ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್ ಮಂಡನೆ
Team Udayavani, Feb 5, 2019, 6:23 AM IST
ಬೆಂಗಳೂರು: ಮುಂಬರುವ ಬಜೆಟ್‌ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ, ರೈತರ, ಅಸಂಘಟಿತ ಕಾರ್ಮಿಕರ ಪರವಾಗಿರುವ ಮತ್ತು ಮಧ್ಯಮ ವರ್ಗದ ಆಶಯಕ್ಕೆ ಪೂರಕವಾಗಿರುವ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸೋಮವಾರ ಪತ್ರಿಕೆಗಳ ಸಂಪಾದಕರ ಜತೆ ಸಂವಾದ ನಡೆಸಿದ ಅವರು, ಆಟೋಚಾಲಕರ ಸಂಘಟನೆಗಳು, ಗಾರ್ಮೆಂಟ್ಸ್ ನೌಕರರು ಮತ್ತಿತರ ಅಸಂಘಟಿತ ಕ್ಷೇತ್ರಗಳ ಪ್ರತಿನಿಧಿಗಳ ಸಲಹೆಗಳನ್ನೂ ಬಜೆಟ್ ರೂಪಿಸುವಲ್ಲಿ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಸರ್ಕಾರ ಜಾರಿಗೊಳಿಸಿದ್ದ ಅನ್ನಭಾಗ್ಯ, ರೈತರಿಗೆ ಉಚಿತ ವಿದ್ಯುತ್‌ನಂತಹ ಯೋಜನೆಗಳನ್ನು ಮುಂದುವರಿಸಲಾಗಿದೆ. ಒಟ್ಟಾರೆಯಾಗಿ ಸುಮಾರು 11,000 ಕೋಟಿ ರೂ.ಗಳನ್ನು ಸರ್ಕಾರದಿಂದ ಒದಗಿಸಲಾಗಿದೆ. 45,000 ಕೋಟಿ ರೂ. ಸಾಲಮನ್ನಾಕ್ಕಾಗಿ ಮೀಸಲಿರಿಸಲಾಗಿದೆ.
ಉಳಿದಂತೆ 85% ಬಿಪಿಎಲ್ ಕಾರ್ಡ್ ಹೊಂದಿರುವವರ ಬಗ್ಗೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕಾಗಿದೆ ಎಂದು ಹೇಳಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಘೋಷಣೆಯಾದ ರೈತಬೆಳಕು ಯೋಜನೆ ಬಗ್ಗೆ ಪ್ರಸ್ತಾಪಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ,3,500 ಕೋಟಿ ರೂ ಅನುದಾನದ ಘೋಷಣೆಯಾಗಿತ್ತು. ಆದರೆ, 1,000 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು.
ತಾವು ಆಡಳಿತಕ್ಕೆ ಬಂದ ಮೇಲೆ ಆ ಯೋಜನೆ ಸ್ಥಗಿತವಾಗಿರುವ ಬಗ್ಗೆ ತಮಗೇನೂ ಬೇಸರವಿಲ್ಲ. ರೈತರ ಸಾಲಮನ್ನಾ ತಮಗೆ ತೃಪ್ತಿ ತಂದಿದೆ ಎಂದು ತಿಳಿಸಿದರು. ವಿವಿಧ ಭಾಗ್ಯಗಳು, ರೈತರ ಸಾಲಮನ್ನಾ ಯೋಜನೆಗಳು ಜನರ ಸಮಸ್ಯೆಯನ್ನು ನಿಜವಾಗಿ ಪರಿಹರಿಸುತ್ತವೆ ಎನ್ನುವುದರ ಬಗ್ಗೆ ಖಾತ್ರಿಯಿಲ್ಲ. ಅನಿವಾರ್ಯ ಸಂದರ್ಭಗಳಲ್ಲಿ, ಚುನಾವಣಾ ಪ್ರಣಾಳಿಕೆಗಳಿಗೆ ಅನುಗುಣವಾಗಿ ಕೆಲವು ನಿರ್ಧಾರಗಳನ್ನು ಪ್ರಕಟಿಸಬೇಕಾಗುತ್ತದೆ ಎಂದ ಅವರು, ಒಟ್ಟಾರೆ ಅಬಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸುವುದಾಗಿ ಹೇಳಿದರು.
ಪ್ರಧಾನಿಗೆ ಪತ್ರ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕರ್ನಾಟಕದ ಕೊಡುಗೆ ಮಹತ್ವದ್ದಾಗಿದ್ದರೂ ಪ್ರಧಾನಿ ಮೋದಿ ಅವರ ಚಿತ್ರವನ್ನು ಪ್ರಕಟಿಸಿ ಯೋಜನೆ ಕೇಂದ್ರ ಸರ್ಕಾರದ್ದೇ ಎನ್ನುವ ರೀತಿಯಲ್ಲಿ ಪ್ರದರ್ಶನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಟಕಿಯಾಡಿದ್ದಾರೆ.
ರಾಜ್ಯಸರ್ಕಾರದಿಂದ ಸುಮರು 130 ಕೊಟಿ ರೂ. ಯೋಜನೆಗೆ ಒದಗಿಸಲಾಗುತ್ತಿದೆ. ಕೇಂದ್ರ ಸರ್ಕಾರ ಕೇವಲ 30 ಕೊಟಿ ರೂ.ಗಳನ್ನು ಕೇಂದ್ರ ನೀಡುತ್ತಿದೆ. ದೇಶದೆಲ್ಲೆಡೆ ಈ ರೀತಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಕೊಡುಗೆ ಮಹತ್ವದ್ದಾಗಿರುವುದರಿಂದ ಆ ಬಗ್ಗೆ ಪ್ರಕಟಣೆಗಳಲ್ಲಿ,
ಕೇಂದ್ರ ನಡೆಸುತ್ತಿರುವ ಪ್ರಚಾರದಲ್ಲಿ ಉಲ್ಲೇಖೀಸಬೇಕೇಂದು ತಿಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಆ ಕಾರಣಕ್ಕಾಗಿ ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂದೂ ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರ ಸಿಬಿಐ ತನಿಖಾ ಸಂಸ್ಥೆಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿರುವುದು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾದುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲಿ ನಡೆದಿರುವ ಘಟನೆ ರಾಜ್ಯ ಸರ್ಕಾರಗಳ ಸ್ವಾಯತ್ತತೆಗೆ ಧಕ್ಕೆ ತರುವ ವಿಚಾರವಾಗಿದೆ. ತಾವು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರವಾಗಿ ನಿಲ್ಲುತ್ತೇನೆ.
-ಎಚ್.ಡಿ. ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.