲೇ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ಮುಂದೆ ನಡೆಯುವ ಹಿಂದಿ ಹೇರಿಕೆ ವಿರೋಧಿಯ ದೊಡ್ಡ ಆಂದೋಲನಕ್ಕೆ ಅವರೇ ಕಾರಣ ಆಗಲಿದ್ದಾರೆ ಎಂದು ಎಚ್ಚರಿಸಿದರು. 

ಹಿಂದಿ ನಾಮಫ‌ಲಕಗಳಿಗೆ ಮಸಿಬಳಿಯುವುದರಿಂದ ಕೋಮುಗಲಭೆ ಹೇಗೆ ಸೃಷ್ಟಿಯಾಗುತ್ತದೆ ಎಂದು ಕೇಳಿದ ಪ್ರಕಾಶ್‌ ಬೆಳವಾಡಿ, ಈ “ಕೋಮುಗಲಭೆ’ ಪ್ರಕರಣ ದಾಖಲಿಸುವ ಮೂಲಕ ಕನ್ನಡವನ್ನು ಪ್ರತಿನಿಧಿಸುವವರದ್ದು ಒಂದು ಕೋಮು ಹಾಗೂ ಇತರೆ ಭಾಷಿಕರದ್ದು ಮತ್ತೂಂದು ಕೋಮು ಎಂದು ಸ್ವತಃ ಪೊಲೀಸರು ಪ್ರತಿಪಾದಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. 

ಮತ್ತ್ಯಾವ ರೀತಿ ಹೇಳ್ಬೇಕು?: ಬನವಾಸಿ ಬಳಗದ ಅಧ್ಯಕ್ಷ ಜಿ. ಆನಂದ್‌ ಮಾತನಾಡಿ, ಹಿಂದಿ ಹೇರಿಕೆ ವಿರುದ್ಧ ಟ್ವಿಟರ್‌ ಅಭಿಯಾನ ನಡೆಸಲಾಯಿತು. ಹಿಂದಿ ಬೇಡ ಎಂದು ಪತ್ರದ ಮೂಲಕ ತಿಳಿಸಲಾಯಿತು. ಹಿರಿಯ ಸಾಹಿತಿಗಳು, ಲೇಖಕರ ಸಹಿ ಸಂಗ್ರಹಿಸಲಾಯಿತು. ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಮಾಡಲಾಯಿತು. ಪ್ರತಿಭಟನೆ ಮಾಡಿ, ಗಡುವು ಕೂಡ ನೀಡಲಾಯಿತು. ಇದಾವುದನ್ನೂ ಕೇಳಲಿಲ್ಲ. ಅನಿವಾರ್ಯವಾಗಿ ಮಸಿ ಬಳಿಯಬೇಕಾಯಿತು.

ಇದೂ ಬೇಡ ಎಂದಾದರೆ, ಜನರ ಅಭಿಪ್ರಾಯಗಳನ್ನು ಇನ್ನಾವ ರೀತಿ ವ್ಯಕ್ತಪಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರವು ರಾಜ್ಯಕ್ಕೆ ಹಲವು ಯೋಜನೆಗಳಿಗೆ ಅನುದಾನ ನೀಡುತ್ತದೆ. ಅದರ ಎರಡು-ಮೂರುಪಟ್ಟು ರಾಜ್ಯದಿಂದ ತೆರಿಗೆ ಹೋಗಿರುತ್ತದೆ. ಹೀಗೆ ಅನುದಾನ ಕೊಟ್ಟಿರುವ ಯೋಜನೆಗಳಿಗೆಲ್ಲಾ ಹಿಂದಿ ಹೇರುವ ಪ್ರಯತ್ನ ನಡೆದಿದೆ. ಇದಕ್ಕೆ “ನಮ್ಮ ಮೆಟ್ರೋ’ ಮುನ್ನುಡಿ. ತಕ್ಷಣ ಸರ್ಕಾರ ಈ ನಿಟ್ಟಿನಲ್ಲಿ ಸ್ಪಷ್ಟ ನಿಲುವು ತಳೆಯಬೇಕು ಎಂದು ಆಗ್ರಹಿಸಿದರು. 

ಸಾಹಿತಿ ಪಿ.ವಿ. ನಾರಾಯಣ್‌ ಮಾತನಾಡಿ, ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಏಕಪಕ್ಷೀಯ ತೀರ್ಮಾನವನ್ನು ಸಂವಿಧಾನಬದ್ಧವಾಗಿ ನಡೆಸಲಾಗುತ್ತಿದೆ. ಯಾವ ಆಸ್ತಿಪಾಸ್ತಿ ಹಾಳುಮಾಡಿಲ್ಲ. ಅಹಿಂಸಾತ್ಮಕವಾಗಿ, ಸೌಮ್ಯರೀತಿಯಲ್ಲಿ ಹೋರಾಟ ನಡೆಸಲಾಗಿದೆ. ಅದಕ್ಕೆ ಕೋಮುಗಲಭೆ ಆರೋಪ ಹೊರಿಸಿ, ಹೋರಾಟ ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ ಎಂದು ಹೇಳಿದರು. 

ಸೂದ್‌ ವರ್ಗಾವಣೆಗೆ ಆಗ್ರಹ: ಸಮತಾ ಸೈನಿಕ ದಳದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಮಾತನಾಡಿ, ಅನೇಕ ಸಂದರ್ಭದಲ್ಲಿ ಎಷ್ಟೋ ಜನರಿಗೆ ಮಸಿ ಬಳಿಯಲಾಗಿರುತ್ತದೆ. ಆದರೆ, ಇಲ್ಲಿ ಮೆಟ್ರೋ ನಿಲ್ದಾಣದ ಪ್ರವೇಶದ್ವಾರದಲ್ಲಿರುವ ಹಿಂದಿ ನಾಮಫ‌ಲಕಗಳಿಗೆ ಮಸಿ ಬಳಿದಿರುವುದಕ್ಕೆ ಕೋಮುಗಲಭೆ ಕೇಸು ಹಾಕುವುದು ಯಾವ ನ್ಯಾಯ? ಇದಕ್ಕೆ ಕಾರಣರಾದ ಪೊಲೀಸ್‌ ಆಯುಕ್ತ ಪ್ರವೀಣ್‌ಸೂದ್‌ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಹಮದಿಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀವುಲ್ಲಾ, ಅಖೀಲ ಕರ್ನಾಟಕ ಕೆಥೋಲಿಕ್‌ ಕ್ರೈಸ್ತರ ಕನ್ನಡ  ಸಂಘದ ಪ್ರಧಾನ ಕಾರ್ಯದರ್ಶಿ ರಫಾಯಲ್‌ ರಾಜು, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಆರ್‌. ಭಾಸ್ಕರ್‌ ಪ್ರಸಾದ್‌, ಕರ್ನಾಟಕ ಜನಶಕ್ತಿ ಪದಾಧಿಕಾರಿ ವಾಸು ಮಾತನಾಡಿದರು. 

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.