ಮಕ್ಕಳ ದೌರ್ಜನ್ಯ ತಡೆಗೆ ವಿಶೇಷ ಅಭಿಯಾನ


Team Udayavani, Jul 22, 2017, 11:23 AM IST

siddua.jpg

ಬೆಂಗಳೂರು: “ದೇಶದಲ್ಲಿ ಇಂದಿಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ದೌರ್ಜನ್ಯ, ಮಕ್ಕಳ ನಾಪತ್ತೆ ಹಾಗೂ ಕಳ್ಳ ಸಾಗಣೆ ತಡೆಗೆ ಸದ್ಯದಲ್ಲೇ ವಿಶೇಷ ಅಭಿಯಾನ ಆರಂಭಿಸಲಾಗುವುದು,’ ಎಂದು ನೋಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಕೈಲಾಸ್‌ ಸತ್ಯಾರ್ಥಿ ಹೇಳಿದರು.ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ “ಕೃಷ್ಣಾ’ದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 

“ದೇಶದಲ್ಲಿ ಬಹಳಷ್ಟು ಹೆಣ್ಣು ಮಕ್ಕಳಿಗೆ ಮನೆಯಲ್ಲೇ ಸೂಕ್ತ ರಕ್ಷಣೆಯಿಲ್ಲದಿರುವುದು ನಿಜಕ್ಕೂ ಅವಮಾನಕರ. ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕಿರುಕುಳದ ಬಹಳಷ್ಟು ಪ್ರಕರಣಗಳಲ್ಲಿ ಸಂಬಂಧಿಗಳು, ಪರಿಚಿತರೇ ಕುಕೃತ್ಯ ಎಸಗಿರುತ್ತಾರೆ. ಆದರೆ ಕುಟುಂಬದ ಮರ್ಯಾದೆ, ಸಾಮಾಜಿಕ ಕಾರಣಗಳಿಂದಾಗಿ ಈ ಹೀನ ಕೃತ್ಯಗಳು ತೆರೆಮರೆಯಲ್ಲೇ ಸರಿದು ಹೋಗುತ್ತಿವೆ. ಪರಿಣಾಮವಾಗಿ ಹೆಣ್ಣು ಮಕ್ಕಳಿಗೆ ಮನೆ, ನೆರೆಹೊರೆ, ರಸ್ತೆ, ಶಾಲೆ ಹಾಗೂ ಕೆಲಸ ಮಾಡುವ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣವಿಲ್ಲದಿರುವುದು ದುರದೃಷ್ಟಕರವೆನಿಸಿದೆ,’ ಎಂದು ಹೇಳಿದರು.

“ದಶಕಗಳ ಹಿಂದೆ ಸರ್ಕಾರ ಹಾಗೂ ಯುನಿಸೆಫ್ ಸಿದ್ಧಪಡಿಸಿದ ವರದಿಯಲ್ಲಿ ಶೇ.53ರಷ್ಟು ಮಕ್ಕಳು ಒಂದಲ್ಲಾ ಒಂದು ಬಗೆಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಉಲ್ಲೇಖೀಸಲಾಗಿತ್ತು. ನನ್ನ ಪ್ರಕಾರ ಈ ಪ್ರಮಾಣ ಸದ್ಯ ಇನ್ನಷ್ಟು ಹೆಚ್ಚಾಗಿರಬಹುದು. ಇಂತಹ ಕೃತ್ಯಗಳಿಗೆ ತ್ವರಿತವಾಗಿ ಕಡಿವಾಣ ಹಾಕಬೇಕು. ಮಕ್ಕಳ ಮೇಲೆ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಅವಕಾಶವಿಲ್ಲದಂತೆ ದೇಶದಲ್ಲಿ ಬೃಹತ್‌ ಪ್ರಮಾಣದಲ್ಲಿ ಆಂದೋಲನ ನಡೆಯಬೇಕಿದೆ. ಇದರ ನೇತೃತ್ವವನ್ನು ಯುವಜನತೆಯೇ ವಹಿಸಿಕೊಂಡು ಮಕ್ಕಳ ಮೇಲಿನ ದೌರ್ಜನ್ಯ ತಡೆ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕಿದೆ,’ ಎಂದು ಹೇಳಿದರು.

“ಇನ್ನೊಂದೆಡೆ ಕೆಲ ಮತೀಯ ಶಕ್ತಿಗಳು ಮಕ್ಕಳನ್ನು ಹಿಂಸಾ ಚಟುವಟಿಕೆಗೆ ಬಳಸಿಕೊಳ್ಳುತ್ತಿರುವುದು ದೊಡ್ಡ ಸಮಸ್ಯೆಯಾಗಿ ತಲೆದೋರಿದೆ.  ಇದನ್ನೂ ನಿಯಂತ್ರಿಸಬೇಕಾದ ಅಗತ್ಯವಿದೆ. ನಕ್ಸಲ್‌ ಪೀಡಿತ ಪ್ರದೇಶಗಳು, ಕಾಶ್ಮೀರದಲ್ಲಿ ಯುವಜನತೆಯನ್ನು ಯಾವ ರೀತಿಯಲ್ಲಿ ಹಿಂಸಾಕೃತ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬುದನ್ನು ಕಾಣುತ್ತಿದ್ದೇವೆ,’ ಎಂದು ತಿಳಿಸಿದರು.

“ಇದಕ್ಕೆಲ್ಲಾ ಕಡಿವಾಣ ಹಾಕಿ ಮಕ್ಕಳಿಗೆ ಸುರಕ್ಷಿತ ಹಾಗೂ ಅಹಿಂಸಾತ್ಮಕ ವಾತಾವರಣ ನಿರ್ಮಿಸಬೇಕಿದೆ. ಈ ಕಾರ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಹೊಣೆಗಾರಿಕೆಯಿದ್ದು, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕಿದೆ. ಇಂತಹ ಕೃತ್ಯಗಳ ಸಂಬಂಧ ಪ್ರಕರಣ ದಾಖಲಿಸುವುದು, ತ್ವರಿತ ವಿಚಾರಣೆ ನಡೆಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತಾಗಬೇಕು. ಜತೆಗೆ ಸಾಮಾಜಿಕ ಜಾಗೃತಿ ಹಾಗೂ ಪ್ರಜ್ಞಾವಂತಿಕೆಯನ್ನು ಮೂಡಿಸುವುದು ಮುಖ್ಯವೆನಿಸಿದೆ. ಪ್ರತಿಯೊಬ್ಬರನ್ನು ಜವಾಬ್ದಾರಿಯಿಂದ ಮೇಲ್ವಿಚಾರಣೆ ನಡೆಸುವ ಮೂಲಕ ಅಂತ್ಯ ಹಾಡಬೇಕಿದೆ,’ ಎಂದು ಹೇಳಿದರು.

ಸಿಎಂಗೆ ಅಭಿನಂದನೆ ಸಲ್ಲಿಸಿದ ಸತ್ಯಾರ್ಥಿ: “ಮಕ್ಕಳ ಮೇಲಿನ ದೌರ್ಜನ್ಯ, ನಾಪತ್ತೆ ಹಾಗೂ ಕಳ್ಳ ಸಾಗಣೆ ತಡೆಗಾಗಿ ವಿಶೇಷ ಅಭಿಯಾನವೊಂದನ್ನು ರೂಪಿಸಲಾಗುತ್ತಿದ್ದು, ಸದ್ಯದಲ್ಲೇ ಅದಕ್ಕೆ ಚಾಲನೆ ನೀಡಲಾಗುವುದು. ಅದೇ ರೀತಿ ಕೆಲ ಹೊಸ ಯೋಜನೆಗಳನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಯಿತು. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರ ಸ್ಪಂದನೆಗೆ ಅಭಿನಂದನೆ ಸಲ್ಲಿಸುತ್ತೇನೆ,’ ಎಂದು ಹೇಳಿದರು.

ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಅಗತ್ಯತೆಯು ದೇಶದ ಸಮಸ್ಯೆ ಮಾತ್ರವಾಗಿರದೆ ಜಾಗತಿಕ ವಿಚಾರವಾಗಿದೆ. ಈ ಬಗ್ಗೆ ಗಂಭೀರ ಪ್ರಯತ್ನ ನಡೆಯಬೇಕಿದೆ. ಭಾರತ ಸೇರಿದಂತೆ ಜಗತ್ತಿನಾದ್ಯಂತ ನೂರಾರು ಕೋಟಿ ಮಕ್ಕಳಿಗೆ ಇಂದಿಗೂ ಸೂಕ್ತ ರಕ್ಷಣೆ ಇಲ್ಲ. ಜತೆಗೆ ಶಿಕ್ಷಣ, ಪೋಷಣೆ, ಸುರಕ್ಷತೆ ಹಾಗೂ ಸ್ವಾತಂತ್ರ್ಯವನ್ನು ಕಲ್ಪಿಸಬೇಕಾದ ಅಗತ್ಯವಿದ್ದು, ಅದನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು.
-ಕೈಲಾಸ್‌ ಸತ್ಯಾರ್ಥಿ, ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ 

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.