ಎಸ್‌ಟಿಪಿ ಇಲ್ಲದಿದ್ರೆ ದಂಡ
Team Udayavani, Dec 3, 2017, 1:03 PM IST
ಬೆಂಗಳೂರು: ಐವತ್ತಕ್ಕಿಂತ ಹೆಚ್ಚು ಪ್ಲ್ರಾಟ್‌ಗಳಿರುವ ವಸತಿ ಸಂಕೀರ್ಣಗಳು (ಅಪಾರ್ಟ್‌ಮೆಂಟ್) ಡಿ.31ರೊಳಗೆ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್‌ಟಿಪಿ) ಅಳವಡಿಸಿಕೊಳ್ಳದಿದ್ದರೆ ಜನವರಿ 1ರಿಂದ ದಂಡ ಪಾವತಿಸಬೇಕಾಗುತ್ತದೆ.
ಈಗಾಗಲೇ ಹೊಸದಾಗಿ ಸಂಪರ್ಕ ಪಡೆಯುವ 20ಕ್ಕೂ ಹೆಚ್ಚಿನ ಮನೆಗಳಿರುವ ಅಪಾರ್ಟ್‌ಮೆಂಟ್‌ಗಳು ಹಾಗೂ 50ಕ್ಕಿಂತ ಹೆಚ್ಚಿನ ಮನೆಗಳಿರುವ ಹಳೆ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಆ ಹಿನ್ನೆಲೆಯಲ್ಲಿ ಜಲಮಂಡಳಿಯ ಅಧಿಕಾರಿಗಳು ಡಿ.31ರೊಳಗೆ ಎಸ್‌ಟಿಪಿ ಅಳವಡಿಸಿಕೊಳ್ಳುವಂತೆ ಅಪಾರ್ಟ್‌ಮೆಂಟ್‌ಗಳಿಗೆ ಗಡುವು ನೀಡಿದೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಲಮಂಡಳಿಯ ಪ್ರಧಾನ ಅಭಿಯಂತರ ಕೆಂಪರಾಮಯ್ಯ, ನಗರದ 1,146ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳು ಈ ಆದೇಶ ಒಳಪಡಿಸಲಿದ್ದು, ಡಿಸೆಂಬರ್ 31ರೊಳಗೆ ಅಪಾರ್ಟ್‌ಮೆಂಟ್‌ಗಳು ಕಡ್ಡಾಯವಾಗಿ ಎಸ್‌ಟಿಪಿ ಅಳವಡಿಸಿಕೊಳ್ಳಬೇಕು. ಕಳೆದ ಎರಡು ವರ್ಷಗಳಿಂದ ಎಸ್‌ಟಿಪಿ ಅಳವಡಿಕೆ ಕುರಿತು ಸಾರ್ವಜನಿಕರ ಗಮನ ಸೆಳೆದಿದ್ದು, ನೋಟಿಸ್ ಸಹ ಜಾರಿಗೊಳಿಸಲಾಗಿದೆ ಎಂದರು.
ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಅಪಾರ್ಟ್‌ಮೆಂಟ್‌ಗಳು ಎಸ್‌ಟಿಪಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಂತಹ ವಿಚಾರದಲ್ಲಿ ಸಾರ್ವಜನಿಕರು ಎಸ್‌ಟಿಪಿ ಅಳವಡಿಸಿಕೊಳ್ಳುವ ಮೂಲಕ ಮಂಡಳಿಯೊಂದಿಗೆ ಕೈಜೋಡಿಸಬೇಕು. ಪ್ರಸಕ್ತ ಸಂದರ್ಭದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಎಸ್‌ಪಿಟಿಗಳು ಲಭ್ಯವಿದ್ದು, ಅಪಾರ್ಟ್‌ಮೆಂಟ್‌ಗಳು ಡಿಸೆಂಬರ್ ಅಂತ್ಯದೊಳಗೆ ಅಳವಡಿಕೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಎಸ್‌ಟಿಪಿ ಕಡ್ಡಾಯ ಯಾರಿಗೆ ಅನ್ವಯ?: 50ಕ್ಕಿಂತಲೂ ಹೆಚ್ಚಿನ ಮನೆಗಳಿರುವ ಹಳೆಯ ಅಪಾರ್ಟ್‌ಮೆಂಟ್‌ಗಳು, ಹೊಸದಾಗಿ ನೀರಿನ ಸಂಪರ್ಕ ಪಡೆಯುವ 20ಕ್ಕೂ ಹೆಚ್ಚು ಮನೆಗಳಿರುವ ಅಪಾರ್ಟ್‌ಮೆಂಟ್‌ಗಳು ಅಥವಾ 5 ಸಾವಿರ ಚದರ ಮೀಟರ್‌ಗಳಲ್ಲಿ ನಿರ್ಮಿಸಲಾಗುವ ವಸತಿ ಉದ್ದೇಶಿತ ಕಟ್ಟಡಗಳಿಗೆ ಎಸ್‌ಟಿಪಿ ಕಡ್ಡಾಯ ನಿಯಮ ಅನ್ವಯವಾಗಲಿದ್ದು, ಎಸ್‌ಟಿಪಿ ಅಳವಡಿಸಿಕೊಳ್ಳದವರಿಗೆ ಜನವರಿ 1ರಿಂದ ದಂಡ ಬೀಳಲಿದೆ ಎಂದು ಮಂಡಳಿಯ ನಿರ್ವಹಣಾ ವಿಭಾಗದ ಮುಖ್ಯ ಅಭಿಯಂತರ ಎಚ್.ಎಂ.ರವೀಂದ್ರ ತಿಳಿಸಿದರು.
ಇದರೊಂದಿಗೆ 2 ಸಾವಿರ ಚ.ಮೀ.ಗಿಂತಲೂ ಹೆಚ್ಚು ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ವಾಣಿಜ್ಯ ಉದ್ದೇಶಿತ ಕಟ್ಟಡಗಳು, 5 ಸಾವಿರ ಚ.ಮೀ.ಗೂ ಹೆಚ್ಚಿನ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಶಿಕ್ಷಣ ಸಂಸ್ಥೆಗಳು, 10 ಎಕರೆ ಅಥವಾ ಅದಕ್ಕಿಂತಲೂ ಹೆಚ್ಚು ಪ್ರದೇಶದಲ್ಲಿ ನಿರ್ಮಾಣವಾಗುವ ಟೌನ್‌ಶಿಪ್ ಅಥವಾ ಅಭಿವೃದ್ಧಿ ಯೋಜನೆಗಳಿಗೆ ಎಸ್‌ಟಿಪಿ ಅಳವಡಿಕೆ ಕಡ್ಡಾಯವಾಗಿರುತ್ತದೆ ಎಂದರು.
ದಂಡದ ಪ್ರಮಾಣವೇನು?: ಗೃಹ ಸಂಪರ್ಕಗಳಿಗೆ ಕುಡಿಯುವ ನೀರು ಮತ್ತು ಒಳಚರಂಡಿ ಸಂಪರ್ಕದ ಮೇಲೆ ಮೊದಲು ಮೂರು ತಿಂಗಳು ಶೇ.25ರಷ್ಟು, ನಂತರದ ತಿಂಗಳಿನಿಂದ ಶೇ.50ರಷ್ಟು ದಂಡವನ್ನು ವಿಧಿಸಲಾಗುತ್ತದೆ. ಇನ್ನು ಗೃಹೇತರ ಸಂಪರ್ಕಗಳಲ್ಲಿ ಮೊದಲು ಮೂರು ತಿಂಗಳು ನೀರಿನ ಬಿಲ್‌ನ ಶೇ.50ರಷ್ಟು ಹಾಗೂ ನಗರದ ತಿಂಗಳಲ್ಲಿ ಶೇ.100ರಷ್ಟು ದಂಡವನ್ನು ವಿಧಿಸಲಾಗುತ್ತದೆ ಎಂದು ರವೀಂದ್ರ ಎಚ್ಚರಿಕೆ ನೀಡಿದರು.
3769 ಕಟ್ಟಡಗಳಿಗೆ ದಂಡ ವಾಪಸ್: 2016ರಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ 20 ಮನೆಗಳನ್ನು ಹೊಂದಿರುವ ಅಪಾರ್ಟ್‌ಮೆಂಗಳಿಗೆ ಎಸ್‌ಟಿಪಿ ಕಡ್ಡಾಯಗೊಳಿಸಿದರಿಂದ 3769 ಕಟ್ಟಡಗಳಿಗೆ ದಂಡ ವಿಧಿಸಲಾಗಿತ್ತು. ಆ ಸಂದರ್ಭದಲ್ಲಿ ಮೂರು ಸಭೆಗಳನ್ನು ಸಾರ್ವಜನಿಕರೊಂದಿಗೆ ನಡೆಸಿ ಸಲಹೆಗಳನ್ನು ಪಡೆದು, 20 ಮನೆಗಳಿರುವ ಅಪಾರ್ಟ್‌ಮೆಂಟ್‌ಗಳಿಗೆ ನಿಯಮ ಮಾರ್ಪಾಡುಗೊಳಿಸುವಂತೆ ಸರ್ಕಾರವನ್ನು ಕೋರಲಾಗಿತ್ತು.
ಅದರಂತೆ ಸರ್ಕಾರ ಹಳೆಯ 50 ಮನೆಗಳಿರುವ ಮತ್ತು ಹೊಸದಾಗಿ ನಿರ್ಮಾಣಗೊಳ್ಳುವ 20 ಮತ್ತು ಅದಕ್ಕಿಂತ ಹೆಚ್ಚಿನ ಅಪಾರ್ಟ್‌ಮೆಂಟ್‌ಗಳಿಗೆ ಎಸ್‌ಟಿಪಿ ಅಳವಡಿಕೆ ಕಡ್ಡಾಯಗೊಳಿಸಿದೆ. ಆ ಹಿನ್ನೆಲೆಯಲ್ಲಿ ಈ ಹಿಂದೆ 3769 ಕಟ್ಟಡಗಳಿಗೆ ವಿಧಿಸಲಾಗಿದ್ದ ದಂಡ ವಾಪಸ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಂಡಳಿಯ ತ್ಯಾಜ್ಯ ನೀರು ನಿರ್ವಹಣಾ ವಿಭಾಗದ ಮುಖ್ಯ ಅಭಿಯಂತರ ಸತೀಶ್ ಹಾಜರಿದ್ದರು.
746 ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್: ಬೆಳ್ಳಂದೂರು ಕೆರೆಯಲ್ಲಿ ತೀವ್ರ ಪ್ರಮಾಣದಲ್ಲಿ ಕಲುಷಿತಗೊಂಡ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯೊಂದಿಗೆ ಜಂಟಿ ಪರಿಶೀಲನೆ ವೇಳೆ ಎಸ್‌ಟಿಪಿ ಅಳವಡಿಸದ 746 ಅಪಾರ್ಟ್‌ಮೆಂಟ್‌ಗಳಿಗೆ ನೋಟಿಸ್ ನೀಡಲಾಗಿದೆ. ಇದರೊಂದಿಗೆ ಎಸ್‌ಟಿಪಿ ಅಳವಡಿಸದ ಕಟ್ಟಡಗಳು ತ್ಯಾಜ್ಯ ನೀರನ್ನು ಮೈಸೂರು ರಸ್ತೆಯ ವೃಷಭಾವತಿ ಕಣಿವೆಯಲ್ಲಿರುವ ಜಲಮಂಡಳಿಗೆ ಸರಬರಾಜು ಮಾಡಿ ಸಂಸ್ಕರಿಸಲು ಮುಂದಾಗುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿತ್ತು. ಆದರೆ, ಕೆಲವು ವಾಣಿಜ್ಯ ಸಂಸ್ಥೆಗಳು ಮಾತ್ರವೇ ಅದನ್ನು ಅನುಸರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.