ಪ್ರತ್ಯೇಕ ಧರ್ಮ ಸಮಿತಿಗೆ 2 ತಿಂಗಳಲ್ಲಿ 36 ಲಕ್ಷ ಖರ್ಚು
Team Udayavani, Jan 29, 2019, 12:55 AM IST
ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ನೀಡುವ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ರಚಿಸಿದ್ದ ಸಮಿತಿಗೆ ಎರಡು ತಿಂಗಳಿಗೆ ಬರೋಬ್ಬರಿ 36 ಲಕ್ಷ ರೂ. ವೆಚ್ಚ ಮಾಡಲಾಗಿದೆ.
ವೀರಶೈವ ಮತ್ತು ಲಿಂಗಾಯತ ಎರಡೂ ಪ್ರತ್ಯೇಕ ಎಂಬ ಹೋರಾಟ ಆರಂಭಿಸಿದ್ದ ಕೆಲವು ಮಠಾಧೀಶರು ಹಾಗೂ ರಾಜಕೀಯ ನಾಯಕರು ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರ ಮೇಲೆ ಒತ್ತಡ ಹೇರಿದ್ದರು.
ಈ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದಿದ್ದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಮೂಲಕ ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಒಂಭತ್ತು ಜನರ ಸಮಿತಿ ರಚಿಸಿ ವೀರಶೈವ ಲಿಂಗಾಯತರ ನಡುವಿನ ವ್ಯತ್ಯಾಸ ಹಾಗೂ ಲಿಂಗಾಯತ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ನೀಡುವ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು.
ತಜ್ಞರ ಸಮಿತಿ 2017 ಡಿ. 22ರಿಂದ ಕಾರ್ಯ ಆರಂಭಿಸಿ 2018ರ ಮಾ.1ರ ವರೆಗೂ ಕಾರ್ಯ ನಿರ್ವಹಿಸಿತ್ತು. ಎರಡು ತಿಂಗಳು ಹತ್ತು ದಿನ ಕಾರ್ಯ ನಿರ್ವಹಿಸಿರುವ ತಜ್ಞರ ಸಮಿತಿ ಒಟ್ಟು 36 ಲಕ್ಷ 5,161 ರೂ. ವೆಚ್ಚ ಮಾಡಿದ್ದು ಅಲ್ಪ ಸಂಖ್ಯಾತರ ಆಯೋಗ ಮೂಲಕ ರಾಜ್ಯ ಸರ್ಕಾರ ತಜ್ಞರ ಸಮಿತಿಗೆ ಮಾಡಿರುವ ವೆಚ್ಚದ ಮಾಹಿತಿಯನ್ನು ಅಖೀಲ ಭಾರತ ವೀರಶೈವ ಲಿಂಗಾಯತ ಸಮನ್ವಯ ಸಮಿತಿ ಪಡೆದಿದ್ದು ‘ಉದಯವಾಣಿ’ಗೆ ಲಭ್ಯವಾಗಿದೆ.
ತಜ್ಞರ ಸಮಿತಿ ಸಭೆ ಹಾಗೂ ಮಾಹಿತಿ ಸಂಗ್ರಹಕ್ಕೆ ವೆಚ್ಚ ಮಾಡಿರುವುದಕ್ಕಿಂತ ಅವರ ಸಂಭಾವನೆಗೆ ಹೆಚ್ಚಿನ ಹಣ ಖರ್ಚು ಮಾಡಿರುವುದು ಬೆಳಕಿಗೆ ಬಂದಿದೆ. ಸಭೆ, ಜಾಹೀರಾತು, ಸದಸ್ಯರ ವಾಸ್ತವ್ಯದ ವೆಚ್ಚ, ಪ್ರಯಾಣ ಭತ್ಯೆ, ಅನುವಾದ ಸೇರಿ 5.75 ಲಕ್ಷ ವೆಚ್ಚವಾಗಿದ್ದು, ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರ ಸಂಭಾವನೆ 30.30ಲಕ್ಷ ರೂ. ನೀಡಲಾಗಿದೆ.
ಶಿಫಾರಸು ತಿರಸ್ಕೃತ: ತಜ್ಞರ ಸಮಿತಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಶಿಫಾರಸು ಮಾಡಿ ಆಯೋಗಕ್ಕೆ ವರದಿ ಸಲ್ಲಿಸಿತ್ತು. ಆಯೋಗದ ವರದಿ ಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ರಾಜ್ಯ ಸರ್ಕಾರದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ರಾಜ್ಯ ಸರ್ಕಾರ ಜನರ ದುಡ್ಡಿನಲ್ಲಿ ದುಂದು ವೆಚ್ಚ ಮಾಡಿದ್ದು, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಪ್ರಯತ್ನ ಮಾಡಿದೆ. ಚುನಾವಣೆ ದೃಷ್ಟಿಯಿಂದ ಜನರ ಭಾವನೆಗಳನ್ನು ಧಕ್ಕೆ ಉಂಟುಮಾಡಿದ್ದು, ಸಾರ್ವಜನಿಕರ ಹಣವನ್ನು ಪೋಲು ಮಾಡಿರುವುದು ಖಂಡನೀಯ.
– ಪ್ರಸಾದ್ ಸಿರಿಮನೆ,
ಆರ್‌ಟಿಐ ಮೂಲಕ ಮಾಹಿತಿ ಪಡೆದವರು.
ಸರ್ಕಾರ ಧರ್ಮ ಒಡೆಯಲು ಸಮಿತಿ ರಚನೆ ಮಾಡಿದಾಗಲೇ ನಾವು ನ್ಯಾ.ನಾಗಮೋಹನ್ ದಾಸ್ ಅವರ ಎದುರು ಹಾಜರಾಗಿ ಸಮಿತಿಗೆ ರಾಜೀನಾಮೆ ನೀಡುವಂತೆ ಮನವಿ ಮಾಡಿದ್ದೆವು. ಅವರು ಚುನಾವಣೆ ದೃಷ್ಟಿಯಿಂದ ಎರಡು ತಿಂಗಳಲ್ಲಿ ತರಾತುರಿಯಲ್ಲಿ ವರದಿ ನೀಡಿ, ಹಣ ಪೋಲು ಮಾಡಿದ್ದಾರೆ.
– ವರದಾನಿ ವೀರಭದ್ರಪ್ಪ,
ವೀರಶೈವ ಲಿಂಗಾಯತ ಸಮನ್ವಯ ಸಮಿತಿ ಅಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ವಾಡಿ ಬಂದ್ ನಡೆಸಿ ಪ್ರತಿಭಟನೆ
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.