ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಸಹಕರಿಸಿ

ಎರಡು ದಿನಗಳ ಸಮ್ಮೇಳನದಲ್ಲಿ ದಕ್ಷಿಣ ಭಾರತದ ಪ್ರವಾಸೋದ್ಯಮ ಸಚಿವರ ಹೇಳಿಕೆ

Team Udayavani, Oct 29, 2021, 10:28 AM IST

ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಸಹಕರಿಸಿ

ಬೆಂಗಳೂರು: ಪಾರಂಪರಿಕ ತಾಣಗಳ ಅಭಿವೃದ್ಧಿ ಕಾರ್ಯಗಳನ್ನು ನೀವೂ ಮಾಡುವುದಿಲ್ಲ; ನಮಗೂ ಆ ಕೆಲಸ ಮಾಡಲು ಬಿಡುವುದಿಲ್ಲ. ಈ ಮಧ್ಯೆ ಪ್ರವಾಸಿ ತಾಣಗಳು ವರ್ಷಗಟ್ಟಲೆ ಹಾಗೇ ಉಳಿಯುತ್ತವೆ! – ಕೇಂದ್ರ ಪ್ರವಾಸೋದ್ಯಮ ಇಲಾಖೆ ನಗರದಲ್ಲಿ ಹಮ್ಮಿಕೊಂಡ ದಕ್ಷಿಣ ಭಾರತದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರುಗಳ ಎರಡು ದಿನಗಳ ಸಮ್ಮೇಳನದಲ್ಲಿ ಗುರುವಾರ ದಕ್ಷಿಣ ಭಾರತದ ಸಚಿವರು ಅಸಮಾಧಾನ ಹೊರಹಾಕಿದ ಪರಿ ಇದು.

ಇದರೊಂದಿಗೆ ಪ್ರವಾಸೋದ್ಯಮ ವಲಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಮನ್ವಯ ಕೊರತೆಗೆ ಉದ್ದೇಶಿತ ವೇದಿಕೆ ಸಾಕ್ಷಿಯಾಯಿತು. ಕರ್ನಾಟಕ, ಕೇರಳ, ಪುದುಚೆರಿ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್‌, ಲಕ್ಷದ್ವೀಪ ಸೇರಿದಂತೆ ಎಂಟು ರಾಜ್ಯಗಳ ಪ್ರತಿನಿಧಿಗಳು, ಪ್ರವಾಸೋದ್ಯಮ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದ ಸಮ್ಮೇಳನದಲ್ಲಿ “ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ)ದ ಸುಪರ್ದಿಗೆ ಬರುವ ಪಾರಂಪರಿಕ ತಾಣಗಳ ಪ್ರವೇಶಕ್ಕೂ ತಮಗೆ ಅವಕಾಶ ನೀಡುವುದಿಲ್ಲ. ಹೋಗಲಿ ನೀವು ಕೂಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತಿಲ್ಲ. ಇದರಿಂದ ತಾಣಗಳು ನೆನಗುದಿಗೆ ಬೀಳುತ್ತವೆ’ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:- ಕಿವೀಸ್ ವಿರುದ್ಧ ಗೆಲ್ಲಬೇಕಾದರೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆಗಳು ಅಗತ್ಯ: ಗಾವಸ್ಕರ್

ಈ ಧೋರಣೆ ಯಾಕೆ?: ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್‌ ಮಾತನಾಡಿ, “ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದ ಸ್ಮಾರಕಗಳು ಮತ್ತು ಪಾರಂಪರಿಕ ತಾಣಗಳು ನಮ್ಮಲ್ಲಿರುವುದು ಹೆಮ್ಮೆಪಡುವ ಸಂಗತಿ. ಅವುಗಳ ರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ನಾವೆಲ್ಲರೂ ಬದ್ಧರಾಗಿರಬೇಕು. ಇದರಲ್ಲಿ ಎರಡು ಮಾತಿಲ್ಲ.

ನಾವು ನಿಮಗೆ ಸಹಕಾರ ನೀಡುತ್ತೇವೆ. ಅದಕ್ಕೆ ಪೂರಕವಾಗಿ ನೀವೂ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳಲ್ಲಿ ಎಎಸ್‌ಐ ಸ್ಥಳೀಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಾಗುತ್ತದೆ. ಇದು ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಶೀಘ್ರ ರಾಷ್ಟ್ರಮಟ್ಟದ ಸಮ್ಮೇಳನ: ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಪ್ರವಾಸೋ ದ್ಯಮ ಸಚಿವ ಜಿ. ಕಿಶನ್‌ ರೆಡ್ಡಿ, ಕೋವಿಡ್‌ ಹಾವಳಿ ನಂತರದಲ್ಲಿ ದೇಶದ ಪ್ರವಾಸೋದ್ಯಮ ಅಭಿವೃದ್ಧಿಗೆ ದೊಡ್ಡ ಪೆಟ್ಟುಬಿದ್ದಿದೆ. ಇದನ್ನು ಮತ್ತೆ ಸಹಜ ಸ್ಥಿತಿಗೆ ತರಲು ಹಲವು ರೀತಿಯ ಪ್ರಯತ್ನಗಳು ನಡೆಯು ತ್ತಿವೆ. ಈಗಾಗಲೇ ಈಶಾನ್ಯ ರಾಜ್ಯಗಳ ಪ್ರವಾಸೋ ದ್ಯಮ ಸಚಿವರುಗಳು, ಟ್ರಾವೆಲ್‌ ಏಜೆನ್ಸಿಗಳು, ಗೈಡ್‌ ಗಳು ಮತ್ತಿತರ ಸಭೆ ಕರೆದು ಚರ್ಚಿಸಲಾಗಿದೆ. ಈಗ ದಕ್ಷಿಣ ಭಾರತದ ರಾಜ್ಯಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಮುಂದುವರಿದ ಭಾಗವಾಗಿ ಇನ್ನೆರಡು ತಿಂಗಳಲ್ಲಿ ರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ಸಚಿವರುಗಳ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಕನ್ನಡ ನಾಪತ್ತೆ: ಸಚಿವ ಆನಂದ್‌ ಸಿಂಗ್‌ ಬೇಸರ

ಒಂದೆಡೆ ಸ್ವತಃ ರಾಜ್ಯ ಸರ್ಕಾರ “ಮಾತಾಡ್‌ ಮಾತಾಡ್‌ ಕನ್ನಡ’ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲೆಡೆ ಕನ್ನಡ ಅನುರಣಿಸುತ್ತಿದೆ. ಕನ್ನಡ ರಾಜ್ಯೋತ್ಸವ ಹೊಸ್ತಿಲಲ್ಲಿದೆ. ಈ ಸಂದರ್ಭದಲ್ಲಿ ಮತ್ತೂಂದೆಡೆ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡ ಎರಡು ದಿನಗಳ ಕಾರ್ಯಕ್ರಮದಲ್ಲೇ ಕನ್ನಡ ಕಾಣೆಯಾಗಿದೆ. ಇದನ್ನು ಖುದ್ದು ಸಚಿವ ಆನಂದ್‌ ಸಿಂಗ್‌ ಬೇಸರ ವ್ಯಕ್ತಪಡಿಸಿದರು. ನಗರದ ತಾಜ್‌ ವೆಸ್ಟ್‌ ಎಂಡ್‌ನ‌ಲ್ಲಿ ಗುರುವಾರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನದ ಸ್ವಾಗತ ಕಮಾನು ಮತ್ತು ಮುಖ್ಯ ವೇದಿಕೆಯಲ್ಲಿ ಹಾಕಿರುವ ಪರದೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ರಾರಾಜಿ ಸುತ್ತಿದ್ದವು.

ಆದರೆ, ಕನ್ನಡಕ್ಕೆ ಅಲ್ಲಿ ಅವಕಾಶವೇ ಇರಲಿಲ್ಲ. ಇದು ಮಾಧ್ಯಮಗಳು ಮತ್ತು ಕೆಲ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ತಕ್ಷಣ ಎಚ್ಚೆತ್ತ ಸಚಿವ ಆನಂದ್‌ ಸಿಂಗ್‌, ಕೇಂದ್ರ ಪ್ರವಾಸೋದ್ಯಮ ಇಲಾಖೆಯ ಮಹಾ ನಿರ್ದೇಶಕ ಗಂಜಿ ಕಮಲ ವರ್ಧನ್‌ ರಾವ್‌ ಅವರಿಗೆ ಕನ್ನಡ ಬ್ಯಾನರ್‌ ಹಾಕಲು ತಾಕೀತು ಮಾಡಿದರು. ಅಲ್ಲದೆ, ಕೆಲ ಅಧಿಕಾರಿಗಳನ್ನು ತರಾಟೆಗೂ ತೆಗೆದುಕೊಂಡರು. ಮಧ್ಯಾಹ್ನದ ಹೊತ್ತಿಗೆ ವೇದಿಕೆ ಎರಡೂ ಬದಿ ಡಿಜಿಟಲ್‌ ಪರದೆಯಲ್ಲಿ ಕನ್ನಡ ಕಾಣಿಸಿತು.

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.