ರಾಜ್ಯ ಸಂಪುಟ ವಿಸ್ತರಣೆ: ಜಾತಿ ಲೆಕ್ಕದಲ್ಲಿ ಲಾಬಿ

Team Udayavani, Sep 27, 2018, 6:00 AM IST

congress-700.jpg

ಬೆಂಗಳೂರು: ಆಪರೇಷನ್‌ ಕಮಲದ ಭೀತಿಯ ನಡುವೆಯೇ ಕಾಂಗ್ರೆಸ್‌ ಹೈಕಮಾಂಡ್‌ ಪಿತೃ ಪಕ್ಷದ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿರುವುದರಿಂದ ಆಕಾಂಕ್ಷಿಗಳು ತೀವ್ರ ಲಾಬಿಯಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಲಿಂಗಾಯಿತ, ಕುರುಬ, ಮುಸ್ಲಿಂ, ಎಸ್‌ಟಿ ಹಾಗೂ ಎಡಗೈ ಪಂಗಡಕ್ಕೆ ಅವಕಾಶ ಕೊಡುವ ಲೆಕ್ಕಾಚಾರಗಳು ನಡೆಯುತ್ತಿವೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌, ಸಚಿವ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ.

ಲಿಂಗಾಯಿತ ಸಮುದಾಯದಲ್ಲಿ ಶಾಮನೂರು ಶಿವಶಂಕರಪ್ಪ, ಎಂ.ಬಿ.ಪಾಟೀಲ್‌, ಬಿ.ಸಿ. ಪಾಟೀಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಹಿರಿಯ ಶಾಸಕರಾಗಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಮೊದಲ ವಿಸ್ತರಣೆಯಲ್ಲಿಯೇ ತಮ್ಮನ್ನು ಕೈ ಬಿಟ್ಟಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಬಂಡಾಯದ ಬಾವುಟ ಹಾರಿಸಿದ್ದರು. ಹೀಗಾಗಿ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ತಮಗೆ ಅವಕಾಶ ದೊರೆಯುತ್ತದೆ ಎನ್ನುವ ವಿಶ್ವಾಸದಲ್ಲಿದ್ದಾರೆ.

ಆಪರೇಷನ್‌ ಕಮಲದ ಕಾರ್ಯಾಚರಣೆಯಡಿ ಬಿ.ಸಿ. ಪಾಟೀಲ್‌ ಹಾಗೂ ಬಿ.ಕೆ. ಸಂಗಮೇಶ್‌ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದರು ಎನ್ನುವ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿ ಪಕ್ಷದಲ್ಲಿ ಉಳಿಸಿಕೊಳ್ಳಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕುಷ್ಠಗಿ ಶಾಸಕ ಅಮರೇಗೌಡ ಬಯ್ನಾಪುರ್‌ ಕೂಡ  ಆಕಾಂಕ್ಷಿಯಾಗಿದ್ದಾರೆ.

ಕುರುಬ ಸಮುದಾಯದಲ್ಲಿ ಒಬ್ಬರಿಗೆ ಸಂಪುಟದಲ್ಲಿ ಅವಕಾಶ ಸಿಗಲಿದುದ ಕುಂದಗೋಳ ಶಾಸಕ ಸಿ.ಎಸ್‌.ಶಿವಳ್ಳಿ ಹಾಗೂ ಎಂ.ಟಿ.ಬಿ. ನಾಗರಾಜ್‌ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬಂದಿದ್ದು, ಡಿ.ಕೆ. ಶಿವಕುಮಾರ್‌ ಹಾಗೂ ಪರಮೇಶ್ವರ್‌ ಎಂ.ಟಿ.ಬಿ. ನಾಗರಾಜ್‌ ಪರವಾಗಿದ್ದರೆ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಿ.ಎಸ್‌.ಶಿವಳ್ಳಿ ಪರವಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಲಂಬಾಣಿ ಸಮುದಾಯಕ್ಕೆ ಯಾವುದೇ ಪ್ರಾತಿನಿಧ್ಯ ನೀಡಿಲ್ಲ ಎಂದು ಪಿ.ಟಿ. ಪರಮೇಶ್ವರ್‌ ನಾಯ್ಕ ಹಾಗೂ ಭೀಮಾನಾಯ್ಕ ಪೈಪೋಟಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಆರು ಶಾಸಕರು ಆಯ್ಕೆಯಾಗಿದ್ದು, ನಾಯಕ ಸಮುದಾಯದಕ್ಕೆ ಸೇರಿರುವ ಬಿ. ನಾಗೇಂದ್ರಗೆ ನೀಡುವಂತೆ ಜಾರಕಿಹೊಳಿ ಸಹೋದರರು ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ನಾಗೇಂದ್ರಗೆ ಸಚಿವ ಸ್ಥಾನ ನೀಡಲು ತುಕಾರಾಂ ವಿರೋಧ ವ್ಯಕ್ತಪಡಿಸಿ ಮೂಲ ಕಾಂಗ್ರೆಸ್ಸಿಗರಾದ ತಮಗೇ ನೀಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಮುಸ್ಲಿಂ ಸಮುದಾಯದಲ್ಲಿ ರಹೀಂ ಖಾನ್‌, ತನ್ವಿರ್‌ ಸೇs…, ರೋಷನ್‌ ಬೇಗ್‌ ಅವರು ಪ್ರಯತ್ನ ನಡೆಸಿದ್ದಾರೆ. ದಲಿತ ಸಮುದಾಯದ ಎಡಗೈ ಪಂಗಡದಲ್ಲಿ ಮಾಜಿ ಸಚಿವ ಆರ್‌.ಬಿ. ತಿಮ್ಮಾಪುರ, ರೂಪಾ ಶಶಿಧರ್‌ ಹಾಗೂ ಪರಿಷತ್‌ ಸದಸ್ಯ ಧರ್ಮಸೇನ್‌ ಅವರ ಹೆಸರುಗಳು ಕೇಳಿ ಬರುತ್ತಿವೆ.

ಬೆಂಗಳೂರಿಗೆ ಇನ್ನೊಂದು ಸಚಿವ ಸ್ಥಾನ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಪ್ರಮುಖವಾಗಿ ಹಿರಿಯ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಒತ್ತಡ ಹೆಚ್ಚಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ  ಮೂವರು ಸಚಿವರಿರುವುದರಿಂದ ಇನ್ನೊಂದು ಸಚಿವ ಸಿಗುವುದು ಕಷ್ಟ ಎಂಬ ಮಾತುಗಳು ಇವೆ.

ಹೀಗಾಗಿ, ಖಾಲಿ ಇರುವ ಆರು ಸ್ಥಾನಗಳಿಗೆ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳಿರುವುದರಿಂದ ಯಾರಿಗೆ ಕೊಟ್ಟರೂ ಮತ್ತೂಬ್ಬರು ಬಂಡಾಯ ಸಾರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಮತ್ತಷ್ಟು ದಿನ ಸಂಪುಟ ವಿಸ್ತರಣೆ ಮುಂದೂಡಿದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

8(1)

Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

7(1)

Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.