ಜಾಗತಿಕ ಸಮಾವೇಶದಲ್ಲಿ ರಾಜ್ಯ ಕೈಗಾರಿಕಾ ಸಂಸ್ಥೆ ಭಾಗಿ

Team Udayavani, Sep 12, 2017, 11:42 AM IST

ravi-vanijya.jpg

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು (ಎಫ್ಕೆಸಿಸಿಐ) ಸೆ.19ರಿಂದ 21ರವರೆಗೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯಲಿರುವ ಜಾಗತಿಕ ವಾಣಿಜ್ಯೋದ್ಯಮ ಸಂಘಟನೆಗಳ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಳ್ಳಲಿದೆ ಎಂದು ಸಂಸ್ಥೆ ಅಧ್ಯಕ್ಷ ಕೆ.ರವಿ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಭಾರತವು ವಿಶ್ವದಲ್ಲಿ ಅತ್ಯಂತ ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಆರ್ಥಿಕವಾಗಿ ಬಲಿಷ್ಠಗೊಳ್ಳುತ್ತಿರುವ ಕುರಿತು ಸಮಾವೇಶದಲ್ಲಿ ಎಫ್ಕೆಸಿಸಿಐ ಪ್ರಬಂಧ ಮಂಡಿಸಲಿದೆ. ಕೈಗಾರಿಕೋದ್ಯಮದ ಹಲವು ವಿಷಯಗಳ ಕುರಿತು ಈ ಸಮ್ಮೇಳನದಲ್ಲಿ ವಿಷಯ ಪ್ರಸ್ತಾವನೆಗೊಳ್ಳಲಿದ್ದು, ಕಾರ್ಯಾಗಾರಗಳು ನಡೆಯಲಿವೆ ಎಂದು ಹೇಳಿದರು.

ಉದ್ದಿಮೆ ಮತ್ತು ವಹಿವಾಟು ಕ್ಷೇತ್ರಕ್ಕೆ ನೀಡಿದ ಕೊಡುಗೆ ಗುರುತಿಸಿ ಸರ್‌.ಎಂ.ವಿಶ್ವೇಶ್ವರಯ್ಯ ಪ್ರಶಸ್ತಿಗೆ ಈ ಬಾರಿ ಟ್ಯಾಲಿ ಸೊಲ್ಯೂಷನ್ಸ್‌ ಸಹ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಭರತ್‌ ಗೋಯೆಂಕಾ ಅವರನ್ನು ಆಯ್ಕೆ ಮಾಡಲಾಗಿದೆ. ಭರತ್‌ ಗೋಯೆಂಕಾ ಅವರ ನೇತೃತ್ವದಲ್ಲಿ ಸಂಸ್ಥೆಯು ವಹಿವಾಟು ನಿರ್ವಹಣಾ ಸಾಫ್ಟ್ವೇರ್‌ ಗೆ ಸಂಬಂಧಿಸಿದ್ದಾಗಿದ್ದು, ಸುಮಾರು 100ಕ್ಕೂ ಹೆಚ್ಚು ದೇಶಗಳಲ್ಲಿ 10 ಲಕ್ಷಕ್ಕೂ ಹೆಚ್ಚು ವಹಿವಾಟುದಾರರಿಗೆ ಸಂಸ್ಥೆ ಸರಳ ಸ್ವರೂಪದ ಸಾಫ್ಟ್ವೇರ್‌ ಒದಗಿಸಿದೆ ಎಂದು ತಿಳಿಸಿದರು.

ಎಫ್ಕೆಸಿಸಿಐ ಕೌಶಲ್ಯಾಭಿವೃದ್ಧಿಯಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದೆ. ಇದೀಗ ಬೆಂಗಳೂರಿನಲ್ಲಿ ಕೌಶಲ್ಯಾಭಿವೃದ್ಧಿ ಸಂಸ್ಥೆ ಸ್ಥಾಪಿಸಲು ಉದ್ದೇಶಿಸಿದ್ದು, ದಾಬಸ್‌ಪೇಟೆ 2ನೇ ಹಂತದ ಬಡಾವಣೆಯಲ್ಲಿ ಕೈಗಾರಿಕಾ ವಲಯದಲ್ಲಿ ಶೇ.50ರ ರಿಯಾಯಿತಿ ದರದಲ್ಲಿ 1.5 ಎಕರೆ ಭೂಮಿ ಮಂಜೂರಾತಿಯನ್ನು ಕೆಐಎಡಿಬಿ ನೀಡಿದೆ ಎಂದರು. ರಾಜ್ಯ ಸರ್ಕಾರ ಪ್ರಕಟಿಸಿರುವ ಕೈಗಾರಿಕಾ ನೀತಿಗಳನ್ನೆಲ್ಲ ಕ್ರೋಢೀಕರಿಸಿ ಎಲ್ಲವೂ ಒಂದೇ ಸ್ಥಳದಲ್ಲಿ ದೊರೆಯುವಂತೆ ಮಾಡಲು ಎಫ್ಕೆಸಿಸಿಐ ಕಾರ್ಯೋನ್ಮುಖವಾಗಿದೆ. 

ಇದರಿಂದ ಉದ್ದಿಮೆ ಆರಂಭಿಸುವವರಿಗೆ ಸ್ಟಾರ್ಟಅಪ್‌, ಆಹಾರ ಸಂಸ್ಕರಣೆ, ಐಟಿ ಮತ್ತು ಬಿಟಿ ನೀತಿ ಮತ್ತು ಕಾಲಕಾಲಕ್ಕೆ ಬದಲಾದ ಕೈಗಾರಿಕಾ ನೀತಿಗಳೆಲ್ಲ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ದೊರೆಯುವಂತೆ ದಾಬಸ್‌ಪೇಟೆಯಲ್ಲಿ ಸ್ಥಾಪನೆಯಾಗಲಿರುವ ಸಂಸ್ಥೆಯಲ್ಲಿ ವ್ಯವಸ್ಥೆ ಮಾಡಲು ಸರ್ಕಾರದ ಸಹಯೋಗದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.