ಸುದೀಪ್ ಹೆಸರಲ್ಲಿ ನಕಲಿ ಟ್ವೀಟ್
Team Udayavani, Mar 31, 2017, 11:42 AM IST
ಬೆಂಗಳೂರು: ನಟ ಸುದೀಪ್ ಅವರ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ಬಿಡುಗಡೆಯಾದ ನಟ ಪುನೀತ್ ರಾಜ್ಕುಮಾರ್ ಅವರ “ರಾಜಕುಮಾರ’ ಚಿತ್ರಕ್ಕೆ ಶುಭ ಕೋರಿ ಟ್ವೀಟ್ ಮಾಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.
ಟ್ವಿಟರ್ನಲ್ಲಿ ಸುದೀಪ್ ಹೆಸರಲ್ಲಿ ನಕಲಿ ಖಾತೆ ತೆರೆದ ದುಷ್ಕರ್ಮಿಗಳು, “ಪುನೀತ್ ರಾಜ್ಕುಮಾರ್ ಅವರ ರಾಜ ಕುಮಾರ ಚಿತ್ರವು ಕರ್ನಾಟಕದಲ್ಲಿ ಬಾಹುಬಲಿ ಹಾಗೂ ಹೆಬ್ಬುಲಿಯ ಕಲೆಕ್ಷನ್ ಅನ್ನು ಮುರಿದು ಮುನ್ನಡೆಯುತ್ತಿದೆ. ಅದಕ್ಕಾಗಿ ಪುನೀತ್ ಹಾಗೂ ರಾಜಕುಮಾರ ಚಿತ್ರತಂಡಕ್ಕೆ ಅಭಿನಂದನೆಗಳು,’ ಎಂದು ಟ್ವೀಟಿಸಿದ್ದರು.
ಇದು ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಹೇಳಿರುವ ಸುದೀಪ್, ಈ ವಿಚಾರಕ್ಕೆ ಸಂಬಂಧಿಸಿ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. “ಈಗ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿರಬಹುದು. ಆದರೆ, ಮುಂದೆ ಇಂತಹ ಕೃತ್ಯಗಳು ಮುಂದುವರಿಯಬಾರದು ಎಂಬ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ,’ ಎಂದು ಸುದೀಪ್ ಹೇಳಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.