ರಾಜಧಾನಿಯಲ್ಲಿ ದಿನಪೂರ್ತಿ ಜಿಟಿಜಿಟಿ ಮಳೆ

ಏರ್ಪೋರ್ಟ್‌ ಸುತ್ತಮುತ್ತ 131.1 ಮಿ.ಮೀ. ಮಳೆ | ಅಂಡರ್‌ಪಾಸ್‌ಗಳಲ್ಲಿ ನೀರು: ಸವಾರರ ಪರದಾಟ

Team Udayavani, Oct 13, 2021, 1:02 PM IST

ರಾಜಧಾನಿಯಲ್ಲಿ ದಿನಪೂರ್ತಿ ಜಿಟಿಜಿಟಿ ಮಳೆ

ಬೆಂಗಳೂರು: ರಾಜಧಾನಿಯಲ್ಲಿ ಸತತ ನಾಲ್ಕನೇ ದಿನವೂ ದಿನಪೂರ್ತಿ ಜಿಟಿ ಜಿಟಿ ಮಳೆ ಸುರಿದಿದ್ದು, ಕೆಲವೆಡೆ ಮಾತ್ರ ಜೋರು ಮಳೆಯಾಗಿದೆ. ಈ ಹಿನ್ನೆಲೆ ಮೂರು ಕಡೆ ಮರ ಬಿದ್ದಿದ್ದು, ಹಲವು ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರು ಪರದಾಟ ನಡೆಸಿದರು.

ಸೋಮವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆಯಾಗಿದೆ. ಏರ್ಪೋರ್ಟ್‌ ಸುತ್ತಮುತ್ತ 131.1 ಮಿ.ಮೀ. ಮಳೆಯಾಗಿದೆ. ಆದರೆ, ನಗರದಲ್ಲಿ ಜಿಟಿ ಜಿಟಿ ಮಳೆ ರಾತ್ರಿ ಪೂರ್ತಿ ಸುರಿದಿತ್ತು. ಅಲ್ಲದೆ, ಬೆಳಗ್ಗೆ ಒಂದಿಷ್ಟು ಬಿಡುವು ನೀಡಿತಾದರೂ, ಮಧ್ಯಾಹ್ನ ಒಂದು ಗಂಟೆ ಬಳಿಕ ಮತ್ತೆ ಜೋರು ಮಳೆಯಾಗಿದೆ. ಅದರಲ್ಲೂ, ನಗರದ ಕೇಂದ್ರ ಭಾಗಗಳಾದ ವಿಧಾನಸೌಧ, ಕೆ.ಆರ್‌.ವೃತ್ತ , ಯಶವಂತಪುರ, ಮಲ್ಲೇಶ್ವರ, ಸದಾಶಿವನಗರ, ಮತ್ತಿಕೆರೆ, ಹೆಬ್ಟಾಳ, ಯಲಹಂಕ ಸೇರಿದಂತೆ ಬೆಂಗಳೂರಿನ ಹಲವೆಡೆ ಮಧ್ಯಾಹ್ನ ಮಳೆ ಭಾರಿ ಮಳೆಯಾಗಿತ್ತು.

ಇದನ್ನೂ ಓದಿ;- ನವರಾತ್ರಿ ಪೂಜೆ; ನೆಲ್ಲೂರು ದೇವಿಗೆ 5 ಕೋಟಿ ರೂ. ಅಲಂಕಾರ

ಮಧ್ಯಾಹ್ನ 2 ಗಂಟೆಗೆ ಸುರಿನ ಜೋರು ಮಳೆಯಿಂದ ಮೆಜೆಸ್ಟಿಕ್‌, ಶಾಂತಿನಗರ, ಜಯನಗರ, ಬನಶಂಕರಿ, ಸಂಜ ಯನಗರ, ರಾಜರಾಜೇಶ್ವರಿನಗರ, ಮಲ್ಲೇಶ್ವರ, ಚಾಮರಾಜಪೇಟೆ, ಕೆ.ಆರ್‌.ಮಾರುಕಟ್ಟೆ, ಜಯನಗರ, ಬಸವನಗುಡಿ, ಎಂ.ಜಿ.ರಸ್ತೆ, ಶಿವಾಜಿನಗರ, ನಾಗರಬಾವಿ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಕೋರಮಂಗಲ ಸೇರಿದಂತೆ ಹಲವೆಡೆ ಮುಖ್ಯರಸ್ತೆಗಳೆಲ್ಲವೂ ನದಿಗಳಾಗಿ ಮಾರ್ಪಟ್ಟಿದ್ದವು. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಕೆಲ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.‌

ಅಂಡರ್‌ಪಾಸ್‌ಗಳಲ್ಲಿ ನೀರು: ಮಳೆಯಿಂದಾಗಿ ಸಹಕಾರನಗರ – ಕೊಡಿಗೆಹಳ್ಳಿ ಅಂಡರ್‌ಪಾಸ್‌ನಲ್ಲಿ 4 ಅಡಿಯಷ್ಟು ನೀರುನಿಂತು ಸ್ವಿಮ್ಮಿಂಗ್‌ ಪೂಲ್‌ ಆಗಿತ್ತು. ನೀರು ತೆಗೆಯುವ ಸಾಹಸಕ್ಕೆ ಕೈ ಹಾಕಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ನಿರ್ಮಾಣ ಮಾಡಿದಾಗಿನಿಂದಲೂ ಇದೇ ಸಮಸ್ಯೆ ಎದುರಾಗಿದೆ. ಶಾಸಕರು, ಸಂಸದರು, ಬಿಬಿಎಂಪಿ ಅಧಿಕಾರಿಗಳಂತು ಇಲ್ಲಿಗೆ ಬರೋದೆ ಇಲ್ಲ ಅಂತ ಸ್ಥಳೀಯರು ಆರೋಪಿಸುತ್ತಿದ್ದಾರೆ.

ನಾಲ್ಕು ಕಡೆ ಮರ ಬಿದ್ದಿದೆ: ಆರ್‌.ಆರ್‌.ನಗರ ಐಡಿಯಲ್‌ ಹೋಂ ಬಳಿ ಒಂದು , ಮಹಾಲಕ್ಷ್ಮೀ ಲೇಔಟ್‌ನಲ್ಲಿ ಎರಡು, ಗೋವರ್ಧನ ಟಾಕೀಸ್‌ ಬಳಿ ಎರಡು ಮರ ಸೇರಿ ಒಟ್ಟು ನಾಲ್ಕು ಕಡೆ ಮರ ಬಿದ್ದಿವೆ. ಮರಗಳು ಬುಡಸಮೇತ ನೆಲಕ್ಕುರುಳಿದ್ದರಿಂದ ಕೆಲ ಕಾಲ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಯಿತು.

ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ಬಿದ್ದಿದ್ದ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲಾಗಿದೆ ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು. ಇನ್ನು ಮಳೆಯಿಂದ ಯಾವುದೇ ಮನೆಗಳಿಗೆ ನೀರು ನುಗ್ಗಿರುವ ಕುರಿತು ದೂರು ಬಂದಿಲ್ಲ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ. 24 ಮಿ.ಮೀ ಮಳೆ;

 ಸಂಜೆ ಬಳಿಕ ತುಂತುರು: ಸಂಜೆ ನಂತರ ಅಲ್ಲಲ್ಲಿ ತುಂತುರು ರೂಪದಲ್ಲಿ ಸುರಿಯಿತು. ಇಡೀ ದಿನ ಬಿಸಿಲಿನ ದರ್ಶನವಾಗದೇ, ಎÇÉೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕೆಲವು ಕಡೆಗಳಲ್ಲಿ ಆಗಾಗ ಜಿಟಿ ಜಿಟಿ ಮಳೆ ಬಂದರೆ, ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಿದೆ. ತಾಪಮಾನದಲ್ಲಿ ಇಳಿಕೆಯಾಗಿದ್ದರಿಂದ ನಗರಾದ್ಯಂತ ತಂಪು ಗಾಳಿ ಬೀಸುವ ಪ್ರಮಾಣ ಹೆಚ್ಚಾಗಿತ್ತು. ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ, ಒಟ್ಟಾರೆ ನಗರದಲ್ಲಿ 24 ಮಿ.ಮೀ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.