ಹೊಸ ತಾಲೂಕುಗಳಲ್ಲಿ ಕಚೇರಿಗೆ ಕ್ರಮ
Team Udayavani, Sep 20, 2018, 6:20 AM IST
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 50 ತಾಲೂಕುಗಳಿಗೆ ವಿವಿಧ ಕಚೇರಿಗಳನ್ನು ಮಂಜೂರು ಮಾಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಅಲ್ಲದೆ, ಇನ್ನಷ್ಟು ಹೊಸ ತಾಲೂಕುಗಳ ರಚನೆ ಕುರಿತು ಬೇಡಿಕೆ ಬಂದಿದ್ದು, ಈ ಕುರಿತು ನಿಜವಾಗಿಯೂ ತಾಲೂಕು ಆಗಬೇಕಾಗಿರುವ ಪ್ರದೇಶಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ತಿಳಿಸಿದ್ದಾರೆ.
ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತಂತೆ ಕಂದಾಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಬುಧವಾರ ಸಭೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೊಸ ತಾಲೂಕು ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಮತ್ತು ಕಚೇರಿಗಳನ್ನು ನಿರ್ಮಿಸಲು ಅಗತ್ಯ ಹಣಕಾಸು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರು ನೀಡಿರುವ ವರದಿ ಪ್ರಕಾರ ಹೊಸದಾಗಿ ರಚನೆಯಾದ ತಾಲೂಕುಗಳಲ್ಲಿ ಕನಿಷ್ಟ 14 ಇಲಾಖೆಗಳು ಕಾರ್ಯನಿರ್ವಹಿಸಬೇಕಾಗುತ್ತದೆ. ಅದರಂತೆ ತಾಲೂಕು ಮಟ್ಟದ ಕಚೇರಿಗಳನ್ನು ಸ್ಥಾಪಿಸುವ ಕುರಿತು ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಹೊಸ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಿಸುವ ಬಗ್ಗೆಯೂ ಚರ್ಚೆಯಾಯಿತು. ಈ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆ ಕುರಿತಂತೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಅಕ್ರಮ-ಸಕ್ರಮ ಯೋಜನೆಯಡಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ 94 (ಸಿ) ಅಡಿ 26,922 ಅರ್ಜಿಗಳನ್ನು ಹಾಗೂ ಮತ್ತು 94 (ಸಿಸಿ) ಅಡಿ 13,971 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸಾಮಾಜಿಕ ಭದ್ರತೆ ಪಿಂಚಣಿ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಕುರಿತು ಅಂಚೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗಿದೆ ಎಂದು ಹೇಳಿದರು.
ರೈತರ ಆತ್ಮಹತ್ಯೆ ಪ್ರಕರಣದಲ್ಲಿ 2018ರ ಜೂನ್ ಅಂತ್ಯದವರೆಗೆ 35 ಪ್ರಕರಣಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗಿತ್ತು. 2018ರ ಆಗÓr… ಅಂತ್ಯಕ್ಕೆ ಈ ಪ್ರಕರಣಗಳ ವಿಲೇವಾರಿ ಚುರುಕುಗೊಂಡಿದ್ದು, 114 ಪ್ರಕರಣಗಳಲ್ಲಿ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ರಾಜ್ಯದಲ್ಲಿ ಒಟ್ಟು 2742 ಕಂದಾಯ ಗ್ರಾಮಗಳನ್ನು ರಚಿಸಬೇಕಾಗಿದ್ದು, 1413 ಕಂದಾಯ ಗ್ರಾಮಗಳ ರಚನೆಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. 724 ಕಂದಾಯ ಗ್ರಾಮಗಳ ರಚನೆಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದರು.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವಿವಿಧ ಐದು ಸೇವೆಗಳನ್ನು ಆನ್‌ಲೈನ್‌ಲಲ್ಲಿ ಒದಗಿಸಲು ಸಿದ್ಧತೆ ನಡೆದಿದ್ದು, ಈ ಬಗ್ಗೆ ಕಾನೂನು ಇಲಾಖೆಯ ಸಲಹೆ ಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಖತ್ರಿ , ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ(ವಿಪತ್ತು ನಿರ್ವಹಣೆ) ಗಂಗಾರಾಮ್ ಬಡೇರಿಯಾ, ಭೂ ಮಾಪನ ಇಲಾಖೆ ಆಯುಕ್ತ ಮುನೀಶ್ ಮೌದ್ಗಿಲ…, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಹಾಪರಿವೀಕ್ಷಕ ಡಾ.ಕೆ.ವಿ.ತ್ರಿಲೋಕಚಂದ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.