ಕೃಷ್ಣಮಠದಲ್ಲಿ ಇಫ್ತಾರ್ ಕೂಟ ರಾಜ್ಯದ ಹಲವೆಡೆ ಪ್ರತಿಭಟನೆ
Team Udayavani, Jul 3, 2017, 3:45 AM IST
ಬೆಂಗಳೂರು: ಉಡುಪಿಯ ಕೃಷ್ಣಮಠ ಸೇರಿ ಯಾವುದೇ ದೇವಸ್ಥಾನದಲ್ಲಿ ಇನ್ನು ಮುಂದೆ ಇಫ್ತಾರ್ ಕೂಟಕ್ಕೆ ಅವಕಾಶ ನೀಡುವುದಿಲ್ಲ. ರಕ್ತಪಾತದ ಮೂಲಕವಾದರೂ ಅದನ್ನು ತಡೆಯುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ
ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಪರ್ಯಾಯ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಶ್ರೀಕೃಷ್ಣ ಮಠದ ವ್ಯಾಪ್ತಿಯಲ್ಲಿ ನಡೆಸಿದ ಇಫ್ತಾರ್ ಖಂಡಿಸಿ ರಾಜ್ಯಾದ್ಯಂತ ಭಾನುವಾರ ಶ್ರೀರಾಮಸೇನೆ ಹಾಗೂ ಇತರ ಹಿಂದೂಪರ ಸಂಘಟನೆಗಳ ವತಿಯಿಂದ ಪ್ರತಿಭಟನೆಗಳು ನಡೆದವು. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮುತಾಲಿಕ್, ನಮ್ಮ ರಕ್ತ ಹರಿದರೂ ಚಿಂತೆಯಿಲ್ಲ. ಉಡುಪಿ ಕೃಷ್ಣಮಠ ಸೇರಿ ಯಾವುದೇ ದೇವಸ್ಥಾನಗಳಲ್ಲಿ ಇಫ್ತಾರ್ ಕೂಟ ನಡೆಸಲು ಅವಕಾಶ ನೀಡುವುದಿಲ್ಲ. ಪೇಜಾವರ ಶ್ರೀಗಳ ವಿರುದ್ಧ ನಮ್ಮ ಹೋರಾಟವಲ್ಲ. ಬದಲಾಗಿ ಕೃಷ್ಣಮಠದ ಒಳಗೆ ಇಫ್ತಾರ್ ಕೂಟ ನಡೆಸಿರುವುದರ ವಿರುದ್ಧ ನಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದೇವೆ. ಈ ವಿಚಾರದಲ್ಲಿ ಪೇಜಾವರ ಸ್ವಾಮಿಗಳ ನಡೆಗೆ ನಮ್ಮ ಆಕ್ಷೇಪವಿದೆ. ಮಠ ಹಾಗೂ ದೇವಸ್ಥಾನಗಳಲ್ಲಿ ಇಫ್ತಾರ್ ಕೂಟ ಆಯೋಜನೆಯಿಂದ ಹಿಂದೂ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದರು.
ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಮಹೇಶ್‌ಕುಮಾರ್ ನೇತೃತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಮಹೇಶ್‌ಕುಮಾರ್, ಮಠದೊಳಗೆ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿರುವುದು ತಪ್ಪು. ಕೂಡಲೇ ಶ್ರೀಗಳು ಹಿಂದೂಗಳ ಕ್ಷಮೆಯಾಚಿಸಬೇಕು. ಅವರು ಕ್ಷಮೆಯಾಚಿಸುವವರೆಗೂ ಶ್ರೀರಾಮಸೇನೆ ಹೋರಾಟ ಮುಂದುವರಿಸುತ್ತದೆ ಎಂದು ಕಿಡಿ ಕಾರಿದರು.
ಉಡುಪಿ, ಯಾದಗಿರಿಯಲ್ಲಿ ಶ್ರೀರಾಮ ಸೇನೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಒಂದು ಗಂಟೆ ಕಾಲ ಭಜನೆ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರೆ, ಶಿವಮೊಗ್ಗದಲ್ಲಿ ಕೃಷ್ಣನ ಫೋಟೊಕ್ಕೆ ಪೂಜೆ ಸಲ್ಲಿಸಿ
ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ, ಹುಬ್ಬಳ್ಳಿ, ಮಂಗಳೂರು,ಮೈಸೂರು, ವಿಜಯಪುರ, ಬಾಗಲಕೋಟೆ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.