ಸ್ಟೀಲ್ ಬ್ರಿಡ್ಜ್ ಆದೇಶದ ಪ್ರತಿ ಹೈಕೋರ್ಟ್‌ಗೆ ಸಲ್ಲಿಕೆ
Team Udayavani, Nov 10, 2017, 11:31 AM IST
ಬೆಂಗಳೂರು: ತೀವ್ರ ವಿವಾದಕ್ಕೊಳಗಾಗಿರುವ “ಸ್ಟೀಲ್ ಬ್ರಿಡ್ಜ್’ ನಿರ್ಮಾಣ ಸಂಬಂಧ ಅ.31ಕ್ಕೆ ಹೊರಡಿಸಿದ ಆದೇಶದ ಪ್ರತಿಯನ್ನು ಗುರುವಾರ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸಲ್ಲಿಸಿತು.
ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾ. ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠಕ್ಕೆ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಸಂಬಂಧ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಆದೇಶದ ಪ್ರತಿಯನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು.
ನಗರದ ಶಿವಾನಂದ ವೃತ್ತದ ಬಳಿ ಉಕ್ಕಿನ ಮೇಲ್ಸೇತುವ ನಿರ್ಮಾಣ ಮಾಡದಂತೆ ಕುಮಾರ ಪಾರ್ಕ್ ಪೂರ್ವ ಭಾಗದ ನಿವಾಸಿ ಬಿ.ಪಿ.ಮಹೇಶ್ ಮತ್ತು 19 ಜನ ಸ್ಥಳೀಯ ನಿವಾಸಿಗಳು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧದ ಅರ್ಜಿಯ ವಿಚಾರಣೆಯನ್ನು ಅ.25ರಂದು ನಡೆಸಿದ್ದ ಹಂಗಾಮಿ ಮುಖ್ಯನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ, ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಅರ್ಜಿದಾರರು ಮನವಿ ಸಲ್ಲಿಸಿದ್ದರು.
ಆದರೆ, ಅ.31ರಂದು ಮನವಿ ವಿಚಾರಣೆ ನಡೆಸಿದ್ದ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರು, ಸ್ಥಳೀಯ ನಿವಾಸಿಗಳ ಮನವಿಯನ್ನು ತಿರಸ್ಕರಿಸಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮುಂದುವರಿಸಲು ನಿರ್ಧರಿಸಿ ಆದೇಶ ಪ್ರಕಟಿಸಿದ್ದರು.
ಈ ಆದೇಶದ ಪ್ರತಿಯೊಂದಿಗೆ ಸ್ಥಳೀಯ ನಿವಾಸಿಗಳು ಗುರುವಾರ ಹೈಕೋರ್ಟ್‌ಗೆ ತಿದ್ದುಪಡಿ ಅರ್ಜಿ ಸಲ್ಲಿಸಲಾಯಿತು. ಈ ಮಧ್ಯೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಆದೇಶದ ಪ್ರತಿಯನ್ನು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದರ ವಿಚಾರಣೆಯನ್ನು ನ.16ಕ್ಕೆ ನಿಗದಿಪಡಿಸಿ, ಪ್ರಕರಣದ ವಿಚಾರಣೆಯನ್ನು ಮುಂದೂಡಿತು.
ನಗರದಲ್ಲಿ ಜನಸಂಖ್ಯೆ ಮತ್ತು ವಾಹನಗಳು ಹೆಚ್ಚುತ್ತಿದೆ. ಆದ್ದರಿಂದ ನಗರಕ್ಕೆ ಹೆಚ್ಚಿನ ಮೂಲ ಸೌಕರ್ಯಗಳನ್ನ ಒದಗಿಸಬೇಕಿದೆ. ಸಂಚಾರ ದಟ್ಟಣೆಯು ನಗರವನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ. ಇದಕ್ಕೆ ಮೇಲ್ಸೇತುವೆ ನಿರ್ಮಾಣ ಒಂದು ಪರಿಹಾರ ಮಾರ್ಗವಾಗಿದೆ. ಅದರಂತೆ ಶಿವಾನಂದ ವೃತ್ತದ ಬಳಿ ಸಾಕಷ್ಟು ಸಂಚಾರ ದಟ್ಟಣೆ ಏರ್ಪಡುತ್ತದೆ.
ಮೇಲ್ಸೇತುವೆ ನಿರ್ಮಾಣದಿಂದ ಸಂಚಾರ ದಟ್ಟಣೆ ನಿಯಂತ್ರಿಸಬಹುದು. ಹೀಗಾಗಿ, ಉಕ್ಕಿನ ಮೇಲ್ಸೇತುವೆ ಕಾಮಗಾರಿಯನ್ನು ಮುಂದುವರಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.