ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಗೆ ಒಪ್ಪಿಗೆ ಸಾಧ್ಯತೆ
Team Udayavani, Aug 28, 2017, 11:45 AM IST
ಬೆಂಗಳೂರು: ರಾಜ್ಯದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸುವ ಬಗ್ಗೆ ಸೋಮವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ಸಾಧ್ಯತೆಯಿದೆ. ರಾಜ್ಯದಲ್ಲಿರುವ ಎಲ್ಲ ವರ್ಗಗಳ ಜನರಿಗೂ ಆರೋಗ್ಯ ಸೇವೆ ನೀಡುವ ಯೋಜನೆ ಇದಾಗಿದ್ದು, ಎಪಿಎಲ್, ಬಿಪಿಎಲ್ ಕುಟುಂಬ ಎಂಬ ಭೇದ ಇಲ್ಲದೆ ಅಗತ್ಯ ಇರುವ ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಸಚಿವ ಸಂಪುಟ ಸಭೆಯ ಕಾರ್ಯಸೂಚಿಯಲ್ಲಿ ವಿಷಯ ಸೇರ್ಪಡೆಯಾಗಿದೆ.
ಇದನ್ನು ಹೊರತುಪಡಿಸಿ ಸಂಪುಟದಲ್ಲಿ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ವಿದ್ಯಾರ್ಥಿನಿಲಯಗಳ ಮತ್ತು ಆಶ್ರಮ ಶಾಲೆಗಳ ವಿದ್ಯಾರ್ಥಿಗಳಿಗೆ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ವತಿಯಿಂದ ಸಿರಿಗಂಧ ಕಿಟ್ ಖರೀದಿಸುವ 50.53 ಕೋಟಿ ರೂ. ಯೋಜನೆ, ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದ ರಾಜ್ಯ ಸರಕಾರದ ಪ್ರೋತ್ಸಾಹ ಧನ ರೈತರಿಗೆ ಪಾವತಿಸಲು 13.92 ಕೋಟಿ ರೂ. ಬಿಡುಗಡೆ, 2017-18ನೇ ಸಾಲಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ಐಇಬಿಆರ್ ಅಡಿಯಲ್ಲಿ ಅವಧಿ ಸಾಲಗಳ ಮೂಲ 1,500 ಕೋಟಿ ರೂ. ಸಂಗ್ರಹಿಸಲು ಅನುಮೋದನೆ ಮತ್ತು ಸರಕಾರಿ ಖಾತರಿ ನೀಡುವುದು, ಕುಣಬಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವುದು ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿವೆ.
ಭಡ್ತಿ ಮೀಸಲಾತಿ ಸಂಪುಟದಲ್ಲಿ ಚರ್ಚೆ?
ಪರಿಶಿಷ್ಟ ಜಾತಿ ಮತ್ತು ಪಂಗಡದ ಅಧಿಕಾರಿಗಳಿಗೆ ನೀಡಿರುವ ಭಡ್ತಿ ಮೀಸಲಾತಿ ಮುಂದುವರಿಸಲು ಹೊರಡಿಸಿದ್ದ ಅಧ್ಯಾದೇಶವನ್ನು ರಾಜ್ಯಪಾಲರು ವಾಪಸ್ ಕಳುಹಿಸಿರುವ ವಿಚಾರ ಸೋಮವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.
ರಾಜ್ಯಪಾಲರು ಅಧ್ಯಾದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ವಾಪಸ್ ಕಳುಹಿಸಿರುವುದರಿಂದ ಮುಂದೇನು ಮಾಡಬೇಕು ಎಂಬ ಬಗ್ಗೆ ಅಡ್ವೊಕೇಟ್ ಜನರಲ್ ಅಭಿಪ್ರಾಯವನ್ನೂ ಕೇಳಿದ್ದು, ಈ ಬಗ್ಗೆ ಸಂಪುಟದಲ್ಲೂ ಚರ್ಚೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ರಾಜ್ಯಪಾಲರು ಅಧ್ಯಾದೇಶ ವಾಪಸ್ ಕಳುಹಿಸಿರುವುದರಿಂದ ಸುಮ್ಮನಾಗುವುದೋ ಅಥವಾ ಸ್ಪಷ್ಟನೆಯೊಂದಿಗೆ ಮತ್ತೂಮ್ಮೆ ಕಳುಹಿಸುವುದೋ ಎಂಬ ಬಗ್ಗೆ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಅನಂತರ ಅಗತ್ಯವಾದರೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.