ಮೌಲ್ಯಮಾಪನ ಬಹಿಷ್ಕರಿಸಿದರೆ ಆರು ತಿಂಗಳು ಜೈಲು
Team Udayavani, Mar 18, 2017, 9:47 AM IST
ಬೆಂಗಳೂರು: ಶಿಕ್ಷಕ ವರ್ಗ ಪರೀಕ್ಷಾ ಮೌಲ್ಯಮಾಪನವನ್ನು ಬಹಿಷ್ಕರಿಸಿ ಪ್ರತಿಭಟಿಸಿದರೆ ಆರು ತಿಂಗಳು ಜೈಲು ಅಥವಾ ಒಂದು ಲಕ್ಷ ರೂ. ವರೆಗೆ ದಂಡ ತೆರಬೇಕಾಗುತ್ತದೆ. ಪಿಯುಸಿ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಿದ ಬೆನ್ನಲ್ಲೇ ಕರ್ನಾಟಕ ಶಿಕ್ಷಣ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಿರುವುದು ಮಹತ್ವ ಎನಿಸಿದೆ. ತೀವ್ರ ವಿವಾದಕ್ಕೆ ಒಳಗಾಗಿದ್ದ ಹಾಗೂ ಉಪನ್ಯಾಸಕರು ಮತ್ತು ಶಿಕ್ಷಕರ ವಿರೋಧಕ್ಕೆ ಕಾರಣವಾಗಿದ್ದ ಈ ಮಸೂದೆಗೆ ಈಗ ಪರಿಷತ್‌ನ ಅನುಮೋದನೆ ದೊರೆತಿರುವುದರಿಂದ ಮತ್ತೂಮ್ಮೆ ವಿಧಾನ ಸಭೆಯಲ್ಲಿ ಒಪ್ಪಿಗೆ ಪಡೆದ ಅನಂತರ ರಾಜ್ಯಪಾಲರ ಅನುಮೋದನೆ ಪಡೆಯಬೇಕಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸುವ ಅಂಶವೂ ಈ ಮಸೂದೆಯಲ್ಲಿದೆ.
ಕಳೆದ ಬಾರಿ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದ ರಾಜ್ಯ ಸರಕಾರ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಕ್ಕೆ ಕಡಿವಾಣ ಹಾಕುವುದು ಹಾಗೂ ಮೌಲ್ಯಮಾಪನ ಬಹಿಷ್ಕರಿಸುವ ಶಿಕ್ಷಕರು, ಉಪನ್ಯಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಸಂಬಂಧ ಕರ್ನಾಟಕ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿತ್ತು. ಫೆಬ್ರವರಿಯಲ್ಲಿ ನಡೆದ ಅಧಿವೇಶನದ ವೇಳೆ ಮಸೂದೆ ವಿಧಾನಸಭೆಯಲ್ಲಿ ಅಂಗೀಕೃತವಾಗಿತ್ತು.
ಆದರೆ ವಿಧಾನ ಪರಿಷತ್ ಕಲಾಪ ದಲ್ಲಿ ಚರ್ಚೆ ವೇಳೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶೀಲನ ಸಮಿತಿಗೆ ವಹಿಸಿ 15 ದಿನದಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದರು. ಅದರಂತೆ ಸಮಿತಿ ಇತ್ತೀಚೆಗೆ ಸಭಾಪತಿಗಳಿಗೆ ವರದಿ ಸಲ್ಲಿಸಿತ್ತು. ವಿಧಾನಪರಿಷತ್ತಿನ ಪರಿಶೀಲನ ಸಮಿತಿಯ ವರದಿಯಲ್ಲಿ ಶಿಫಾರಸು ಮಾಡಲಾದ ತಿದ್ದುಪಡಿಗಳ ರೀತ್ಯಾ ಶಿಕ್ಷಣ ಸಚಿವ ತನ್ವೀರ್ ಸೇಠ್ ಮಸೂದೆಯನ್ನು ಮಂಡಿಸಿದರು. ಶುಕ್ರವಾರ ಮಸೂದೆ ಮಂಡನೆಯಾಗುತ್ತಿದ್ದಂತೆಯೇ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿತು. ವಿರೋಧದ ನಡುವೆಯೇ ಮಸೂದೆ ಮಂಡಿಸಿ ಧ್ವನಿಮತದ ಅನುಮೋದನೆ ಪಡೆಯಲಾಯಿತು.
ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದವರಿಗೆ ವಿಧಿಸಲಾಗುವ ಶಿಕ್ಷೆ, ದಂಡ ಪ್ರಮಾಣ, ಪರೀಕ್ಷಾ ಅಕ್ರಮ ನಡೆಸಿದ ವಿದ್ಯಾರ್ಥಿಗಳನ್ನು 3 ವರ್ಷ ಡಿಬಾರ್ ಮಾಡುವ ತಿದ್ದುಪಡಿ ಮಸೂದೆಯ ಅಂಶಗಳಿಗೆ ಬಿಜೆಪಿ – ಜೆಡಿಎಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಶಿಕ್ಷಕರು, ಉಪನ್ಯಾಸಕರು, ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಕಾಯ್ದೆಗೆ ತಿದ್ದುಪಡಿ ತಂದಿಲ್ಲ. ಶಿಕ್ಷಣ ವ್ಯವಸ್ಥೆ ಸುಧಾರಣೆ , ವಿದ್ಯಾರ್ಥಿಗಳು ಹಾಗೂ ಹೆತ್ತವರ ಹಿತವನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಸಚಿವ ತನ್ವೀರ್ ಸೇಠ್ ತಿದ್ದುಪಡಿ ಮಸೂದೆಯನ್ನು ಸಮರ್ಥಿಸಿಕೊಂಡರು. ಇದಕ್ಕೆ ಅಸಮಾಧಾನಗೊಂಡ ವಿಪಕ್ಷ ಸದಸ್ಯರು ಸಭಾತ್ಯಾಗ ನಡೆಸಿದರೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸದಸ್ಯರು ಸಚಿವರ ಬೆಂಬಲಕ್ಕೆ ನಿಂತರು.
ಸಾಕಷ್ಟು ಚರ್ಚೆ ಬಳಿಕ ಅಂತಿಮವಾಗಿ ಮಾತನಾಡಿದ ಸಚಿವ ತನ್ವೀರ್ ಸೇಠ್, ‘ವಿದ್ಯಾರ್ಥಿಗಳು ಅಕ್ರಮದಲ್ಲಿ ತೊಡಗದಂತೆ ಮಾಡಲು ಮೂರು ವರ್ಷದವರೆಗೆ ಡಿಬಾರ್ ಮಾಡುವ ಅಂಶ ಸೇರಿಸಲಾಗಿದೆ. ಕೆಲವು ಶಿಕ್ಷಣ ಸಂಸ್ಥೆಗಳು ಶೇ. 100 ಫಲಿತಾಂಶ ಪಡೆಯಲು ಪರೀಕ್ಷಾ ಅಕ್ರಮಕ್ಕೆ ಸಹಕಾರ ನೀಡುತ್ತಿವೆ. ತಪ್ಪು ಮಾಡಿದವರಿಗೆ ಶಿಕ್ಷೆ ನೀಡಲೇಬೇಕಾಗುತ್ತದೆ’ ಎಂದರು.
ಶಿಕ್ಷಣ ಕಾಯ್ದೆ ತಿದ್ದುಪಡಿ ಮಸೂದೆ ಮುಖ್ಯಾಂಶಗಳು
ಪರೀಕ್ಷಾ ಅಕ್ರಮ ನಡೆಸುವ ಉಪನ್ಯಾಸಕರು/ ಶಿಕ್ಷಕರು, ಉದ್ಯೋಗಿ, ಸಿಬಂದಿ ವಿರುದ್ಧ ಕ್ರಮ- ಮೊದಲ ಅಪರಾಧಕ್ಕೆ ಮೂರು ವರ್ಷ ಜೈಲು ಶಿಕ್ಷೆ, 5 ಲಕ್ಷ ರೂ. ದಂಡ; ಎರಡನೇ ಅಪರಾಧ/ ಮುಂದುವರಿಕೆಗೆ ಕನಿಷ್ಠ ಐದು ವರ್ಷ ಜೈಲು ವಾಸ, 5 ಲಕ್ಷ ರೂ. ದಂಡ.
ಸ್ಕೀಮ್ ಆಫ್ ಇವ್ಯಾಲ್ಯುಯೇಷನ್ ಉಲ್ಲಂಘನೆ- ಆರು ತಿಂಗಳು ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ವಿಸ್ತರಿಸಬಹುದಾದ ದಂಡ
ಪರೀಕ್ಷಾ ಅಕ್ರಮದಲ್ಲಿ ತೊಡಗುವ ವಿದ್ಯಾರ್ಥಿ- ಅಹವಾಲು ಹೇಳಿಕೊಳ್ಳಲು ಅವಕಾಶ ಕಲ್ಪಿಸಿದ ಬಳಿಕ ಫಲಿತಾಂಶ ತಡೆಹಿಡಿಯುವುದು, ಅಮಾನತ್ತಿನಲ್ಲಿಡುವುದು ಅಥವಾ ರದ್ದುಗೊಳಿಸುವುದು ಅಥವಾ ಮೂರು ವರ್ಷಗಳವರೆಗೆ ಪರೀಕ್ಷೆ ತೆಗೆದುಕೊಳ್ಳದಂತೆ ಡಿಬಾರ್.
ಪರೀಕ್ಷಾ ಅಕ್ರಮಕ್ಕೆ ನೆರವಾಗುವ ಶಿಕ್ಷಣ ಸಂಸ್ಥೆ, ಪರೀಕ್ಷಾ ಕೇಂದ್ರ- ಶಿಕ್ಷಣ ಸಂಸ್ಥೆ ಅಥವಾ ಪರೀಕ್ಷಾ ಕೇಂದ್ರಕ್ಕೆ ತನ್ನ ಅಹವಾಲು ಸಲ್ಲಿಸಲು ಅವಕಾಶ ನೀಡಿ ಬಳಿಕ ಶೈಕ್ಷಣಿಕ ಸಂಸ್ಥೆ ಅಥವಾ ಪರೀಕ್ಷಾ ಕೇಂದ್ರದ ಮಾನ್ಯತೆಯನ್ನು ಮೂರು ವರ್ಷಗಳವರೆಗೆ ಅಮಾನತಿನಲ್ಲಿಡಲು ಅಥವಾ ಹಿಂಪಡೆಯಲು ಶಿಫಾರಸು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.