ವೆಂಕಟರಮಣನಿಗೆ ವಿಶೇಷ ಪೂಜೆ
Team Udayavani, Dec 19, 2018, 12:25 PM IST
ಕೆ.ಆರ್.ಪುರ: ವೈಕುಂಠ ಏಕಾದಶಿ ಪ್ರಯುಕ್ತ ಕೆ.ಆರ್.ಪುರದ ವಿವಿಧಡೆ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೆ ವಿಶೇಷ ಪೂಜೆ ಕೈಂಕರ್ಯಗಳು ನೇರವೆರಿದವು. ದೇಗುಲಕ್ಕೆ ಬೆಳಗಿನ ಚಳಿಯನ್ನು ಲೆಕ್ಕಿಸದೆ ನಾನಾ ಕಡೆಗಳಿಂದ ಭಕ್ತ ಸಾಗರ ಹರಿದುಬಂದಿತ್ತು.
ಇಲ್ಲಿನ ಚೋಳರ ಕಾಲದಲ್ಲಿ ನಿರ್ಮಾಣವಾಗಿರುವ ಇತಿಹಾಸ ಪ್ರಸಿದ್ಧ ಶ್ರೀಕೋಟೆ ವೆಂಕಟರಮಣಸ್ವಾಮಿ ಹಾಗೂ ನೂರಾರು ವರ್ಷಗಳ ಇತಿಹಾಸ ಹೊಂದಿರುವ ರಾಮಮೂರ್ತಿನಗರದ ಲಕ್ಷ್ಮೀವೆಂಕಟೇಶ್ವರ ದೇವಸ್ಥಾಗಳಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ದೇವರಿಗೆ ಮುಂಜಾನೆಯೇ ವಿಶೇಷ ಪೂಜೆ, ಪಂಚಾಮೃತಾಭಿಷೇಕ, ಹೂವಿನ ಅಲಂಕಾರ, ದೇವರಿಗೆ ಕವಚಧಾರಣೆ, ಅಷ್ಟಾವಧಾನ ಸೇವೆ, ಶಾತ್ತುಮೊರೆ,ಮಹಾ ಮಂಗಳಾರತಿ ನಡೆಸಲಾಯಿತು.
ಶ್ರೀಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಎಲ್. ಮುನಿಸ್ವಾಮಿ ಮಾತನಾಡಿ, ವೈಕುಂಠ ಏಕಾದಶಿ ಪ್ರಯುಕ್ತ ಮಹಾವಿಷ್ಣು ಉತ್ತರ ದ್ವಾರದ ಮೂಲಕ ಮುಕ್ಕೊಟಿ ದೇವತೆಗಳಿಗೆ ದರ್ಶನ ನೀಡುತ್ತಾನೆ ಎನ್ನುವ ನಂಬಿಕೆ ಇದೆ. ವೈಕುಂಠ ಬಾಗಿಲನ್ನು ಸ್ವರ್ಗದ ಬಾಗಿಲು ಎಂದು ಕರೆಯಲಾಗುತ್ತದೆ ಆದ್ದರಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾದ ಏಳು ಮಹಾದ್ವಾರಗಳ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ವಿವಿಧ ಕಡೆಗಳಿಂದ ದೇಗುಲಕ್ಕೆ ಆಗಮಿಸಿದ್ಧ ಭಕ್ತರು ಭಕ್ತರು ಸರತಿಯಲ್ಲಿ ನಿಂತು ದೇವರ ದರ್ಶನ ಪಡೆದರು. ಭಕ್ತಾದಿಗಳಿಗೆ ಮಜ್ಜಿಗೆ, ಪಾನಕ ಹಾಗೂ ಲಾಡುಗಳನ್ನು ವಿತರಿಸಲಾಯಿತು. ಕೀರ್ತನೆ, ಭಜನೆ ಸೇರಿದಂತೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.