ಅಧಿಕಾರಕ್ಕೆ ಬಂದ್ರೆ ಸಮಗ್ರ ನೀರಾವರಿ ಯೋಜನೆ


Team Udayavani, Feb 5, 2018, 6:15 AM IST

Ban05021807Medn.jpg

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿ ಯೋಜನೆಗೆ 1 ಲಕ್ಷ ಕೋಟಿ ರೂ. ಮೀಸಲಿಟ್ಟು, ಇಡೀ ಕರ್ನಾಟಕದ ಜನತೆಗೆ ನೀರು ಕೊಡುವ ಸಮಗ್ರ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಭಾನುವಾರ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣವೇ 1 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಸಮಗ್ರ ನೀರಾವರಿ ಯೋಜನೆ ಪೂರ್ಣಗೊಳಿಸಲಾಗುವುದು. ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ ನೀರಾವರಿ ಒದಗಿಸಲಾಗುವುದು ಎಂದು ಘೋಷಿಸಿದರು.

ಪರಿವರ್ತನಾ ರ್ಯಾಲಿಯ ಮೂಲಕ ರಾಜ್ಯದ 224 ವಿಧಾನ ಸಭಾ ಕ್ಷೇತ್ರಕ್ಕೂ ಪ್ರವಾಸ ಮಾಡಿ, ಅಲ್ಲಿನ ಜನರ  ಸಮಸ್ಯೆಗಳನ್ನು ಅಧ್ಯಯನ ಮಾಡಿದ್ದೇನೆ. ಎರಡು ಕೋಟಿಗೂ ಅಧಿಕ ಜನರನ್ನು ಉದ್ದೇಶಿಸಿ ಮಾತನಾಡಿದ್ದೇನೆ. ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಇದೆ. ಇದನ್ನು ಬಗೆಹರಿಸುವುದು ನಮ್ಮ ಆದ್ಯತೆ ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರುವರೆ ವರ್ಷದ ಸಾಧನೆ, ಹಿಂದಿನ ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳು ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫ‌ಲ್ಯಗಳನ್ನು ರಾಜ್ಯದ ಪ್ರತಿ ಮನೆಗೂ ತಲುಪಿಸಲಿದ್ದೇವೆ. ದಕ್ಷ, ಪ್ರಮಾಣಿಕ ಹಾಗೂ ಸ್ವತ್ಛ  ಆಡಳಿತ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ. ಎಲ್ಲರೂ ಒಟ್ಟಾಗಿ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ರಾಜ್ಯದಿಂದ ಕಿತ್ತೂಗೆಯಬೇಕು ಎಂದು ಕರೆಕೊಟ್ಟರು.

ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಭ್ರಷ್ಟರನ್ನು ರಕ್ಷಿಸಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಎಸಿಬಿ ಆರಂಭಿಸಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6521 ಮಂದಿ ಹತ್ಯೆ, 3102 ಅತ್ಯಾಚಾರ, 3550 ರೈತರ ಆತ್ಮಹತ್ಯೆ ಹಾಗೂ ಹಿಂದು ಸಂಘಟನೆಯ 20ಕ್ಕೂ ಅಧಿಕ ಕಾರ್ಯಕರ್ತರ ಕೊಲೆ ನಡೆದಿದೆ. ಇದಾವುದನ್ನು ಲೆಕ್ಕಿಸದ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್‌ ಪಕ್ಷ ಚುನಾವಣೆ ಗೆಲ್ಲುವುದಕ್ಕಾಗಿ ದೇಶ ದ್ರೋಹಿಗಳೊಂದಿಗೆ, ಪ್ರತ್ಯೇಕವಾದಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಸುಸ್ಥಿತರ ಅಭಿವೃದ್ಧಿಯಲ್ಲಿ ಕೊಂಡೊಯ್ಯುತ್ತಿದ್ದಾರೆ. ದೇಶದ ರಕ್ಷಣೆಗೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಘೋಷಣೆಯಡಿ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ಡಾ.ಬಿ. ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದೆ. ಅವರಿಗೆ ಭಾರತರತ್ನ ಕೂಡ ನೀಡುವುದಕ್ಕೆ ಹಿಂದೇಟು ಹಾಕಿತ್ತು. ಈಗಿನ  ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ ಎಂದು ದೂರಿದರು.

ಚುನಾವಣೆಗೆ ಮೂರು ತಿಂಗಳಿದೆ. ಈ ಮೂರು ತಿಂಗಳು ಮೈ ಚಳಿ ಬಿಟ್ಟು, ಶ್ರಮವಹಿಸಿ ಪಕ್ಷ ಸಂಘಟನೆಯ ಜತೆಗೆ ಅಭ್ಯರ್ಥಿಯ ಗೆಲುವಿಗೆ ದುಡಿಯಿರಿ. ಮುಂದಿನ ಐದು ವರ್ಷ ನೀವೆಲ್ಲರೂ ನೆಮ್ಮದಿಯಿಂದ ಇರುವಂತೆ ನಾವು ನೋಡಿಕೊಳ್ಳುತ್ತೇವೆ. ಕಾಂಗ್ರೆಸ್‌ ಮುಕ್ತ ಭಾರತದ ಮೋದಿಯವರ ಕನಸಿಗೆ ಕರ್ನಾಟಕವನ್ನು ಸೇರಿಸುವ ಸಂಕಲ್ಪಿಸೋಣ.
– ಬಿ.ಎಸ್‌.ಯಡಿಯೂರಪ್ಪ

ಯಾರು ಏನಂದ್ರು…?
2018ರ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಅಧಿಕಾರಕ್ಕೆ ಬರಲಿದ್ದು,ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಬೆಂಗಳೂರು ಸಿಟಿಯನ್ನು ಗಾಬೇìಜ್‌ ಸಿಟಿ ಮಾಡಿದೆ, ಐಟಿ ಸಿಟಿಯನ್ನು ಕ್ರೈಂ ಸಿಟಿ ಮಾಡಿದೆ. ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ನಡೆಯುತ್ತಿದೆ. ಆದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ.
– ಪ್ರಕಾಶ್‌ ಜಾವಡೇಕರ್‌, ಕೇಂದ್ರ ಸಚಿವ

ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಹಾಗೂ ಬಿಜೆಪಿ ಒಂದುಕಡೆಯಿದೆ.ರಾಹುಲ್‌ಗಾಂಧಿ, ಉಲ್ಟಾಪಲ್ಟಾ ಯುಪಿಎ
ಇನ್ನೊಂದು ಕಡೆ ಇದೆ. ಕರ್ಮಯೋಗಿ ಮೋದಿಗೆ ಇಡೀ ದೇಶವೇ ವಿಳಾಸ ಇದ್ದಂತೆ. ಆದರೆ, ರಾಹುಲ್‌ ಗಾಂಧಿಯವರದ್ದು ಭೋಗಜೀವನ,ಗಾಂಧಿ ವಂಶವನ್ನೇ ವಿಳಾಸ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿದ್ದೆಯಲ್ಲೇ ಇರುತ್ತಾರೆ.
– ಅನಂತಕುಮಾರ್‌, ಕೇಂದ್ರ ಸಚಿವ

ಹವಾನಿಯಂತ್ರಣ ಕೊಠಡಿಯೊಳಗೆ ಕುಳಿತು ಟಿ.ವಿ.ನೋಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಮೋದಿಯವರ ಹವಾ ನೋಡಿ ಬೆವರಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಕರ್ಮಕ್ಕೆ ಉತ್ತರ ಸಿಗುತ್ತಿದೆ. “ಕೊಟ್ಟವನು ಕೋಡಂಗಿ ಇಸ್ಕೊಂಡವನು ವೀರಭದ್ರ’ ಎಂಬ ಗಾದೆಯಂತೆ ಜನರು ವೀರಭದ್ರನ ರೂಪ ತಾಳುತ್ತಿದ್ದಾರೆ.
– ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವ

ಸಿದ್ದರಾಮಯ್ಯ ಸರ್ಕಾರದಿಂದ ಸಂಪೂರ್ಣವಾಗಿ ಆಡಳಿತ ವೈಫ‌ಲ್ಯವಾಗಿದೆ.ಜನರೇ ಈ ಸರ್ಕಾರವನ್ನು ಮನೆಗೆ
ಕಳುಹಿಸುತ್ತಾರೆ. ಮರಳು ದಂಧೆ ನಡೆಸಲು ಮಲೇಷ್ಯಾದಿಂದ ಮರಳನ್ನು ಆಮದು ಮಾಡಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ.
– ಜಗದೀಶ್‌ ಶೆಟ್ಟರ್‌, ಮಾಜಿ ಮುಖ್ಯಮಂತ್ರಿ

ಸಿದ್ದರಾಮಯ್ಯನವರ ಸರ್ಕಾರ ಗೊರಕೆ ಮತ್ತು ನಿದ್ದೆ ಮಾಡುವ ಸರ್ಕಾರ. ಜೈಲಿಗೆ ಹೋಗಿ ಬಂದವರನ್ನು ಕಾಂಗ್ರೆಸ್‌ ತನ್ನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ.
– ಆರ್‌.ಅಶೋಕ, ಬಿಜೆಪಿ ಮುಖಂಡ

ಪ್ರಧಾನಿ ಮೋದಿ ಸರ್ಕಾರ ದೇಶದ ಆರ್ಥಿಕ ಸಬಲೀಕರಣ ಮಾಡುತ್ತಿದೆ. ಮೂರೂವರೆ ವರ್ಷದಲ್ಲಿ ರಾಜ್ಯಕ್ಕೆ 3 ಲಕ್ಷ
ಕೋಟಿಗೂ ಅಧಿಕ ಅನುದಾನ ಬಂದಿದೆ. ಅದನ್ನು ಏನು ಮಾಡಿದ್ದಾರೆ ಎಂಬ ಲೆಕ್ಕವನ್ನು ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ನೀಡಬೇಕು.
– ಶೋಭಾ ಕರಂದ್ಲಾಜೆ, ಬಿಜೆಪಿ ಸಂಸದೆ

ಮೋದಿಯವರು ಮನ್‌ ಕೀ ಬಾತ್‌ ಕಾರ್ಯ ಕ್ರಮದ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆದು,ಬಿಜೆಪಿಯನ್ನು ಅಧಿಕಾರಕ್ಕೆ ತರುವ ಮೂಲಕ ನವ ಕರ್ನಾಟಕ ನಿರ್ಮಾಣ ಮಾಡಬೇಕು.
– ಶ್ರೀನಿವಾಸ್‌ ಪ್ರಸಾದ್‌, ಮಾಜಿ ಸಚಿವ

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.