ಎಸ್‌ಟಿಪಿ ಸ್ವಚ್ಛಗೊಳಿಸಲು ಹೋಗಿ ಪ್ರಾಣಬಿಟ್ಟರು


Team Udayavani, Jan 8, 2018, 6:00 AM IST

Ban08011806Medn.jpg

ಬೆಂಗಳೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ವಚ್ಛಗೊಳಿಸುವ ವೇಳೆ ಮೂವರು ಕಾರ್ಮಿಕರು ಆಯತಪ್ಪಿ ಗುಂಡಿಯೊಳಗೆ ಬಿದ್ದು, ಉಸಿರುಗಟ್ಟಿ ಮೃತಪಟ್ಟಿರುವ ಧಾರುಣ ಘಟನೆ ಭಾನುವಾರ ಬೆಳಗ್ಗೆ ಎಚ್‌ಎಸ್‌ಆರ್‌ ಲೇಔಟ್‌ ಬಳಿಯ ಬಂಡೆಪಾಳ್ಯದಲ್ಲಿ ನಡೆದಿದೆ.

ಇಲ್ಲಿನ ಸೋಮಸಂದ್ರಪಾಳ್ಯದ ಎನ್‌.ಡಿ.ಸಫ‌ಲ್‌ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಇಂಥದ್ದೊಂದು ದುರಂತಕ್ಕೆ ಸಾಕ್ಷಿಯಾದರು. ಮ್ಯಾನ್‌ಹೋಲ್‌ಗೆ ಇಳಿದಿದ್ದ ಸರ್ಜಾಪುರ ಮುಖ್ಯರಸ್ತೆಯ ಕೈಗೊಂಡನಹಳ್ಳಿ ನಿವಾಸಿ ನಾರಾಯಣಸ್ವಾಮಿ (40), ಸೋಮಸಂದ್ರಪಾಳ್ಯದ ಶ್ರೀನಿವಾಸ್‌ (38) ಹಾಗೂ ಮಹದೇವಗೌಡ (37) ಸಾವಿಗೀಡಾದ ದುರ್ದೈವಿಗಳು.

ಅಪಾರ್ಟ್‌ಮೆಂಟ್‌ನಲ್ಲಿದ್ದ ಎಸ್‌ಟಿಪಿ ಘಟಕ ಶುಚಿಗೊಳಿಸಲು ಫ‌ರ್ನಾಂಡಿಸ್‌ ಎಂಬುವವರಿಂದ ಕಾರ್ಮಿಕ ನಾರಾಯಣಸ್ವಾಮಿ ಗುತ್ತಿಗೆ ಪಡೆದುಕೊಂಡಿದ್ದರು. ತಮಗೆ ಪರಿಚಯವಿದ್ದ ಶ್ರೀನಿವಾಸ್‌ ಮತ್ತು ಮಹದೇವ ಗೌಡರನ್ನು ಸ್ವಚ್ಛತಾ ಕಾರ್ಯಕ್ಕೆ ಕರೆದೊಯ್ದಿದ್ದರು. ತ್ಯಾಜ್ಯ ನೀರು ಸಂಸ್ಕರಣಾ ಘಟಕದೊಳಗೆ ಕೆಲಸ ಮಾಡುತ್ತಿರುವಾಗ ಮೊದಲು ನಾರಾಯಣಸ್ವಾಮಿ ಆಯತಪ್ಪಿ ಗುಂಡಿಯೊಳಗೆ ಬಿದ್ದಿದ್ದಾರೆ. ಕೂಡಲೇ ಶ್ರೀನಿವಾಸ್‌ ಮತ್ತು ಮಹದೇವಗೌಡ ನಾರಾಯಣಸ್ವಾಮಿಯ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ, ಫ‌ಟಕದಲ್ಲಿ ಮಿಥೇನಿಯಂ ವಿಷಾನಿಲ ಹೆಚ್ಚು ಇದ್ದಿದ್ದªರಿಂದ ಉಸಿರಾಡಲು ಸಾಧ್ಯವಾಗದೇ, ಮೇಲಕ್ಕೂ ಬರಲಾಗದೇ ಮೂವರೂ ಕಾರ್ಮಿಕರು ಅಸುನೀಗಿದ್ದಾರೆ.

ಮುಂಜಾಗ್ರತೆ ಅಳವಡಿಸಿಕೊಂಡಿರಲಿಲ್ಲ:
ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳದೇ ಸುಮಾರು 15 ಅಡಿ ಆಳ ಇರುವ ಎಸ್‌ಟಿಪಿ ಘಟಕಕ್ಕೆ ಏಣಿ ಮೂಲಕ ಇಳಿದಿದ್ದಾರೆ. ಈ ವೇಳೆ ಏಣಿಯಿಂದ ಜಾರಿ, ನಾರಾಯಣಸ್ವಾಮಿ ಗುಂಡಿಯೊಳಗೆ ಬಿದ್ದಿದ್ದಾರೆ. ಇದನ್ನು ಕಂಡ ಶ್ರೀನಿವಾಸ್‌ ಮತ್ತು ಮಹದೇವಗೌಡ ತಮ್ಮ ಕೈ ಚಾಚಿ ಮೇಲಕ್ಕೆತ್ತಲು ಯತ್ನಿಸಿದ್ದಾರೆ. ಗುಂಡಿಯಲ್ಲಿ ತುಂಬಿದ್ದ ಮಲದಲ್ಲಿ ಹೂತು ಹೋಗಿದ್ದರಿಂದ ಮೇಲಕ್ಕೆ ಬರಲು ಸಾಧ್ಯವಾಗಲಿಲ್ಲ. ಕಂಗಾಲಾದ ನಾರಾಯಣಸ್ವಾಮಿ ಏಕಾಏಕಿ ಶ್ರೀನಿವಾಸ ಅವರ ಕೈಯನ್ನು ಬಲವಾಗಿ ಹಿಡಿದು ಎಳೆದಿದ್ದಾರೆ. ಶ್ರೀನಿವಾಸ್‌ ಕೂಡ ಗುಂಡಿಯೊಳಗೆ ಬಿದ್ದರು. ಇದರಿಂದ ಗಾಬರಿಯಾದ ಮಹದೇವ ಗೌಡ ಅವರಿಬ್ಬರ ರಕ್ಷಣೆಗೆ ಕೆಳಕ್ಕೆ ಇಳಿದಿದ್ದಾರೆ. ಮೂವರೂ ವಿಷಾನಿಲದಿಂದ ಉಸಿರಾಡಲು ಮೂವರಿಗೂ ಸಾಧ್ಯವಾಗಲಿಲ್ಲ.

ಭದ್ರತಾ ಸಿಬ್ಬಂದಿ ಇದನ್ನು ಗಮನಿಸಿ 11.45ರ ಸುಮಾರಿಗೆ ಅಪಾರ್ಟ್‌ಮೆಂಟ್‌ನ ನಿರ್ವಹಣಾಧಿಕಾರಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಿದ್ದಾರೆ. ಕೂಡಲೇ ಪೊಲೀಸರಿಗೂ ದೂರು ನೀಡಿದ್ದಾರೆ. 12.15ರ ಸುಮಾರಿಗೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೂವರು ಕಾರ್ಮಿಕರನ್ನು ಹೊರಕ್ಕೆತ್ತಿದರು. ಆ ಕ್ಷಣದಲ್ಲಿ ಮಹದೇವ ಗೌಡ ಉಸಿರಾಡುತ್ತಿದ್ದರು. ಆದರೆ, ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ಕರೆದೊಯ್ಯುವ  ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಶ್ರೀನಿವಾಸ್‌ ಮತ್ತು ನಾರಾಯಣಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಮೂವರು ವೃತ್ತಿಪರರಲ್ಲ!
ಕೋಲಾರ ಮೂಲದ ನಾರಾಯಣಸ್ವಾಮಿ ಎಲೆಕ್ಟ್ರಿಷಿಯನ್‌ ಆಗಿದ್ದು, ಸಣ್ಣ-ಪುಟ್ಟ ಸ್ವಚ್ಛತಾ ಕಾರ್ಯದ ಗುತ್ತಿಗೆ ಕೆಲಸ ಮಾಡುತ್ತಿದ್ದರು. ಸರ್ಜಾಪುರ ಮುಖ್ಯರಸ್ತೆಯ ಕೈಗೊಂಡನಹಳ್ಳಿಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೆಲೆಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನ ಮಹದೇವ ಗೌಡ ಪೇಂಟಿಂಗ್‌ ಕೆಲಸ ಮಾಡಿಕೊಂಡಿದ್ದು, ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಶ್ರೀನಿವಾಸ್‌ಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಗಾರ್ಡನ್‌ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಾರೆ. ಈ ಇಬ್ಬರು ಸೋಮಸಂದ್ರಪಾಳ್ಯದಲ್ಲಿ ನೆಲೆಸಿದ್ದಾರೆ.

ಆದರೆ, ಮೂವರೂ ವೃತ್ತಿಪರ ಪೌರಕಾರ್ಮಿಕರಲ್ಲ. ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದವರಿಗೆ ಅಪಾರ್ಟ್‌ಮೆಂಟ್‌ನ ನಿರ್ವಾಹಣಾಧಿಕಾರಿ ಒಂದಿಷ್ಟು ಹಣದ ಆಮಿಷವೊಡ್ಡಿ ಘಟಕ ಶುಚಿಗೊಳಿಸಲು ಸೂಚಿಸಿದ್ದಾರೆ. ಭಾನುವಾರವಾಗಿದ್ದರಿಂದ ರಜಾದಿನ ಬೇರೆ ಕೆಲಸ ಇಲ್ಲದ್ದರಿಂದ ಸಿಗುವ ಅಲ್ಪ ಮೊತ್ತಕ್ಕೆ ಆಸೆ ಪಟ್ಟು ಈಗ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಹಾಪೌರರಾದ ಸಂಪತ್‌ರಾಜ್‌, ಬೆಂಗಳೂರು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌, ಸ್ಥಳೀಯ ಶಾಸಕ ಸತೀಶ್‌ ರೆಡ್ಡಿ, ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌, ಡಿಸಿಪಿ ಡಾ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲಿಸಿದರು.

ಘಟನೆಯ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಆ ಬಳಿಕ ಎನ್‌ಡಿ ಸಫ‌ಲ್‌ ಅಪಾರ್ಟ್‌ಮೆಂಟ್‌ ಅಸೋಸಿಯೇಶನ್‌ ಸದಸ್ಯರು ಹಾಗೂ ನಿರ್ಲಕ್ಷ್ಯದ ಆರೋಪದಡಿ ಗುತ್ತಿಗೆ ಪಡೆದವರ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತದೆ.
– ಟಿ.ಸುನೀಲ್‌ ಕುಮಾರ್‌, ನಗರ ಪೊಲೀಸ್‌ ಆಯುಕ್ತ

ಉದಯವಾಣಿ ಕಳಕಳಿ
ಮ್ಯಾನ್‌ಹೋಲ್‌, ಎಸ್‌ಟಿಪಿಗಳನ್ನು ಸ್ವಚ್ಛಗೊಳಿಸಲು ಜಿಲ್ಲಾಡಳಿತ ಪರವಾನಗಿ ಅಗತ್ಯ. ಅಷ್ಟೇ ಅಲ್ಲ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯ. ಆದರೆ ಈ ಘಟನೆಯಲ್ಲಿ ಈ ಎಲ್ಲ ನಿಯಮಗಳನ್ನು ಉಲ್ಲಂ ಸಲಾಗಿತ್ತು. ಇಂಥದ್ದೇ ಪ್ರಕರಣ ನಿಮ್ಮೂರಲ್ಲೂ ನಡೆದೀತು. ಈ ನಿಟ್ಟಿನಲ್ಲಿ ಮುನ್ನಚ್ಚರಿಕೆ ವಹಿಸಲು ಮರೆಯಬೇಡಿ. ಮತ್ತೂಂದು ಪ್ರಾಣ ಪಕ್ಷಿ ದುರಂತ ಸಾವಿಗೆ ಕಾರಣವಾಗದಿರಲಿ.

ಟಾಪ್ ನ್ಯೂಸ್

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.