ಮಂತ್ರಿಮಾಲ್‌ ಆರಂಭ

Team Udayavani, Feb 26, 2017, 12:13 PM IST

mantri-mal;l.jpg

ಬೆಂಗಳೂರು: ಗೋಡೆ ಕುಸಿತದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ “ಮಂತ್ರಿ ಸ್ಕ್ವೇರ್‌’ ವಾಣಿಜ್ಯ ಕಟ್ಟಡಕ್ಕೆ ಬಿಬಿಎಂಪಿ ಕೊನೆಗೂ ಗ್ರೀನ್‌ ಸಿಗ್ನಲ್‌ ನೀಡಿದೆ. ಶನಿವಾರ ಸಂಜೆಯಿಂದಲೇ ಮಾಲ್‌ ಪುನಾರಂಭಗೊಂಡಿದೆ. 

ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ ಸ್ಕ್ವೇರ್‌ ಕಟ್ಟಡದ ಗೋಡೆ ಕುಸಿತದ ಹಿನ್ನೆಲೆಯಲ್ಲಿ ಕಟ್ಟಡಕ್ಕೆ ನೀಡಿದ್ದ ಸ್ವಾಧೀನಾನುಭವ ಪತ್ರವನ್ನು ಬಿಬಿಎಂಪಿ ತಾತ್ಕಾಲಿಕವಾಗಿ ಹಿಂಪಡೆದಿತ್ತು. ನಂತರ ತಜ್ಞರ ಸಮಿತಿ ಕಟ್ಟಡದ ಸಮಗ್ರ ಪರಿಶೀಲನೆ ನಡೆಸಿತ್ತು. ಸಮಿತಿಯ ಅಂತಿಮ ವರದಿ ಬಿಬಿಎಂಪಿ ಕೈ ಸೇರಿದೆ. ಅದರಂತೆ ಮಂತ್ರಿ ಸ್ಕ್ವೇರ್‌ಗೆ ಷರತ್ತುಬದ್ಧ ಸ್ವಾಧೀನಾನುಭವ ಪ್ರಮಾಣಪತ್ರ ನೀಡಿ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಶನಿವಾರ ಆದೇಶ ಹೊರಡಿಸಿದ್ದಾರೆ. 

ಜನವರಿ 16ರಂದು ಮಂತ್ರಿಸ್ಕ್ವೇರ್‌ ಕಟ್ಟಡದ ಮೊದಲ ಮತ್ತು ಮೂರನೇ ಮಹಡಿಯ ಹಿಂಭಾಗದಲ್ಲಿರುವ ಗೋಡೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯು ಕಟ್ಟಡದಲ್ಲಿ ದೋಷ ಇರುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಕೆಎಂಸಿ ಕಾಯ್ದೆ ಕಲಂ 309ರ ಅನ್ವಯ ಸ್ವಾಧೀನಾನುಭವ ಪ್ರಮಾಣಪತ್ರವನ್ನು ತಾತ್ಕಾಲಿಕವಾಗಿ ಹಿಂಪಡೆದಿತ್ತು. 

ಷರತ್ತುಗಳೇನು?
* ಅವಘಡಕ್ಕೆ ತುತ್ತಾದ ಭಾಗವನ್ನು ತಜ್ಞರ ಮೇಲ್ವಿಚಾರಣೆಯಲ್ಲೇ ದುರಸ್ತಿಗೊಳಿಸಬೇಕು.
* ಅವಘಡ ಸಂಭವಿಸಿದ ಭಾಗ ಸಂಪೂರ್ಣ ದುರಸ್ತಿಯಾಗುವವರೆಗೂ ಕಟ್ಟಡದ ಮೂರನೇ ಮಹಡಿಯ ಬಾಗಿಲನ್ನು ಮುಚ್ಚಬೇಕು. 
* ಪ್ರತಿ ವರ್ಷ ಕಟ್ಟಡದ ನಿರ್ವಹಣೆ (ಮೆಂಟೇನನ್ಸ್‌) ಮಾಡಬೇಕು ಮತ್ತು ನಿರ್ವಹಣೆ ನಡೆಸಿದ ಬಗ್ಗೆ ಬಿಬಿಎಂಪಿಗೆ ವರದಿ ನೀಡಬೇಕು. 
* ಅಗ್ನಿಶಾಮಕ ಯಂತ್ರಗಳು, ತುರ್ತು ನಿರ್ಗಮನ ದ್ವಾರಗಳನ್ನು ಕಟ್ಟಡ ಹೊಂದಿರಬೇಕು. 
* ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ನಿರಾಕ್ಷೇಪಣೆ ಪತ್ರ ಪಡೆದಿರಬೇಕು. ಅದರ ಪ್ರತಿಯೊಂದನ್ನು ಪಾಲಿಕೆಗೆ ಕೊಡಬೇಕು. 
* ಕಟ್ಟಡದ ಸದೃಢತೆ ಬಗ್ಗೆ ತಜ್ಞರಿಂದ ಆಗಾಗ್ಗೆ ಪರಿಶೀಲನೆ ನಡೆಸಬೇಕು ಹಾಗೂ ಅದರ ವರದಿಯನ್ನು ಬಿಬಿಎಂಪಿಗೆ ನೀಡಬೇಕು.
* ನೀರು ಸರಬರಾಜು ಪೈಪ್‌ಗ್ಳು, ಚರಂಡಿ ಪೈಪ್‌ಗ್ಳು, ಎಸಿ ಯಂತ್ರಗಳು ಸುಸ್ಥಿತಿಯಲ್ಲಿರುವುದನ್ನು ಕಾಲ ಕಾಲಕ್ಕೆ ದೃಢಪಡಿಸಿಕೊಳ್ಳಬೇಕು. ಈ ಬಗ್ಗೆ ಬಿಬಿಎಂಪಿಗೆ ವರದಿ ನೀಡಬೇಕು. 
* ವಾಹನಗಳ ನಿಲುಗಡೆ ಜಾಗವನ್ನು ಬಿಬಿಎಂಪಿ ಯಾವ ಉದ್ದೇಶಕ್ಕೆ ಸ್ವಾಧೀನಾನುಭವ ಪತ್ರ ನೀಡಿದೆಯೋ ಅದಕ್ಕೆ ಮಾತ್ರ ಬಳಸಬೇಕು. 

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.