ಪೊಲೀಸರ ಕಿರುಕುಳದಿಂದ ಆತ್ಮಹತ್ಯೆ?
Team Udayavani, Aug 21, 2017, 11:27 AM IST
ಬೆಂಗಳೂರು: ಮಹಿಳೆಗೆ ಕಿರುಕುಳ, ಕೊಲೆ ಯತ್ನ, ದರೋಡೆ ಸೇರಿದಂತೆ 12ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ವೊಬ್ಬ ,ವಿಚಾರಣೆ ನೆಪದಲ್ಲಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭಾರತಿ ನಗರ ನಿವಾಸಿ ಕಾರ್ತಿಕ್ (27) ಆತ್ಮಹತ್ಯೆ ಮಾಡಿಕೊಂಡ ರೌಡಿಶೀಟರ್. ಈ ಸಂಬಂಧ ಪೊಲೀಸರ ಕಿರುಕುಳದಿಂದ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪೋಷಕರು ಇಂದಿರಾನಗರ ಠಾಣೆಗೆ ದೂರು ನೀಡಿದ್ದಾರೆ. ಶನಿವಾರ ರಾತ್ರಿ 8ರ ಸುಮಾರಿಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೆ ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತಿನಗರ ಠಾಣೆ ರೌಡಿಶೀಟರ್ ಆಗಿದ್ದ ಕಾರ್ತಿಕ್ ಮೆಕಾನಿಕ್ ಕೆಲಸ ಮಾಡುತ್ತಿದ್ದ. ಹಲ್ಲೆ, ಸುಲಿಗೆ, ಕೊಲೆ ಯತ್ನ, ಮಹಿಳೆಯರ ಕಿರುಕುಳ ಸೇರಿ ಭಾರತಿನಗರದಲ್ಲಿ 9 ಪ್ರಕರಣಗಳು, ಕಮರ್ಷಿಯಲ ಸ್ಟ್ರೀಟ್ನಲ್ಲಿ 1, ಕೆ.ಜಿ ಹಳ್ಳಿಯಲ್ಲಿ 2 ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ. 6 ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕಾರ್ತಿಕ್, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ 7 ಬಾರಿ ವಾರೆಂಟ್ ಜಾರಿಯಾಗಿತ್ತು.
ಆದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇತ್ತ ಕೋರ್ಟ್ ಸೂಚನೆ ಮೇರೆಗೆ ಈತನಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಪತ್ನಿ, ಸಹೋದರಿಯನ್ನು ವಿಚಾರಣೆ ನಡೆಸಿದ್ದರು. ಇದಕ್ಕೆ ಬೇಸರಗೊಂಡಿದ್ದ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪರಾಧ ಚಟುವಟಿಕೆಗಳಿಂದ ಮಗ ದೂರ ಉಳಿದಿದ್ದ. ಭಾರತಿನಗರ ಪೊಲೀಸರು ಆತನನ್ನು ವಿನಾಃ ಕಾರಣ ಕರೆದೊಯ್ದು ಕಿರುಕುಳ ನೀಡುತ್ತಿದ್ದರು ಎಂದು ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.