ಪ್ರೀತಿಸಲು ನಿರಾಕರಿಸಿದವಳಿಗೆ ಚೂರಿ ಇರಿತ
Team Udayavani, Jul 7, 2017, 11:12 AM IST
ಬೆಂಗಳೂರು: ಪ್ರೀತಿಗೆ ನಿರಾಕರಿಸಿದ ಯುವತಿಯ ಮೇಲೆ ಹಲ್ಲೆಗೆ ಇತ್ತೀಚೆಗಷ್ಟೇ ಕಾಟನ್ಪೇಟೆಯಲ್ಲಿ ವ್ಯಕ್ತಿಯೊಬ್ಬ ಸುಪಾರಿ ಕೊಟ್ಟ ಪ್ರಕರಣ ಮಾಸುವ ಮುನ್ನವೇ ಅಂಥದ್ದೇ ಮತ್ತೂಂದು ಪ್ರಕರಣ ನಗರದಲ್ಲಿ ನಡೆದಿದೆ. ಪ್ರೀತಿಸಲು ನಿರಾಕರಿಸಿದ 20 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ಮುಸುಕುಧಾರಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುರುವಾರ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾ (ಹೆಸರು ಬದಲಾಯಿಸಲಾಗಿದೆ) ಹಲ್ಲೆಗೊಳಗಾದ ವಿದ್ಯಾರ್ಥಿನಿ. ಖಾಸಗಿ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾ, ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಅಡ್ಡಗಟ್ಟಿ ಚಾಕುವಿನಿಂದ ಆಕೆಯ ತೋಳು ಮತ್ತು ಬೆನ್ನಿಗೆ ಇರಿದು ಪರಾರಿಯಾಗಿದ್ದಾರೆ. ಯುವತಿಯ ಕಿರುಚಾಟ ಕೇಳಿದ ಸ್ಥಳೀಯರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷದಿಂದ ದಿವ್ಯಾಳ ಹಿಂದೆ ಬಿದ್ದಿದ್ದ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಕಾಲೇಜು ಹಾಗೂ ಮನೆ ಬಳಿ ಬಂದು ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ನಡು ರಸ್ತೆಯಲ್ಲಿ ಅಡ್ಡ ಹಾಕಿದ್ದ ಆತ ಪ್ರೀತಿಸುವುದಾದರೆ ನನ್ನನ್ನೇ ಪ್ರೀತಿಸಬೇಕು. ಬೇರೆ ಯುವಕನ ಜತೆ ಓಡಾಡುತ್ತಿರುವುದು ಗೊತ್ತಿದೆ. ಇನ್ಮುಂದೆ ಆತನಿಂದ ದೂರ ಇರಬೇಕು ಎಂದು ಎಚ್ಚರಿಕೆ ನೀಡಿದ್ದ. ಆದರೆ, ವಿದ್ಯಾ ಇದ್ಯಾವುದಕ್ಕೂ ತೆಲೆಕೆಡಿಸಿಕೊಂಡಿರಲಿಲ್ಲ. ಪೋಷಕರಿಗೂ ತಿಳಿಸಿರಲಿಲ್ಲ.
ಈ ಮಧ್ಯೆ ಸ್ನೇಹಿತರಿಂದ ವಿದ್ಯಾಳ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಯುವಕ, ಆಗಾಗ್ಗೆ ಟೆಲಿಫೋನ್ ಬೂತ್ನಿಂದ ಕರೆ ಮಾಡಿ ಪೀಡಿಸುತ್ತಿದ್ದ. ಮೂರು ದಿನಗಳ ಹಿಂದೆಯೂ ಕರೆ ಮಾಡಿ ಬೆದರಿಕೆ ಹಾಕಿದ್ದ. ಒಂದೆರಡು ಬಾರಿ ಬಿಯರ್ ಬಾಟಲಿಗಳನ್ನು ಮನೆಯ ಆವರಣದಲ್ಲಿ ಎಸೆದು ಆಕ್ರೋಶವ್ಯಕ್ತಪಡಿಸಿದ್ದ ಎಂಬುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಮೇಲೆ ಹಲ್ಲೆ ನಡೆಸಿದ ಇಬ್ಬರು ಮುಸುಕುಧಾರಿಗಳಲ್ಲಿ ಆ ಯುವಕನೂ ಇದ್ದ ಎಂಬ ಶಂಕೆಯೂ ಇದ್ದು, ಸುತ್ತಮುತ್ತಲ ಮನೆಗಳಲ್ಲಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪಡೆದಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
“ಘಟನೆಯಲ್ಲಿ ಯುವತಿಯ ಬಲಗೈ, ಭುಜ, ತೊಳಿನ ಭಾಗ ಸೇರಿದಂತೆ ಮೂರು ಕಡೆ ಗಾಯವಾಗಿದೆ. ಘಟನಾ ಸ್ಥಳದಲ್ಲಿದ್ದ ಕೆಲವು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಸಣ್ಣ ಸುಳಿವು ಸಿಕ್ಕಿದ್ದು, ಸದ್ಯದಲ್ಲೇ ಆರೋಪಿಯನ್ನು ಬಂಧಿಸಲಾಗುವುದು. ಪ್ರಕರಣ ಅನ್ನಪೂರ್ಣೇಶ್ವರಿ ಠಾಣೆಯಲ್ಲಿ ದಾಖಲಾಗಿದ್ದು, ಚಂದ್ರಲೇಔಟ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.
-ಎಂ.ಎನ್.ಅನುಚೇತ್, ಡಿಸಿಪಿ ಪಶ್ಚಿಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.