ಸರ್ಕಾರಿ ಹೈಟೆಕ್ ಶಾಲೆಗೆ ಚಾಲನೆ
Team Udayavani, Jul 28, 2019, 10:10 AM IST
ನವರತ್ನ ಅಗ್ರಹಾರದ ಹೈಟೆಕ್ ಸರ್ಕಾರಿ ಶಾಲೆ.
ಯಲಹಂಕ: ಬೆಂಗಳೂರು ಉತ್ತರ ತಾಲೂಕಿನ ನವರತ್ನ ಅಗ್ರಹಾರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉದ್ಯಮಿಯೊಬ್ಬರ ನೆರವಿನಿಂದ ಹೈಟೆಕ್ ಸ್ವರೂಪ ಪಡೆದುಕೊಂಡಿದೆ.
ಮೂರು ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣಗೊಂಡಿರುವ ಸರ್ಕಾರಿ ಶಾಲೆ ಯಾವುದೇ ಪ್ರತಿಷ್ಠಿತ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಸಿದ್ಧಗೊಂಡಿದ್ದು, ಉದ್ಯಮಿ ರೋನಾಲ್ಡ್ ಕೊಲಾಸೊ ಅವರು ಶನಿವಾರ ಶಾಲೆ ಕಟ್ಟಡವನ್ನು ಲೋಕಾರ್ಪಣೆ ಗೊಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಿದೆ. ನಾವು ಹೊಸತನದತ್ತ ಸಾಗಬೇಕಾದರೆ ಅಧ್ಯಯನಕ್ಕೆ ವಿಶೇಷ ವ್ಯವಸ್ಥೆ ಬೇಕು ಎಂದರು.
ಶಾಸಕ ಕೃಷ್ಣ ಬೈರೇಗೌಡ ಮಾತನಾಡಿ, ಮಗು ತನ್ನ ಭವಿಷ್ಯವನ್ನು ತಾನೇ ನಿರ್ಮಿಸಿಕೊಂಡು, ಸಮಾಜದಲ್ಲಿ ಕೇವಲ ಒಬ್ಬ ವ್ಯಕ್ತಿಯಾಗದೆ, ಸಾಮಾಜಿಕ ಶಕ್ತಿಯಾಗುವಂತಹ ವ್ಯವಸ್ಥೆ ಸೃಷ್ಟಿಯಾಗಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ಇತರರಿಗೆ ಸರಿಸಮನಾಗಿ ನಿಲ್ಲುವ ವಾತಾವರಣ ನಿರ್ಮಾಣವಾಗಬೇಕು ಎಂದು ಹೇಳಿದರು.
ಹೈಟೆಕ್ ಶಾಲೆ ನಿರ್ಮಿಸಿಕೊಟ್ಟ ದ್ಯಮಿ ರೋನಾಲ್ಡ್ ಕೊಲಾಸೊ ಮಾತನಾಡಿ, ನವರತ್ನ ಅಗ್ರಹಾರದ ಪಾಠಶಾಲೆ ಶಿಥಿಲಗೊಂಡಿದ್ದು, ಹೊಸ ಕಟ್ಟಡ ನಿರ್ಮಿಸಿಕೊಡುವಂತೆ ಶಾಲೆ ಆಡಳಿತ ಮಂಡಳಿ ಕೇಳಿತ್ತು. ಅವರ ಮನವಿಯಂತೆ 3 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಜತೆಗೆ ಅಗತ್ಯ ಶಿಕ್ಷಕರನ್ನೂ ನೇಮಿಸಲಾಗಿದೆ. ಪ್ರಸಕ್ತ ವರ್ಷ 50 ವಿದ್ಯಾರ್ಥಿಗಳು ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಕೆಜಿ, ಯುಕೆಜಿ ಹಾಗೂ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ ಎಂದರು.
ಚಿಕ್ಕಜಾಲ ಗ್ರಾ.ಪಂ ಅಧ್ಯಕ್ಷ ಮಹೇಶ್, ಎಂಎಲ್ಸಿ ನಾರಾಯಣ ಸ್ವಾಮಿ, ಡಿಡಿಪಿಐ ಜಯರಂಗ, ಬಿಇಒ ಕಮಲಾಕರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.