ರಾಜ್ಯದ ಆರಕ್ಷಕರು ದೇಶಕ್ಕೆ ಮಾದರಿ
ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದ ಸಿಎಂಯಡಿಯೂರಪ್ಪ
Team Udayavani, Jul 14, 2021, 4:08 PM IST
ಬೆಂಗಳೂರು: ನಾಲ್ಕೈದು ವರ್ಷಗಳಿಂದ ಕೋವಿಡ್ ಸೇರಿ ಹಲವು ಕಾರಣಗಳಿಂದ ತಡೆಹಿಡಿಯಲಾಗಿದ್ದ 236 ಅಗ್ನಿಶಾಮಕ, ಗೃಹರಕ್ಷಕ ಮತ್ತಿತರ ಸಿಬ್ಬಂದಿಗೆ ಮಂಗಳವಾರ “ಮುಖ್ಯಮಂತ್ರಿಗಳ ಪದಕ’ ಪ್ರದಾನ ಮಾಡಲಾಯಿತು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿ ಕೊಂಡಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ,2015-2020ನೇ ಸಾಲಿನಅವಧಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಪದಕ ಪ್ರದಾನ ಮಾಡಿ ಸನ್ಮಾನಿಸಿದರು.
ಪದಕ ಪ್ರದಾನ ಮಾಡಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರಮಟ್ಟದಲ್ಲಿ ಪೊಲೀಸ್ ಮತ್ತು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಕಾರ್ಯ ವೈಖರಿ ಮಾದರಿಯಾಗಿದೆ. ಕೊರೊನಾ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಪಡೆಗಳ ಸೇವೆ ಸ್ಮರಣೀಯ ವಾಗಿದೆ. ಮುಂದಿನ ದಿನಗಳಲ್ಲಿ ತಂತ್ರಜ್ಞಾನಕ್ಕೆ ಅನುಗುಣವಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಇದಕ್ಕೆ ಎಲ್ಲ ರೀತಿಯ ಸಹಕಾರನೀಡಲುಸರ್ಕಾರ ಬದ್ಧ ಎಂದು ಹೇಳಿದರು.
ತಾಲೂಕಿಗೊಂದು ಅಗ್ನಿ ಶಾಮಕ ಠಾಣೆ: ಅತ್ಯಾಧುನಿಕ ಉಪಕರಣಗಳನ್ನು ಪೂರೈಸುವುದರ ಜತೆಗೆ ರಾತ್ರಿ ಗ ಸ್ತು ಹೆಚ್ಚಿಸಲಾಗಿದೆ. ನಗರದಲ್ಲಿ 7,500 ಸಿಸಿ ಕ್ಯಾಮೆರಾಗಳನ್ನು ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ತಾಲೂಕುಗಳಲ್ಲಲಿ ಅಗ್ನಿಶಾಮಕ ಠಾಣೆ ತೆರೆಯಲಾಗುತ್ತಿದೆ. ಪ್ರಸ್ತುತ 214 ಅಗ್ನಿಶಾಮಕ ಠಾಣೆಗಳಿವೆ ಎಂದು ಮಾಹಿತಿ ನೀಡಿದರು.
ಬಸವರಾಜ ಬೊಮ್ಮಾಯಿ ಮಾತನಾಡಿ, ಆರ್ಥಿಕ ಅಪರಾಧಗಳು, ಸೈಬರ್ ಕ್ರೈಂ, ಡ್ರಗ್ ಮಾಫಿಯಾ ಮತ್ತಿತರ ಅಪರಾಧಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ನಾವೂ ಸದೃಢರಾಗಬೇಕು. ಇದಕ್ಕಾಗಿ ತಂತ್ರಜ್ಞಾನದ ಜತೆಗೆ ಸಾಗುವ ಅವಶ್ಯಕತೆ ಇದೆ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಗೃಹ ರಕ್ಷಕ ದಳದ ಡಿಜಿಪಿ ಡಾ.ಅಮರ್ ಕುಮಾರ್ ಪಾಂಡೆ, ಎಡಿಜಿಪಿ ಸುನೀಲ್ ಅಗರ್ ವಾಲ್, ಎಡಿಜಿಪಿ ಮಾಲಿನಿ ಕೃಷ್ಣ ಮೂರ್ತಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತ್ಮಾತ
Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.