ಆಸ್ತಿ ವಿವರ ಸಲ್ಲಿಕೆ ಸರ್ಕಾರಿ ನೌಕರರಿಗೂ ಅನ್ವಯ
Team Udayavani, Jan 4, 2018, 6:45 AM IST
ಬೆಂಗಳೂರು: ಲೋಕಾಯುಕ್ತ ನಿಯಮಗಳಿಗೆ ತಿದ್ದುಪಡಿ ಮಾಡುವ ಮೂಲಕ ಆಸ್ತಿ ವಿವರ ಸಲ್ಲಿಸುವ ವೇಳೆ ಸರ್ಕಾರಿ ಸೇವಕರ ಜತೆಗೆ ಅವರ ಅವಲಂಬಿತರ ಆಸ್ತಿ ವಿವರಗಳನ್ನು ಸಲ್ಲಿಸಬೇಕು ಎಂದು ಸರ್ಕಾರ ತೀರ್ಮಾನಿಸಿದ್ದರೂ ಸರ್ಕಾರಿ ನೌಕರರು ಕೂಡ ಅದರ ವ್ಯಾಪ್ತಿಗೆ ಬರಲಿದ್ದಾರೆ.
ಸರ್ಕಾರಿ ನೌಕರರು ಅವರ ಇಲಾಖೆ ಮುಖ್ಯಸ್ಥರಿಗೆ ತಮ್ಮ ಆಸ್ತಿ ವಿವರ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಸರ್ಕಾರಿ ನೌಕರರು ತನ್ನ ಆಸ್ತಿ ವಿವರ ಮಾತ್ರ ಸಲ್ಲಿಸುತ್ತಾರೆ. ಕುಟುಂಬ ಸದಸ್ಯರು ಅಥವಾ ಅವಲಂಬಿತರ ಆಸ್ತಿ ವಿವರ ಸಲ್ಲಿಸುವುದಿಲ್ಲ. ಹೀಗಾಗಿ ಸರ್ಕಾರಿ ಸೇವಕರು ಆಸ್ತಿ ವಿವರ ಸಲ್ಲಿಸುವ ಕುರಿತಂತೆ ಇದ್ದ “ಕರ್ನಾಟಕ ಲೋಕಾಯುಕ್ತ ನಿಯಮಗಳು-1985ರ ನಿಯಮ 7ರಡಿ ನಿಗದಿಪಡಿಸಿರುವ ನಮೂನೆ-4ಕ್ಕೆ ತಿದ್ದುಪಡಿ’ಯಲ್ಲಿ ಸರ್ಕಾರಿ ನೌಕರರು ಕೂಡ ಸರ್ಕಾರಿ ಸೇವಕರು ಎಂದು ಪರಿಗಣಿಸಿ ಅವರನ್ನು ಸೇರ್ಪಡೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಸರ್ಕಾರಿ ಸೇವಕರು ಎಂದರೆ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ಎಂದು ವ್ಯಾಖ್ಯಾನಿಸಲಾಗಿದೆ. ಜನಪ್ರತಿನಿಧಿಗಳಲ್ಲಿ ಶಾಸಕರು (ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು) ಲೋಕಾಯುಕ್ತರಿಗೆ ತಮ್ಮ ಆಸ್ತಿ ವಿವರ ಸಲ್ಲಿಸಿದರೆ, ಸರ್ಕಾರಿ ನೌಕರರು ತಮ್ಮ ಇಲಾಖಾ ಮುಖ್ಯಸ್ಥರಿಗೆ ಆಸ್ತಿ ವಿವರ ಸಲ್ಲಿಸುತ್ತಾರೆ. ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸುವಾಗ ಪತಿ/ಪತ್ನಿ ಮತ್ತು ಮಕ್ಕಳ ಆಸ್ತಿ ವಿವರ ಸಲ್ಲಿಸುತ್ತಾರಾದರೆ ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರ ಮಾತ್ರ ಸಲ್ಲಿಸುತ್ತಾರೆ.
ಇದೀಗ ಹೊಸ ತಿದ್ದುಪಡಿಯಂತೆ ಶಾಸಕರು ಲೋಕಾಯುಕ್ತರಿಗೆ ಆಸ್ತಿ ವಿವರ ಸಲ್ಲಿಸುವಂತೆ ಸರ್ಕಾರಿ ನೌಕರರು ಕೂಡ ತಮ್ಮ ಆಸ್ತಿ ವಿವರ ಸಲ್ಲಿಸುವಾಗ ಜತೆಗೆ ಪತಿ/ಪತ್ನಿ, ಮಕ್ಕಳು, ತಂದೆ-ತಾಯಿಯರ ಆಸ್ತಿ ವಿವರವನ್ನೂ ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಬೇಕಾಗುತ್ತದೆ. ಅದಕ್ಕಾಗಿ ಆಸ್ತಿ ವಿವರ ಸಲ್ಲಿಸುವ ನಮೂನೆ ನಾಲ್ಕರಲ್ಲಿ ಸರ್ಕಾರಿ ನೌಕರರ ಜತೆಗೆ ಪತಿ/ಪತ್ನಿ, ಮಕ್ಕಳು, ತಂದೆ-ತಾಯಿಯರ ಕಲಂಗಳನ್ನೂ ಸೇರಿಸಲಾಗಿದೆ.
ಯಾವಾಗ ಉಪಯೋಗಕ್ಕೆ ಬರುತ್ತದೆ?:
ಸರ್ಕಾರಿ ನೌಕರರು ಪ್ರತಿ ವರ್ಷ ಆಸ್ತಿ ವಿವರ ಸಲ್ಲಿಸುತ್ತಾರಾದರೂ ಅದರಲ್ಲಿ ಆಗುವ ಹೆಚ್ಚಳ ಮತ್ತಿತರೆ ಅಂಶಗಳನ್ನು ಯಾರೂ ಗಮನಿಸುವುದಿಲ್ಲ. ಆದರೆ, ಲೋಕಾಯುಕ್ತ ಅಥವಾ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಮೇಲೆ ದಾಳಿ ನಡೆಸಿದಾಗ ಸಿಗುವ ಆಸ್ತಿಯಲ್ಲಿ ಅಕ್ರಮ ಆಸ್ತಿ ಎಷ್ಟು ಎಂಬುದನ್ನು ತಿಳಿದುಕೊಳ್ಳಲು ಆ ನೌಕರ ಇಲಾಖೆ ಮುಖ್ಯಸ್ಥರಿಗೆ ನೀಡಿದ ಆಸ್ತಿ ವಿವರ ತರಿಸಿಕೊಂಡು ಪರಿಶೀಲಿಸುತ್ತಾರೆ. ಅದರಲ್ಲಿರುವ ಆಸ್ತಿ ವಿವರಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದರೆ ಅದನ್ನು ಅಕ್ರಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ನೌಕರರ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಮಾತ್ರ ಅದು ಅನುಕೂಲಕ್ಕೆ ಬರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.