ಕ್ರೀಡಾಂಗಣಗಳು ಬಳಕೆಯಾಗಲಿ: ಮೇಯರ್
Team Udayavani, Feb 5, 2019, 6:23 AM IST
ಬೆಂಗಳೂರು: ಬಿಬಿಎಂಪಿ ವತಿಯಿಂದ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ವ್ಯಾಯಾಮ ಶಾಲೆಯನ್ನು ಯುವಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮೇಯರ್ ಗಂಗಾಂಬಿಕೆ ಮನವಿ ಮಾಡಿದರು.
ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ವಾಲಿಬಾಲ್ ಒಳಾಂಗಣ ಕ್ರೀಡಾಂಗಣ, ಗ್ರೀನ್ ರೂಂ ಹಾಗೂ ಶೆಟಲ್ ಕೋರ್ಟ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸುಸಜ್ಜಿತ ಒಳಾಂಗಣ ವ್ಯಾಯಾಮ ಶಾಲೆ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಒಳಾಂಗಣ ಕ್ರೀಡಾಂಗಣ ಬಹಳ ಕಡಿಮೆಯಿವೆ. ಇದೀಗ ಪಾಲಿಕೆಯಿಂದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಕ್ರೀಡಾಸಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡಾಕೂಟಗಳನ್ನು ತಯಾರಿ ಮಾಡುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಬಿಎಂಪಿ ಮತ್ತು ಸರ್ಕಾರದಿಂದ ಆರೋಗ್ಯ ರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಖಾಸಗಿ ವಲಯದ ವ್ಯಾಯಾಮ ಶಾಲೆಗಳು ಸಾಮಾನ್ಯ ಜನರಿಗೆ ದುಬಾರಿಯಾಗಿದೆ. ಆ ಹಿನ್ನೆಲೆಯಲ್ಲಿ ಜನರಿಗೆ ಕೈಗೆಟುಕುವ ದರದಲ್ಲಿ ವ್ಯಾಯಾಮ ಶಾಲೆ ಸೌಲಭ್ಯ ಕಲ್ಪಿಸುತ್ತಿದ್ದು, ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಶಾಸಕಿ ಸೌಮ್ಯರೆಡ್ಡಿ, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಅದರಂತೆ ಉಳಿದ ಕ್ಷೇತ್ರಗಳಲ್ಲಿಯೂ ಇದೇ ಮಾದರಿಯಲ್ಲಿ ಕ್ರೀಡೆಗಳಿಗೆ ಒತ್ತು ನೀಡಬೇಕಿದೆ. ಜನರ ಸಹಭಾಗಿತ್ವ ಇಲ್ಲದೆ ಯಾವುದೇ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಯುವ ಕ್ರೀಡಾಪಟುಗಳು ಕ್ರೀಡಾಂಗಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡುವ ಮೂಲಕ ನಗರಕ್ಕೆ ಕೀರ್ತಿ ತರಬೇಕಿದೆ. ಈ ಕ್ರೀಡಾಂಗಣದಲ್ಲಿ ಪ್ರತಿಯೊಂದು ಕ್ರೀಡಾ ಚಟುವಟಿಕೆಗಳಿಗೆ ಅಕವಾಶವಿದ್ದು, ಒಂದು ಕೋಟಿ ರೂ. ವೆಚ್ಚದಲ್ಲಿ ವ್ಯಾಯಾಮ ಶಾಲೆ ನಿರ್ಮಿಸಿ, ತರಬೇತುದಾರರನ್ನು ನೇಮಿಸಲಾಗಿದೆ.
-ಎನ್.ನಾಗರಾಜು, ಬೈರಸಂದ್ರ ವಾರ್ಡ್ ಪಾಲಿಕೆ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.