ಬಿ.ಬಿ.ಚಿಮ್ಮನಕಟ್ಟಿ ಮನವೊಲಿಸುವಲ್ಲಿ ಯಶಸ್ವಿ
Team Udayavani, Apr 23, 2018, 7:10 AM IST
ಬಾದಾಮಿ: ಸಿಎಂ ಸಿದ್ದರಾಮಯ್ಯ ಬಗ್ಗೆ ಅಸಮಾಧಾನಗೊಂಡು ಬೆಂಬಲಿಗರ ಸಭೆ ಕರೆದಿದ್ದಾರೆಂಬ ವದಂತಿ ಹರಡುತ್ತಿದ್ದಂತೆ, ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರ ನಿವಾಸಕ್ಕೆ ದೌಡಾಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಅವರು ಚಿಮ್ಮನಕಟ್ಟಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಾನುವಾರ ಬೆಳಗ್ಗೆ ಬೆಂಗಳೂರಿನ ಸಿಎಂ ನಿವಾಸಕ್ಕೆ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹಾಗೂ ಬಾದಾಮಿಯ ಕಾಂಗ್ರೆಸ್ ಮುಖಂಡರನ್ನು ಸಿಎಂ ಆಹ್ವಾನಿಸಿದ್ದರು. ಆದರೆ, ಶನಿವಾರ ರಾತ್ರಿಯೇ ಬಾದಾಮಿಗೆ ಬಂದಿರುವ ಚಿಮ್ಮನಕಟ್ಟಿ ಭಾನುವಾರ ಸಂಜೆ 3ಕ್ಕೆ ಬೆಂಬಲಿಗರ ಸಭೆ ಕರೆದಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರು ಬಾದಾಮಿಗೆ ದೌಡಾಯಿಸಿ, ಅವರ ಮನವೊಲಿಸುವ ಪ್ರಯತ್ನ ಮಾಡಿದರು.
ನಾನು ಎರಡು ದಿನ ಮೈಸೂರಿನಲ್ಲಿದ್ದೆ. ಸಿಎಂ ನನ್ನನ್ನು ಸರಿಯಾಗಿ ಮಾತನಾಡಿಸಲಿಲ್ಲ. ಅವರಿಗಾಗಿ ಕ್ಷೇತ್ರ ಬಿಟ್ಟು ಕೊಡುತ್ತೇನೆಂದು ಹೇಳಿದರೂ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ನಾನೇಕೆ ಅವರ ಬಳಿಗೆ ಪುನಃಹೋಗಲಿ. ಸಿಎಂ ಇಲ್ಲಿಗೆ ಬಂದು ಸ್ಪರ್ಧಿಸಲಿ. ನಾನು ನನ್ನ ಬೆಂಬಲಿಗರ ಅಭಿಪ್ರಾಯ ಪಡೆಯುತ್ತೇನೆಂದು ಚಿಮ್ಮನಕಟ್ಟಿ ಹೇಳಿದರು ಎನ್ನಲಾಗಿದೆ. ಆಗ ಎಸ್.ಆರ್. ಪಾಟೀಲ ಮತ್ತು ಆರ್.ಬಿ. ತಿಮ್ಮಾಪುರ ಅವರು ಸಿಎಂ ಒತ್ತಡದಲ್ಲಿ ನಿಮ್ಮನ್ನು ಮಾತನಾಡಿಸಿಲ್ಲ. ಕ್ಷೇತ್ರ ಬಿಟ್ಟು ಕೊಟ್ಟ ನಿಮ್ಮ ತ್ಯಾಗಕ್ಕೆ ಪಕ್ಷ ಹಾಗೂ ಸಿಎಂ ವಿಶೇಷ ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಅವರ ಮನವೊಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.