ಸಾಧಕಿಯರಿಗೆ ಸನ್‌ಪ್ಯೂರ್‌ ಸೂಪರ್‌ ವುಮನ್‌ ಪ್ರಶಸ್ತಿ


Team Udayavani, Mar 8, 2018, 12:12 PM IST

sadhaki.jpg

ಬೆಂಗಳೂರು: ಪ್ರತಿಷ್ಠಿತ ಸನ್‌ಪ್ಯೂರ್‌ ಬ್ರಾಂಡ್‌ನ‌ಡಿ ಪರಿಸರ ಸ್ನೇಹಿ ಅಡುಗೆ ಎಣ್ಣೆ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಎಂ.ಕೆ.ಆಗ್ರೋಟೆಕ್‌ ಪ್ರೈ. ಲಿ., ಇದೇ ಮೊದಲ ಬಾರಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವ 11 ಸಾಧಕಿಯರನ್ನು ಗುರುತಿಸಿ “ಸನ್‌ಪ್ಯೂರ್‌ ಸೂಪರ್‌ ವುಮೆನ್‌’ ಪ್ರಶಸ್ತಿ ನೀಡಿ ಗೌರವಿಸಿತು.

ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಸಮಾಜಮುಖೀ ಕಾರ್ಯಗಳಲ್ಲಿ ನಿರತರಾಗಿರುವ 11 ಮಹಿಳೆಯರಿಗೆ ಪ್ರಶಸ್ತಿ ಜತೆಗೆ ತಲಾ 25,000 ರೂ. ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಎಂ.ಕೆ.ಆಗ್ರೋಟೆಕ್‌ನ ತಾಂತ್ರಿಕ ನಿರ್ದೇಶಕ ಅಬ್ದುಲ್‌ ಹನ್ನನ್‌ ಖಾನ್‌, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ತಾಯಿಗೆ ಪರಮೋತ್ಛ ಸ್ಥಾನ ನೀಡುತ್ತಾರೆ. ಹಾಗಾಗಿ ತಾಯಿ ಹಾಗೂ ಮಾತೃಭೂಮಿಗೆ ಹಾನಿಯಾಗದಂತೆ ರಾಸಾಯನಿಕ ಮುಕ್ತ, ಪರಿಸರ ಸ್ನೇಹಿ ವಿಧಾನದಡಿ ಅಡುಗೆ ಎಣ್ಣೆ, ಇತರೆ ಆಹಾರ ಪದಾರ್ಥಗಳನ್ನು ಸಂಸ್ಥೆ ರೂಪಿಸಿ ಮಾರುಕಟೆಗೆ ಪರಿಚಯಿಸಿದೆ. ಜತೆಗೆ ಇದೇ ಮೊದಲ ಬಾರಿ ಸಾಧಕಿಯರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

ಸಂಸ್ಥೆಯ ಮಾರಾಟ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಪೆರಿ ಮಾತನಾಡಿ, ಶ್ರೀರಂಗಪಟ್ಟಣ ಮೂಲದ ಸಂಸ್ಥೆಯು ರಾಸಾಯನಿಕ ಮುಕ್ತ ಅಡುಗೆ ಎಣ್ಣೆಯನ್ನು ಮೊದಲ ಬಾರಿ ಪರಿಚಯಿಸಿದ್ದು, ಗುಣಮಟ್ಟದ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿದೆ. ರಾಜ್ಯ ಸೇರಿದಂತೆ ತಮಿಳುನಾಡು, ಕೇರಳ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಘಡಕ್ಕೂ ವಹಿವಾಟು ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಅಭಿನಂದಿತರ ನುಡಿ: ಮಹಿಳೆಯರು ಎಷ್ಟೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡರೂ ಗುರುತಿಸುವುದಿಲ್ಲ ಎಂಬ ಕೊರಗನ್ನು ಸಂಸ್ಥೆ ನಿವಾರಿಸಿದೆ. ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾಗೃತಿ ಮೂಡಿಸಬೇಕು ಎಂದು ಕಾಂಚನಾ ಹೇಳಿದರು. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸ್ತನ ಕ್ಯಾನ್ಸರ್‌ ಕಾಣಿಸಿಕೊಂಡರೂ ಗೊತ್ತಾಗುವುದಿಲ್ಲ. ಹಾಗಾಗಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಚುನಾವಣೆ ಸಮೀಪಿಸುತ್ತಿದ್ದು, ಮಹಿಳಾ ಮತದಾರರನ್ನು ಸೆಳೆಯಲು ಕೋಟ್ಯಂತರ ಕುಕ್ಕರ್‌, ಸೀರೆ ಹಂಚಿಕೆಗೆ ಸಿದ್ಧತೆ ನಡೆದಿವೆ. ಇದಕ್ಕೆ ಮಹಿಳೆಯರು ಮರುಳಾಗದೆ ಉತ್ತಮರನ್ನು ಆಯ್ಕೆ ಮಾಡಬೇಕು ಎಂದು ಗೀತಾ ವೇಲುಮಣಿ ಸಲಹೆ ನೀಡಿದರು.

ಅಸಾಧಾರಣ ಸಾಧಕಿಯರು: ಎಚ್‌ಐವಿ ಸೋಂಕಿತರು ಗೌರವಯುತ ಜೀವನ ನಡೆಸಲು ಪೂರಕ ವಾತಾವರಣ ನಿರ್ಮಿಸಿ, ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಿಎಂಸಿಆರ್‌ಐನ ಪ್ರಾಧ್ಯಾಪಕಿ ಡಾ.ಅಸೀಮಾ, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಪ್ರೋತ್ಸಾಹ ನೀಡಿ ಸಾವಯವ ಕೃಷಿ ಉತ್ತೇಜಿಸುತ್ತಿರುವ ಪಿರಿಯಾಪಟ್ಟಣ ಕಣಗಾಲು ಗ್ರಾಮದ ಪದ್ಮಮ್ಮ, ಬಡ ಮಕ್ಕಳಿಗೆ ಉಚಿತ ಊಟ, ವಸತಿ, ಮನೆಪಾಠ, ಶಿಕ್ಷಣ ನೀಡುತ್ತಿರುವ ಬೆಂಗಳೂರಿನ ಗುಬ್ಬಲಾಳದ ಮಂಗಳಾ ಮೇತ್ರಿ, ಅಶಿಕ್ಷಿತ ಮಹಿಳೆಯರಿಗೆ ಊಟ, ವಸತಿ ಜತೆಗೆ ಶಿಕ್ಷಣ ನೀಡಿ ಗೌರವಯುತ ಜೀವನ ನಡೆಸಲು ನೆರವಾದ ಚಿತ್ರದುರ್ಗದ ಎಂ.ಆರ್‌.ವಿಜಯಲಕ್ಷ್ಮೀ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಬಲರ ಬಾಳಿಗೆ ಆಶಾಕಿರಣ: ಮಧ್ಯಮ ವರ್ಗದ ಮಹಿಳೆಯರಿಗೆ ಕಲೆ ಮತ್ತು ಕರಕುಶಲ ತರಬೇತಿ ನೀಡಿ ಉದ್ಯಮಿಗಳಾಗಲು ನೆರವಾಗುತ್ತಿರುವ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮುದಿಗೌಡಕೇರಿಯ ಕಾಂಚನಾ, ಅಂಧ, ವಿಕಲಚೇತನ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ ಕಲಿಕೆಯಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಕೆ.ಕೆ.ಕಾವ್ಯ, ಶಾಲೆಯಿಂದ ಹೊರಗುಳಿದ ಮಕ್ಕಳು ಶಿಕ್ಷಣ ಪಡೆಯಲು ನೆರವಾಗುವ ಜತೆಗೆ ಕೈಗಾರಿಕೆಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ತರಬೇತಿ ನೀಡುತ್ತಿರುವ ಮಂಗಳೂರಿನ ವಿಶಾಖ ಕಾಮತ್‌, ದನಿಯಿಲ್ಲದ, ದಮನಿತ ಮಹಿಳೆಯರ ಪರ ದನಿಯೆತ್ತುವ ಜತೆಗೆ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಮೈಸೂರಿನ ಗೀತಾ ವೇಲುಮಣಿ ಅವರಿಗೂ ಸಾಧಕರ ಗೌರವ ಸಂದಿತು.

ಮಹಿಳಾ ಜಾಗೃತಿಯ ಕಿಡಿಗಳು: ಮಹಿಳಾ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ ಸ್ವಾವಲಂಬಿಗಳನ್ನಾಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡ ಶಿವಮೊಗ್ಗ ಚನ್ನಕೇಶವನಗರದ ಕೆ.ಪುಷ್ಪಲತಾ, ಮಕ್ಕಳ ಶಿಕ್ಷಣ ಹಾಗೂ ಮಕ್ಕಳ ಹಕ್ಕುಗಳ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಎನ್‌.ಸುಜಾತಾ ಹಾಗೂ ಮಹಿಳಾ ಸಬಲೀಕರಣ, ಮಕ್ಕಳ ಪೋಷಣೆ ಜತೆಗೆ ಮಹಿಳಾ ಮಾನಸಿಕ ಆರೋಗ್ಯ ಬಲವರ್ಧನೆಯಲ್ಲಿ ತೊಡಗಿಸಿಕೊಂಡಿರುವ ಮನೋರೋಗ ತಜ್ಞೆ ಡಾ.ಪದ್ಮಾಕ್ಷಿ ಲೋಕೇಶ್‌ ಅವರನ್ನು ಅಭಿನಂದಿಸಲಾಯಿತು. ಎಂ.ಕೆ. ಆಗ್ರೋಟೆಕ್‌ ಪ್ರೈವೇಟ್‌ ಲಿಮಿಟೆಡ್‌ನ‌ ನಿರ್ದೇಶಕರೂ ಆದ ಮಾಸೂಮ್‌ ಟ್ರಸ್ಟ್‌ನ ಟ್ರಸ್ಟಿ ಸಲ್ಮಾ ಸುಭಾನ್‌, ಅವರ ಪುತ್ರಿ ಫ‌ರಾ ಖಾನ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಟಾಪ್ ನ್ಯೂಸ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.