ಗ್ರಾಪಂಗಳಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ​​​​​​​

Team Udayavani, Nov 6, 2018, 6:30 AM IST

rights-grapam.jpg

ಬೆಂಗಳೂರು: ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ “ಸ್ಥಳೀಯ ಸರ್ಕಾರಗಳು’ ಆಗಿರುವ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಅವರ ಸುರಕ್ಷತೆಗೆ ಹೆಚ್ಚು ಆದ್ಯತೆ ಸಿಗಬೇಕೆಂಬ ಉದ್ದೇಶದಿಂದ ನವೆಂಬರ್‌ ತಿಂಗಳಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ “ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ’ಗಳನ್ನು ಕಡ್ಡಾಯವಾಗಿ ನಡೆಸಲು ಒತ್ತು ನೀಡಲಾಗಿದೆ.

ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಗಳು ಕೇವಲ ನಾಮಕಾವಾಸ್ತೆ ಆಗದೆ, ಅವುಗಳು ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ರಕ್ಷಣೆಯ ಸಮಗ್ರ ಕಾರ್ಯಸೂಚಿ ಆಗಬೇಕು ಎಂಬ ಹಿನ್ನೆಲೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣ ರೀತಿಯಲ್ಲಿ ಏರ್ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ  ಇಲಾಖೆ ತಾಕೀತು ಮಾಡಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಲು “ಗ್ರಾಮ ಸಭೆ’ಗಳನ್ನು ನಡೆಸಲಾಗುತ್ತದೆ. ಈ ಗ್ರಾಮ ಸಭೆಗಳಲ್ಲಿ ಕೈಗೊಳ್ಳುವ ತೀರ್ಮಾನಗಳೇ ಅಂತಿಮ. ಹೀಗಿರುವಾಗ ಜನಸಂಖ್ಯೆಯ ಅರ್ಧ ದಷ್ಟಿರುವ ಮಹಿಳೆಯ ಹಕ್ಕುಗಳ ಬಗ್ಗೆ ವಿಶೇಷ ಗ್ರಾಮ ಸಭೆಗಳನ್ನು ನಡೆಸಲಾಗುತ್ತದೆ. ಅದೇ ಮಾದರಿಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ದೃಷ್ಟಿಯಿಂದ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ನಡೆಸುವ ಪದ್ದತಿಯನ್ನು ಗ್ರಾಪಂಗಳಲ್ಲಿ ಅನುಸರಿಸಲಾಗುತ್ತಿದೆ.

ಮಕ್ಕಳ ಉಳಿವು, ರಕ್ಷಣೆ, ಅಭಿವೃದ್ಧಿಯ ದೃಷ್ಟಿಯಿಂದ ಹಕ್ಕುಗಳನ್ನು ಜಾರಿಗೊಳಿಸುವಲ್ಲಿ ಗಾಪಂ ಪಾತ್ರ ಮಹತ್ತರವಾಗಿದೆ. ಗ್ರಾಮ ಪಂಚಾಯಿತಿಗಳು ನಡೆಸುವ ಗ್ರಾಮ ಸಭೆಗಳಲ್ಲಿ ಮಕ್ಕಳ ಸ್ಥಿತಿಗತಿ, ಅವರ ಅಭಿವೃದ್ಧಿ, ಸಂವಿಧಾನಾತ್ಮಕವಾಗಿ ಒದಗಿಸಿರುವ ಹಕ್ಕುಗಳ ಪಂಚಾಯಿತಿಗಳು ವಿಶೇಷವಾಗಿ ಚರ್ಚಿಸಿ,ಗ್ರಾಮಸ್ಥರಿಗೆ ಅವರ ಜವಾಬ್ದಾರಿಯನ್ನು ತಿಳಿಸುವ ಗುರುತರ ಹೊಣೆಗಾರಿಕೆ ಗ್ರಾ.ಪಂ ಗಳ ಮೇಲಿರುತ್ತದೆ. ಆದ್ದರಿಂದ ನವೆಂಬರ್‌ ತಿಂಗಳಲ್ಲಿ ಆಚರಿಸಲಾಗುವ “ಮಕ್ಕಳ ದಿನಾಚರಣೆ’ಸಂದರ್ಭವನ್ನು ಬಳಸಿಕೊಂಡು ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ಏರ್ಪಡಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಠಿಕ ಆಹಾರ ಒದಗಿಸುವುದು, ಮಕ್ಕಳ ಬೌದಿಟಛಿಕ ಬೆಳವಣಿಗೆಗೆ ಆಟಪಾಠಗಳ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ರೂಪಿಸುವುದು, ಪ್ರತಿ 3ರಿಂದ 6 ವರ್ಷದ ಎಲ್ಲ ಮಕ್ಕಳು ಅಂಗನವಾಡಿ ಹಾಗೂ ಶಾಲೆಗಳಲ್ಲಿ ದಾಖಲಾಗಿ ಶಿಕ್ಷಣ ಆರಂಭಿಸುವುದು,ಜೀತ ಪದ್ದತಿ ಹಾಗೂ ಕೃಷಿ ಕಾರ್ಮಿಕ ವೃತ್ತಿಯಲ್ಲಿ ಮಕ್ಕಳನ್ನು ತೊಡಗಿಸುವವರ ವಿರುದಟಛಿ ಜಾಗೃತಿ ಮೂಡಿಸುವುದು, ಹೆಣ್ಣು ಮಕ್ಕಳ ಪೋಷಣೆ ಮತ್ತು ರಕ್ಷಣೆ, ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು, ಮಕ್ಕಳ ಸಾಗಾಣಿಕೆ ನಿಷೇಧ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಅರಿವು ಮೂಡಿಸುವುದು, ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಕುರಿತು ಜಾಗೃತಿ ಮೂಡಿಸುವ ವಿಷಯಗಳ ಬಗ್ಗೆ ಈ ಮಕ್ಕಳ ವಿಶೇಷ ಗ್ರಾಮಸಭೆಗಳಲ್ಲಿ ಚರ್ಚೆ ನಡೆಯಬೇಕು.

ಇದಲ್ಲದೆ, ಮಕ್ಕಳಿಗಾಗಿ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ, ಗ್ರಾಮಸ್ಥರು, ಪೋಷಕರಿಗೆ ಹೆಚ್ಚಿನ ತಿಳುವಳಿಕೆ ನೀಡುವುದು. ಈ ಮಕ್ಕಳ ವಿಶೇಷ ಗ್ರಾಮ ಸಭೆಗಳಿಗೆ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳು, ಪೋಷಕರು,ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರು, ಆರೋಗ್ಯ, ಶಿಕ್ಷಣ, ಕಾರ್ಮಿಕ, ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ,ಪೊಲೀಸ್‌ ಇಲಾಖೆಯ ಅಧಿಕಾರಿಗಳು ಸೇರಿ ಮಕ್ಕಳು ಹಕ್ಕುಗಳ ಆಯೋಗ, ಬಾಲ ನ್ಯಾಯಮಂಡಳಿ, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಎಲ್ಲ ಜಿಪಂ ಸಿಇಒ ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿನ ತಾ.ಪಂ. ಇಒ, ಪಿಡಿಓ ಮತ್ತು ಕಾರ್ಯದರ್ಶಿಗಳಿ ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ಖಾತರಿ ಗೊಳಿಸಬೇಕು ಇಲಾಖೆಯ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

ಮಕ್ಕಳ ವಿಶೇಷ ಗ್ರಾಮ ಸಭೆಗಳನ್ನು ನಡೆಸುವುದು ಕಡ್ಡಾಯ. ಆದರೆ,ಎಲ್ಲರಿಗೂ ಒಂದೇ ದಿನಾಂಕ ಕೊಟ್ಟಿಲ್ಲ. ಮಕ್ಕಳ ದಿನಾಚರಣೆಯಾದ ನವೆಂಬರ್‌ 14ರ ಆಸುಪಾಸಿನಲ್ಲಿ ಈ ಸಭೆಗಳನ್ನು ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಬಾರಿಯ ಮಕ್ಕಳ ವಿಶೇಷ ಗ್ರಾಮ ಸಭೆಗಳ ಬಗ್ಗೆ ಹೆಚ್ಚಿನ ಒತ್ತು ಕೊಡಲಾಗಿದೆ’.
– ಎಂ.ಕೆ. ಕೆಂಪೇಗೌಡ, ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಇಲಾಖೆ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.