ನ್ಯಾನೋ ಸಂಶೋಧನಾ ಕೇಂದ್ರ ಆರಂಭಿಸಿ
Team Udayavani, Jan 28, 2019, 6:35 AM IST
ಬೆಂಗಳೂರು: ದೇಶದಲ್ಲಿ ಹೆಚ್ಚಾಗುತ್ತಿರುವ ಕ್ಯಾನ್ಸರ್ ಮಹಾಮಾರಿ ಕುರಿತು ಹೆಚ್ಚಿನ ಸಂಶೋಧನೆ ಅಗತ್ಯವಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಬೆಂಗಳೂರು ಮಹಾನಗರದಲ್ಲಿ ನ್ಯಾನೋ ಸಂಶೋಧನಾ ಕೇಂದ್ರ ಆರಂಭಿಸಬೇಕು ಎಂದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಸಮಿತಿ ಮುಖ್ಯಸ್ಥರಾದ ಹಿರಿಯ ವಿಜ್ಞಾನಿ ಡಾ.ಸಿ.ಎನ್.ಆರ್. ರಾವ್ ತಿಳಿಸಿದರು.
ನಗರದ ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್.ಟಾಟಾ ಸಭಾಂಗಣದಲ್ಲಿ ಭಾನುವಾರ ನಡೆದ ಕರ್ನಾಟಕ ಕ್ಯಾನ್ಸರ್ ಸೊಸೈಟಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ಚಂದ್ರಯಾನ ಕೈಗೊಂಡು ದಶಕಗಳೇ ಕಳೆದಿದ್ದು, ಈಗ ಮಂಗಳಯಾನಕ್ಕೆ ಸಜ್ಜಾಗುತ್ತಿದ್ದಾನೆ.
ಆದರೆ, ಪ್ರಪಂಚವನ್ನೇ ಕಾಡುತ್ತಿರುವ ಕ್ಯಾನ್ಸರ್ ಮಹಾಮಾರಿಗೆ ಕಾರಣ ಹಾಗೂ ಅದರಿಂದ ಸಂಪೂರ್ಣ ಗುಣಮುಖವಾಗಲು ಅಗತ್ಯ ಮದ್ದನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನ್ಯಾನೋ ಸಂಶೋಧನೆ ಅವಶ್ಯಕವಿದ್ದು, ರಾಜ್ಯ ಅಥವಾ ಕೇಂದ್ರ ಸರ್ಕಾರವು ಬೆಂಗಳೂರಿನಲ್ಲಿ ನ್ಯಾನೋ ಸಂಶೋಧನಾ ಕೇಂದ್ರವನ್ನು ತೆರೆಯಲು ಮುಂದಾಗಬೇಕು ಎಂದರು.
ಕ್ಯಾನ್ಸರ್ ರೋಗವು ಹೆಚ್ಚಾಗುತ್ತಲೇ ಇದ್ದು, ಅದರ ಚಿಕಿತ್ಸೆಗಾಗಿ ದೇಶ ವಿದೇಶಗಳಲ್ಲಿ ಸಹಸ್ರ ಕೋಟಿ (ಟ್ರಿಲಿಯನ್) ಹಣ ಖರ್ಚು ಮಾಡಲಾಗುತ್ತಿದೆ. ಆದರೂ, ಪ್ರತಿವರ್ಷ ಲಕ್ಷಾಂತರ ಜನ ಸಾಯುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ರೋಗವನ್ನು ಬೇಗ ಪತ್ತೆ ಹಚ್ಚುವಲ್ಲಿ ವಿಫಲವಾಗುತ್ತಿರುವುದು.
ಹೀಗಾಗಿ, ಕ್ಯಾನ್ಸರ್‌ಗೆ ಕಾರಣವೇನು, ಅದನ್ನು ಬೇಗ ಪತ್ತೆಹಚ್ಚಲು ಅಗತ್ಯವಿರುವ ಅಂಶಗಳು ಯಾವುವು ಹಾಗೂ ಪೂರ್ಣ ಗುಣಮುಖರಾಗಲು ನಿಖರ ಚಿಕಿತ್ಸೆ ಏನು ಎಂಬುದನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಅಲ್ಲದೇ, ಇಂತಹ ಸಂಶೋಧನೆಗಳಿಗೆ ನೆರವು ಹಾಗೂ ಪ್ರೋತ್ಸಾಹದ ಅವಶ್ಯಕತೆ ಇದೆ. ಸಂಶೋಧನೆಗೆ ಹೆಚ್ಚಿನ ನೆರವು ನೀಡುವ ನಿಟ್ಟಿನಲ್ಲಿ ಅಮೆರಿಕ ಸೇರಿದಂತೆ ಕೆಲ ದೇಶಗಳು ಅಗತ್ಯ ಕ್ರಮ ಕೈಗೊಂಡು ಯಶಸ್ಸನ್ನು ಕಾಣುತ್ತಿವೆ ಎಂದು ತಿಳಿಸಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಯಾವುದೇ ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಆ ರೋಗ ಬಾರದಂತೆ ಎಚ್ಚೆತ್ತುಕೊಳ್ಳುವುದು ಮುಖ್ಯ. ಅದರಲ್ಲೂ ಕ್ಯಾನ್ಸರ್ ರೋಗಕ್ಕೆ ಮುನ್ನೆಚ್ಚರಿಕೆ ಹಾಗೂ ಆರಂಭದಲ್ಲೇ ಪತ್ತೆ ಹಚ್ಚುವ ಅಗತ್ಯವಿದೆ. ಕರ್ನಾಟಕದ ಮಟ್ಟಿಗೆ ಕ್ಯಾನ್ಸರ್ ರೋಗಿಗಳ ಸೇವೆಯನ್ನು ಕಳೆದ 50 ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಅರ್ಥ ಪೂರ್ಣವಾಗಿ ಮಾಡಿಕೊಂಡು ಬಂದಿರುವ ಕ್ಯಾನ್ಸರ್ ಸೊಸೈಟಿಯ ಸೇವಾಕಾರ್ಯ ಶ್ಲಾಘನೀಯ.
ವೈಯಕ್ತಿಕವಾಗಿ ಕ್ಯಾನ್ಸರ್ ಸೊಸೈಟಿಗೆ 5 ಲಕ್ಷ ರೂ. ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿಯೂ ಅಗತ್ಯ ನೆರವನ್ನು ನೀಡುತ್ತೇನೆ ಎಂದರು. ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ಹೆಚ್ಚಾಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ರೋಗವನ್ನು ತಡೆಗಟ್ಟುಲು ಶೀಘ್ರ ರೋಗ ಪತ್ತೆ ಅವಶ್ಯಕವಾಗಿದೆ.
ಆ ನಿಟ್ಟಿನಲ್ಲಿ ಅನುಕೂಲವಾಗಲು ಅನಂತ್‌ಕುಮಾರ್ ಅವರ ಹೆಸರಲ್ಲಿ ಅದಮ್ಯ ಚೇತನ ವತಿಯಿಂದ ಆರಂಭಿಸುತ್ತಿರುವ ಎರಡು ಜನೌಷಧ ಕೇಂದ್ರದಲ್ಲಿ ಮಹಿಳೆಯರ ಕ್ಯಾನ್ಸರ್ ಪತ್ತೆ ಪರೀಕ್ಷೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜತೆಗೆ ಇಲ್ಲಿ ಕ್ಯಾನ್ಸರ್ ಸಂಬಂಧಿಸಿದ ಔಷಧಗಳ ಲಭ್ಯತೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಕರ್ನಾಟಕ ಕ್ಯಾನ್ಸರ್ ಸೊಸೈಟಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಕರ್ನಾಟಕ ಕ್ಯಾನ್ಸರ್ ಸೊಸೈಟಿ ಅಧ್ಯಕ್ಷ ಡಾ.ಸಿಕೆಎಎನ್ ಶಾಸಿ, ವೈದ್ಯೆ ಡಾ. ವಿಜಯಲಕ್ಷ್ಮೀ ದೇಶಮಾನೆ, ಕಿದ್ವಾಯಿ ಮಾಜಿ ನಿರ್ದೇಶಕ ಡಾ.ಕೆ.ಬಿ.ಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.