ಕೆಪಿಎಸ್‌ಸಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಪೂರಕ ದಾಖಲೆ ಸಲ್ಲಿಸಿ


Team Udayavani, Oct 31, 2017, 12:09 PM IST

highcourt2.jpg

ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ಪಟ್ಟಿ ರದ್ದು ಕೋರಿರುವ ಪಿಐಎಲ್‌ ಹಾಗೂ ತಕರಾರು ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌, ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದರ ಬಗ್ಗೆ ಸಿಐಡಿ ವರದಿ ಬಿಟ್ಟು ಬೇರೆ ಪೂರಕ ದಾಖಲೆಗಳಿದ್ದರೆ ಸಲ್ಲಿಸಿ ಎಂದು ಅರ್ಜಿದಾರರಿಗೆ  ಸೂಚಿಸಿದೆ.

ಈ ಪ್ರಕರಣದ ಅರ್ಜಿಗಳ ವಿಚಾರಣೆಯನ್ನು ಸೋಮವಾರ ನಡೆಸಿದ  ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿತು.

ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು  ಸಿಐಡಿ ವರದಿಯ ನೀಡಿದೆ ಎಂದು ವಾದ ಸರಿ, ಆದರೆ, ಭ್ರಷ್ಟಾಚಾರ ಹೇಗೆ  ನಡೆದಿದೆ ಎಂಬುದಕ್ಕೆ ನಿಖರತೆಯಿಲ್ಲ. ಹೀಗಾಗಿ ಸಿಐಡಿ ವರದಿ ಹೊರತುಪಡಿಸಿ ಬೇರೆ ಪೂರಕ ದಾಖಲೆಗಳು ಸಾಕ್ಷ್ಯಾಧಾರಗಳು ಇದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿತು.

ಜೊತೆಗೆ ಭ್ರಷ್ಟಾಚಾರದ ಬಗ್ಗೆ ದೂರು ನೀಡಿರುವ ಡಾ. ಮೈತ್ರಿಯಾ  ಹಾಗೂ ಕೆಪಿಎಸ್‌ಸಿ ಸದಸ್ಯೆ ಮಂಗಳಾ ಶ್ರೀಧರ್‌ ನಡುವೆ ದೂರವಾಣಿ ಕರೆಗಳ ವಿನಿಮಯವಾಗಿದೆ. ಆದರೆ, ಯಾರು ಮೊದಲು ಕರೆ ಮಾಡಿದರು ಎಂಬುದು ಸ್ಪಷ್ಟವಾಗಿಲ್ಲ. ಹೀಗಾಗಿ ಡಾ. ಮೈತ್ರಿಯಾ ದೂರವಾಣಿ ಕರೆಗಳ ವಿವರ ನೀಡುವಂತೆ ಮೈತ್ರಿಯಾ ಹಾಗೂ ಅವರ ಪರ ವಕೀಲರಿಗೆ ಮೌಖೀಕ ಸೂಚನೆ ನೀಡಿತು.

ನೇಮಕಾತಿ ಪಟ್ಟಿ ರದ್ದು ಸಂಬಂಧ ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಈ ಅರ್ಜಿಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವ್ಯಾಪ್ತಿಗೆ ಪರಿಗಣನೆಯಾಗಲಿದೆಯೇ ಎಂಬುದರ ಬಗ್ಗೆ ಮೆರಿಟ್‌ ಆಧಾರದಲ್ಲಿ ವಾದ ಮಂಡಿಸಿ.ಜೊತೆಗೆ ರಾಜ್ಯಸರ್ಕಾರಕ್ಕೆ ಕೆಪಿಎಸ್‌ಸಿ ನೇಮಕಾತಿ ರದ್ದುಗೊಳಿಸುವ ಅಧಿಕಾರವಿದೆಯೇ? ಈ ಬಗ್ಗೆ ಸುಪ್ರೀಂಕೋರ್ಟ್‌ ಸೇರಿದಂತೆ ಇನ್ನಿತರೆ ಹೈಕೋರ್ಟ್‌ಗಳು ತೀರ್ಪು ನೀಡಿವೆಯೇ ಎಂದು ಪ್ರಶ್ನಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು ಹರ್ಯಾಣ ಸರ್ಕಾರ ಒಮ್ಮೆ ರದ್ದುಪಡಿಸಿದೆ, ರಾಜ್ಯಸರ್ಕಾರಕ್ಕೆ ನೇಮಕಾತಿ ಪಟ್ಟಿ ರದ್ದುಗೊಳಿಸುವ ಅಧಿಕಾರವಿದೆ ಎಂದು ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, ಸಂವಿಧಾನಾತ್ಮಕ ಸ್ವಾಯತ್ತ ಸಂಸ್ಥೆಯಾದ ಕೆಪಿಎಸ್‌ಸಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡುವ ಬಗ್ಗೆ ಆದೇಶ ಹೊರಡಿಸಬಹುದು.

ಆದರೆ, ನೇಮಕಾತಿ  ರದ್ದುಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಪ್ರಕರಣದಲ್ಲಿ 2014ರಲ್ಲಿ ರಾಜ್ಯಸರ್ಕಾರ ತೆಗೆದುಕೊಂಡಿದ್ದ ನಿರ್ಧಾರ ನೇಮಕಾತಿ ರದ್ದು ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಅ.31 ಮಂಗಳವಾರಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.