ಕೆ.ಆರ್.ಮಾರುಕಟ್ಟೆ ಬಳಿ ಸೊಪ್ಪಿನ ವ್ಯಾಪಾರಿ ಕೊಲೆ
Team Udayavani, Dec 11, 2017, 12:15 PM IST
ಬೆಂಗಳೂರು: ಕೆ.ಆರ್ ಮಾರುಕಟ್ಟೆ ಫ್ಲೈಓವರ್ ಕೆಳಗೆ ವ್ಯಾಪಾರಿಯೊಬ್ಬರನ್ನು ದುಷ್ಕರ್ಮಿಗಳು ಶನಿವಾರ ರಾತ್ರಿ ಕೊಲೆಗೈದಿದ್ದಾರೆ. ಚಾಮರಾಜಪೇಟೆಯ ಕೊತ್ತಂಬರಿ ಶ್ರೀನಿವಾಸ್ (34) ಕೊಲೆಯಾದ ವ್ಯಕ್ತಿ. ಕೆ.ಆರ್ ಮಾರ್ಕೆಟ್‌ನ ಮೇಲ್ಸೇತುವೆ ಕೆಳಗೆ ಶ್ರೀನಿವಾಸ್‌ರನ್ನು ಶನಿವಾರ ತಡರಾತ್ರಿ 12ಗಂಟೆ ನಂತರ ದುಷ್ಕರ್ಮಿಗಳು ಕೊಲೆಗೈದು ಪರಾರಿಯಾಗಿದ್ದಾರೆ.
ಮಾರಕಾಸ್ತ್ರಗಳಿಂದ ಆತನ ತಲೆ ಹಾಗೂ ಎದೆಯ ಭಾಗಕ್ಕೆ ಭೀಕರವಾಗಿ ಹೊಡೆದಿರುವುದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೊಲೆಯಾದ ಸ್ಥಳದ ಪಕ್ಕದಲ್ಲಿ ಕಬ್ಬಿನ ಲಾರಿ ನಿಲ್ಲಿಸಿರುವುದರಿಂದ ಈ ಘಟನೆ ಬೇಗ ಬೆಳಕಿಗೆ ಬಂದಿಲ್ಲ. ಈ ಸಂಬಂಧ ಹಲವು ಸ್ಥಳೀಯರನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದ್ದು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಚಾಮರಾಜಪೇಟೆಯಲ್ಲಿ ಪತ್ನಿ ಹಾಗೂ ಮಕ್ಕಳ ಜೊತೆ ವಾಸವಾಗಿರುವ ಶ್ರೀನಿವಾಸ್, ಹಲವು ವರ್ಷಗಳಿಂದ ತರಕಾರಿ ಹಾಗೂ ಕೊತ್ತಂಬರಿ ಮಾರಾಟ ಮಾಡುತ್ತಿದ್ದಾರೆ. ಯಾರೊಂದಿಗೂ ಜಗಳ, ಗಲಾಟೆ ಮಾಡಿಕೊಂಡವರಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ಕೊಲೆ ಜಾಗದಲ್ಲಿ ಆತನ ಮೊಬೈಲ್ ಹಾಗೂ ಹಣ ಕೂಡ ಜೇಬಿನಲ್ಲಿತ್ತು. ಹೀಗಾಗಿ ದುಷ್ಕರ್ಮಿಗಳು ಯಾವ ಕಾರಣಕ್ಕೆ ಕೊಲೆ ಎಸಗಿದ್ದಾರೆ ಎಂಬುದು ಆರೋಪಿಗಳ ಬಂಧನದ ಬಳಿಕ ನಿಖರವಾಗಿ ಗೊತ್ತಾಗಲಿದೆ ಎಂದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಈ ಸಂಬಂಧ ಕೆ.ಆರ್ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.