ಸಬ್‌ಅರ್ಬನ್‌ ರೈಲು ಯೋಜನೆ ತ್ವರಿತ ಜಾರಿಗೆ ಮನವಿ

Team Udayavani, Jun 8, 2019, 3:04 AM IST

sub-urban

ಬೆಂಗಳೂರು: ಬಹಳ ಕಾಲದಿಂದ ನನೆಗುದಿಗೆ ಬಿದ್ದಿರುವ ಬೆಂಗಳೂರಿನ ಸಬ್‌ಅರ್ಬನ್‌ ರೈಲು ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಕ್ರಮ ಕೈಗೊಂಡು ಪ್ರಸಕ್ತ ವರ್ಷದಲ್ಲೇ ಅನುಷ್ಠಾನಗೊಳಿಬೇಕು ಎಂದು ಸಂಸದ ಪಿ.ಸಿ.ಮೋಹನ್‌, ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ರೈಲ್ವೆ ಸಚಿವ ಪಿಯೂಷ್‌ ಗೋಯೆಲ್‌ ಅವರನ್ನು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿಯವರೊಂದಿಗೆ ಭೇಟಿ ಮಾಡಿದ ಪಿ.ಸಿ.ಮೋಹನ್‌, ಬೆಂಗಳೂರಿನ ಸಬ್‌ಅರ್ಬನ್‌ ರೈಲು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು 2018-19ನೇ ಸಾಲಿನ ಬಜೆಟ್‌ನಲ್ಲಿ ಸಬ್‌ ಅರ್ಬನ್‌ ರೈಲು ಯೋಜನೆಗೆ 17,050 ಕೋಟಿ ರೂ. ಅನುದಾನ ನೀಡಿದ್ದರು. ಜತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕ್ರಮವಾಗಿ 49:51ರ ಅನುಪಾತದ ಪಾಲುದಾರಿಕೆಯಲ್ಲಿ ಕೈಗೊಳ್ಳಲು ಒಪ್ಪಿಗೆಯನ್ನು ಕೇಂದ್ರ ನೀಡಿತ್ತು. ಪ್ರಸಕ್ತ ಬಜೆಟ್‌ನಲ್ಲಿ ಯೋಜನೆ ಆರಂಭಿಸಲು 10 ಕೋಟಿ ರೂ. ಆರಂಭಿಕ ಅನುದಾನ ಬಿಡುಗಡೆ ಮಾಡಿದೆ. ಇಷ್ಟಾದರೂ ಯೋಜನೆ ಜಾರಿ ವಿಳಂಬವಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಖುದ್ದಾಗಿ ರೈಲ್ವೆ ಸಚಿವರ ನೇತೃತ್ವದ ನಿಯೋಗವೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರನ್ನು ಕಳೆದ ಫೆಬ್ರುವರಿಯಲ್ಲಿ ಭೇಟಿಯಾಗಿ ಚರ್ಚಿಸಿ ನೂತನ ಷರತ್ತುಗಳ ಬಗ್ಗೆಯೂ ಚರ್ಚಿಸಿ ಒಮ್ಮತಕ್ಕೆ ಬರಲಾಗಿತ್ತು. ಯೋಜನೆ ಉದ್ಘಾಟನೆಗೆ ಪ್ರಧಾನಿಯವರನ್ನು ಆಹ್ವಾನಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ರಾಜ್ಯ ಸರ್ಕಾರ ಯೋಜನೆ ಜಾರಿಗೆ ಅಗತ್ಯವಿರುವ ವಿಶೇಷ ಉದ್ದೇಶ ವಾಹಕ ಸ್ಥಾಪನೆ ವಿಳಂಬ ಮಾಡಿದ್ದರಿಂದ ಯೋಜನೆ ಜಾರಿ ಮತ್ತೆ ವಿಳಂಬವಾಯಿತು ಎಂದು ಉಲ್ಲೇಖೀಸಿದ್ದಾರೆ.

ಕಳೆದ ಏ.19ರಂದು ಪ್ರಧಾನಿಯವರ ಕಾರ್ಯಾಲಯವು ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪೆನಿ (ಕೆ-ಆರ್‌ಐಡಿಇ)ಗೆ ಪತ್ರ ಬರೆದು ಉಪನಗರ ಯೋಜನೆಗೆ ಸಂಬಂಧಪಟ್ಟಂತೆ ನಗರದ ಮಿತಿಯಲ್ಲಿ ನಿಲ್ದಾಣಗಳನ್ನು ಕಡಿತಗೊಳಿಸುವುದು ಸೇರಿದಂತೆ ಕೆಲ ವಿಷಯಗಳ ಬಗ್ಗೆ ಸಮಗ್ರ ಯೋಜನಾ ವರದಿಯನ್ನು ಮರುಪರಿಶೀಲಿಸುವಂತೆ ತಿಳಿಸಿದೆ.

ಈ ಬೆಳವಣಿಗೆಯಿಂದಾಗಿ ಯೋಜನೆಯ ಅನುಷ್ಠಾನ ಮತ್ತಷ್ಟು ವಿಳಂಬವಾಗಬಹುದೆಂಬ ಆತಂಕ ನಗರದ ಜನರಲ್ಲಿ ಮೂಡಿದೆ. ಕೂಡಲೇ ತಾವು ಯೋಜನೆ ಜಾರಿಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಂಡು ಪ್ರಸಕ್ತ ವರ್ಷದಲ್ಲೇ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯದ ಹಲವು ರೈಲ್ವೆ ಯೋಜನೆಗಳ ಬಗ್ಗೆಯೂ ಚರ್ಚೆ ನಡೆದಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವ ಪಿಯೂಷ್‌ ಗೋಯೆಲ್‌ ಅವರು ಸಬ್‌ಅರ್ಬನ್‌ ರೈಲು ಯೋಜನೆಯ ತುರ್ತು ಅನುಷ್ಠಾನಕ್ಕೆ ಅಗತ್ಯ ನೆರವು, ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.