ಶ್ರೀನಿವಾಸ ಪೂಜಾರಿ ಪರಿಷತ್ ಪ್ರತಿಪಕ್ಷ ನಾಯಕ
Team Udayavani, Jun 30, 2018, 6:05 AM IST
ಬೆಂಗಳೂರು: ರಾಜ್ಯ ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕರಾಗಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆವರನ್ನು ನೇಮಿಸಲು ಬಿಜೆಪಿ ಕೋರ್ ಕಮಿಟಿ ತೀರ್ಮಾನಿಸಿದೆ.
ಶುಕ್ರವಾರ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲು ನಿರ್ಧರಿಸಲಾಯಿತು.
ಪ್ರತಿಪಕ್ಷದ ಸಚೇತಕರಾಗಿ ಬೆಳಗಾವಿಯ ಮಹಂತೇಶ ಕವಟಗಿ ಮಠ ಅವರನ್ನು ನೇಮಿಸಲು ಸಹ ಕೋರ್ ಕಮಿಟಿ ತೀರ್ಮಾನಿಸಿತು.
ಸದ್ಯದಲ್ಲೇ ಬರಬಹುದಾದ ಮೂರು ಕ್ಷೇತ್ರಗಳ ಲೋಕಸಭೆ ಉಪ ಚುನಾವಣೆಗೆ, ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆ, ರಾಜ್ಯ ಸರ್ಕಾರ ದ ವೈಫಲ್ಯಗಳ ವಿರುದಟಛಿ ಜನಜಾಗೃತಿ, ವಿಧಾನಮಂಡಲ ಅಧಿವೇಶನದಲ್ಲಿ ಸಮ್ಮಿಶ್ರ ಸರ್ಕಾರದ ವಿರುದಟಛಿ ಎರಡೂ ಸದನಗಳಲ್ಲಿ ಸಂಘಟಿತವಾಗಿ ಕಾರ್ಯನಿ ರ್ವಹಿಸಲು ಕಾರ್ಯತಂತ್ರಗಳ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಲಾಗಿದೆ.
ಮೇಲ್ಮನೆಗೆ ಮೂರನೇ ಬಾರಿ ಆಯ್ಕೆ
ಕೋಟಾ ಶ್ರೀನಿವಾಸ ಪೂಜಾರಿ ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಮೂರನೇ ಬಾರಿ ಆಯ್ಕೆಯಾಗಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮುಜರಾಯಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಅರುಣ್ ಶಹಾಪುರ ಅವರು ಆಕಾಂಕ್ಷಿಯಾಗಿದ್ದರಾದರೂ ಕೋರ್ ಕಮಿಟಿ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಅವಕಾಶ ಕೊಡಲು ತೀರ್ಮಾನಿಸಲಾಯಿತು. ಸಂಸದೆ ಶೋಭಾ ಕರಂದ್ಲಾಜೆ ಆವರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಪ್ರತಿಪಕ್ಷ ನಾಯಕಿ ಮಾಡುವ ಮಾತುಗಳು ಕೇಳಿ ಬಂದಿದ್ದವಾದರೂ ಶೋಭಾ ಕರಂದ್ಲಾಜೆ ಅವರು ಆ ಬಗ್ಗೆ ಆಸಕ್ತಿ ತೋರಲಿಲ್ಲ ಎಂದು ಹೇಳಲಾಗಿದೆ.
ಬಿಜೆಪಿ ನಾಯಕರು ಯಾರೂ ಸಮ್ಮಿಶ್ರ ಸರ್ಕಾರ ಬಿಜೆಪಿಯ ನಿಲುವು ಕುರಿತು ಬಹಿರಂಗವಾಗಿ ಹೇಳಿಕೆ ಕೊಡಬಾರದು.
ಗೊಂದಲ ಮೂಡಿಸುವಂತ ಹೇಳಿಕೆಗಳಿಗೆ ಕಡಿವಾಣ ಹಾಕಿಕೊಳ್ಳಿ.ನಾವು ಪ್ರತಿ ಹೆಜ್ಜೆಯನ್ನೂ ಸೂಕ್ಷ್ಮವಾಗಿ ಇಡಬೇಕಾಗಿದೆ. ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವಾಗ ಆದಷ್ಟೂ ಜಾಗರೂಕತೆ ವಹಿಸಿ.
– ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.