ಅರ್ಧಕ್ಕರ್ಧ ಶಾಸಕರ ನಿರುತ್ಸಾಹ


Team Udayavani, Aug 9, 2018, 6:00 AM IST

vidhana-soudha-750.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆದ ರಾಜ್ಯ ವಿಧಾನ ಮಂಡಲದ ಮೊದಲ ಅಧಿವೇಶನದಲ್ಲಿ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದವರು ಸೇರಿ 132 ಶಾಸಕರು ಒಂದೇ ಒಂದು ಪ್ರಶ್ನೆ ಕೇಳಿಲ್ಲ.

ಹೌದು, ವಿಧಾನಸಭೆ ಚುನಾವಣೆಯಲ್ಲಿ 100ಕ್ಕೂ ಹೆಚ್ಚು ಶಾಸಕರು ಹೊಸದಾಗಿ ಆಯ್ಕೆಯಾಗಿದ್ದಾರೆ. ಬಂಟ್ವಾಳದ ರಾಜೇಶ್‌ ನಾಯಕ್‌, ಮೂಡಬಿದಿರೆಯ ಉಮಾನಾಥ್‌ ಕೋಟ್ಯಾನ್‌, ಸೇಡಂನ ರಾಜಶೇಖರ ಪಾಟೀಲ್‌, ಹಿರಿಯೂರಿನ ಪೂರ್ಣಿಮಾ, ಬೆಳಗಾವಿ ಗ್ರಾಮಾಂತರದ ಲಕ್ಷ್ಮಿ ಹೆಬ್ಟಾಳ್ಕರ್‌ ಹೊರತುಪಡಿಸಿದರೆ ಬಹುತೇಕ ನೂತನ ಶಾಸಕರು ಪ್ರಶ್ನೆ ಕೇಳಿಲ್ಲ. ಜತೆಗೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ, ಬಜೆಟ್‌ ಮೇಲಿನ ಚರ್ಚೆಯಲ್ಲೂ ಸಕ್ರಿಯವಾಗಿ ಪಾಲ್ಗೊಂಡಿಲ್ಲ.

ಚುನಾವಣೆ ನಡೆದ ನಂತರ ಹೊಸದಾಗಿ ಚುನಾಯಿತರಾದವರು, ಪುನರಾಯ್ಕೆಗೊಂಡವರು ಮೊದಲ ಅಧಿವೇಶನದಲ್ಲಿ ಮಾತನಾಡುವುದು ಸಹಜ. ಆದರೆ, ಕಳೆದ ಅಧಿವೇಶನದಲ್ಲಿ “ಮೌನ’ವಾಗಿದ್ದವರ ಸಂಖ್ಯೆಯೇ ಹೆಚ್ಚು. ಪ್ರತಿಪಕ್ಷದವರಿಗಿಂತ ಆಡಳಿತ ಪಕ್ಷದವರೇ ಹೆಚ್ಚು ಪ್ರಶ್ನೆಗಳನ್ನು ಕೇಳಿರುವುದು ವಿಶೇಷ.

ರಾಜ್ಯ ವಿಧಾನಸಭೆ ಇತಿಹಾಸದಲ್ಲಿ ಅತಿ ಹೆಚ್ಚು 104 ಪ್ರತಿಪಕ್ಷದ ಸದಸ್ಯರು ಹಾಗೂ 100ಕ್ಕೂ ಹೆಚ್ಚು ಹೊಸ ಸದಸ್ಯರನ್ನು ಹೊಂದಿರುವುದು 15ನೇ ವಿಧಾನಸಭೆಯ ವೈಶಿಷ್ಟé. ಜುಲೈ 2 ರಿಂದ 13ರವರೆಗೆ ಹತ್ತು ದಿನಗಳ ಕಾಲ ನಡೆದ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನದಲ್ಲಿ  ಶೇ. 90 ಹಾಜರಾತಿ ಕಂಡು ಬಂದಿದೆ. ಆದರೆ, ಸದನದ ಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡವರ ಸಂಖ್ಯೆ ಕಡಿಮೆಯಿದೆ.

26 ಜನ ಸಚಿವರು ಮತ್ತು ಸಭಾಧ್ಯಕ್ಷ ಹಾಗೂ ಉಪ ಸಭಾಧ್ಯಕ್ಷರನ್ನು ಹೊರತುಪಡಿಸಿ ಉಳಿದವರು ತಮ್ಮ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿ ಸರ್ಕಾರದಿಂದ ಉತ್ತರ ಪಡೆಯಲು ಅವಕಾಶವಿತ್ತಾದರೂ 104 ಜನ ಸದಸ್ಯರು ಯಾವುದೇ ಪ್ರಶ್ನೆ ಕೇಳಿಲ್ಲ.

10 ದಿನಗಳ ಅಧಿವೇಶನದಲ್ಲಿ ಕೊನೆಯ ಐದು ದಿನ ಮಾತ್ರ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್‌ನ ಎನ್‌.ಎ. ಹ್ಯಾರಿಸ್‌ ಹಾಗೂ ಪ್ರತಿಪಕ್ಷದ ಮುಖ್ಯ ಸಚೇತಕ ವಿ. ಸುನಿಲ್‌ ಕುಮಾರ್‌ ತಲಾ 20 ಪ್ರಶ್ನೆಗಳನ್ನು ಕೇಳಿದ್ದು, ಅತಿ ಹೆಚ್ಚು ಪ್ರಶ್ನೆ ಕೇಳಿದವರಾಗಿದ್ದಾರೆ. ಕಾಂಗ್ರೆಸ್‌ನ ಯಶವಂತರಾಯಗೌಡ ಪಾಟೀಲ್‌ ಹಾಗೂ ಬಿಜೆಪಿಯ ಅಪ್ಪಚ್ಚು ರಂಜನ್‌ ನಂತರದ ಸ್ಥಾನದಲ್ಲಿದ್ದು ತಲಾ 19 ಪ್ರಶ್ನೆಗಳನ್ನು ಕೇಳಿದ್ದಾರೆ.

ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನದಲ್ಲಿ ಸುಮಾರು 19 ಜನ ಹೊಸ ಶಾಸಕರು ಪ್ರಶ್ನೋತ್ತರ ಕಲಾಪದಲ್ಲಿ ಸಕ್ರಿಯರಾಗಿ ಪ್ರಶ್ನೆಗಳನ್ನು ಕೇಳಿದ್ದು, ಉಮಾನಾಥ ಕೋಟ್ಯಾನ್‌ 18 ಪ್ರಶ್ನೆಗಳನ್ನು ಕೇಳಿ ಅತಿ ಹೆಚ್ಚು ಪ್ರಶ್ನೆ ಕೇಳಿರುವ ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರಾಗಿದ್ದಾರೆ. ಉಳಿದಂತೆ  ರಾಜೇಶ್‌ ನಾಯಕ್‌, ಬಸವರಾಜ್‌ ಮತ್ತಿಮೂಡ, ಹಾಲಪ್ಪ ಆಚಾರ್‌ ಸೇರಿದಂತೆ ಹೊಸಬರು ಹತ್ತು, ಹನ್ನೆರಡು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದಾರೆ.

ಇನ್ನು 8 ಶಾಸಕರು ಅತಿ ಕಡಿಮೆ ಅಂದರೆ ಕೇವಲ ಒಂದೊಂದು ಪ್ರಶ್ನೆಗಳನ್ನು ಕೇಳಿದ್ದಾರೆ. ಬಳ್ಳಾರಿ ವಿರೂಪಾಕ್ಷಪ್ಪ, ರಾಜಾ ವೆಂಕಟಪ್ಪ ನಾಯಕ್‌, ಜಿ.ಎಚ್‌.ತಿಪ್ಪಾರೆಡ್ಡಿ, ಎಂ.ಎಸ್‌. ಸೋಮಲಿಂಗಪ್ಪ, ಬಿ.ಸಿ. ಗೌರಿ ಶಂಕರ್‌, ಸುನಿಲ್‌ ನಾಯ್ಕ, ದಿನಕರ್‌ ಶೆಟ್ಟಿ, ಶಿವರಾಮ್‌ ಹೆಬ್ಟಾರ್‌ ಒಂದೇ ಪ್ರಶ್ನೆ ಕೇಳಿ ತೃಪ್ತಿ ಪಟ್ಟಿದ್ದಾರೆ.

ಆಡಳಿತ ಪಕ್ಷದವರೇ ಹೆಚ್ಚು:
ಸಾಮಾನ್ಯವಾಗಿ ಸರ್ಕಾರದ ವಿರುದ್ಧ ಹಾಗೂ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಬಗ್ಗೆ ಹೆಚ್ಚು ಪ್ರಶ್ನೆಗಳನ್ನು ಕೇಳುವುದು ಪ್ರತಿಪಕ್ಷದ ಸದಸ್ಯರು. ಆದರೆ, ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷದವರಿಗಿಂತ ಆಡಳಿತ ಪಕ್ಷದ ಸದಸ್ಯರೇ ಹೆಚ್ಚಿನ ಪ್ರಶ್ನೆಗಳನ್ನು ಕೇಳಿದ್ದಾರೆ. 104 ಪ್ರತಿ ಪಕ್ಷದ ಸದಸ್ಯರಲ್ಲಿ 40 ಜನ ಮಾತ್ರ ಪ್ರಶ್ನೆಗಳನ್ನು ಕೇಳಿದ್ದಾರೆ. 53 ಜನ ಆಡಳಿತ ಪಕ್ಷದ ಸದಸ್ಯರು ಪ್ರಶ್ನೆಗಳನ್ನು ಕೇಳಿದ್ದಾರೆ.

ವಿಧಾನಸಭೆಗೆ ಎಂಟು ಜನ ಮಹಿಳೆಯರು ಆಯ್ಕೆಯಾಗಿದ್ದು, ಎರಡನೇ ಬಾರಿ ಆಯ್ಕೆಯಾಗಿರುವ ಬಿಜೆಪಿಯ ಶಶಿಕಲಾ ಜೊಲ್ಲೆ  9 ಪ್ರಶ್ನೆಗಳನ್ನು ಕೇಳಿದ್ದು, ಉಳಿದವರೆಲ್ಲರೂ ಹೊಸ ಶಾಸಕಿಯರಾಗಿದ್ದು, ಪ್ರಶ್ನೆ ಕೇಳುವ ಗೋಜಿಗೆ ಹೋಗಿಲ್ಲ.

ಗಮನ ಸೆಳೆದವರು ಯಾರಾರು?
ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನದಲ್ಲಿ  ಬಜೆಟ್‌ ಮೇಲಿನ ಚರ್ಚೆ ಹಾಗೂ ವಿವಿಧ ವಿಷಯಗಳ ಮೇಲಿನ ಚರ್ಚೆಯಲ್ಲಿ ಕೆಲವು ಹೊಸ ಶಾಸಕರು ಸಕ್ರಿಯವಾಗಿ ಭಾಗವಹಿಸಿ, ಸದನ ಹಾಗೂ ರಾಜ್ಯದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಜೇಶ್‌ ನಾಯಕ್‌, ಉಮಾನಾಥ ಕೋಟ್ಯಾನ್‌, ರಾಜಕುಮಾರ್‌ ಪಾಟೀಲ್‌, ಮಹಿಳಾ ಸದಸ್ಯೆಯರಾದ ಬಿಜೆಪಿಯ ಆರ್‌. ಪೂರ್ಣಿಮಾ, ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಟಾಳ್ಕರ್‌ ಗಮನ ಸೆಳೆದು ನಾಯಕರ ಮೆಚ್ಚುಗೆಯನ್ನೂ ಪಡೆದಿದ್ದಾರೆ.

10 ದಿನಗಳ ಕಾಲ ನಡೆದಿತ್ತು ಅಧಿವೇಶನ (ಜು.5ರಿಂದ 13)
93 ಜನ ಪ್ರಶ್ನೆ ಕೇಳಿದ ಸದಸ್ಯರು.
104 ಪ್ರಶ್ನೆ ಕೇಳದ ಸದಸ್ಯರು
28 ಜನ ಸಚಿವರು ಮತ್ತು ಸಭಾಧ್ಯಕ್ಷ ಮತ್ತು ಉಪಸಭಾಧ್ಯಕ್ಷ.
19 ಜನ ಪ್ರಶ್ನೆ ಕೇಳಿದ ಹೊಸ ಶಾಸಕರು.
20 ಪ್ರಶ್ನೆ ಕೇಳಿರುವ ಹ್ಯಾರಿಸ್‌ ಮತ್ತು ಸುನಿಲ್‌ ಕುಮಾರ್‌
8 ಜನ ಒಂದೇ ಪ್ರಶ್ನೆ ಕೇಳಿದವರು.
7 ಜನ ಪ್ರಶ್ನೆ ಕೇಳದ ಮಹಿಳಾ ಶಾಸಕಿಯರು

– ಶಂಕರ ಪಾಗೋಜಿ
 

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.