ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂ ವಿಚಾರಣೆ
Team Udayavani, May 19, 2018, 6:30 AM IST
ನವದೆಹಲಿ: ಇತ್ತ ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆ.ಜಿ.ಬೋಪಯ್ಯ ಅವರನ್ನು ನೇಮಕ ಮಾಡುತ್ತಿದ್ದಂತೆ ಅತ್ತ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತೆ ಸುಪ್ರೀಂ ಕದ ಬಡಿದಿದ್ದಾರೆ.
ಅರ್ಜಿ ಸ್ವೀಕರಿಸಿರುವ ಸಿಜೆಐ ದೀಪಕ್ ಮಿಶ್ರಾ ಶನಿವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಿಗದಿಗೊಳಿಸಿದ್ದಾರೆ. ನ್ಯಾ. ಸಿಕ್ರಿ ನೇತೃತ್ವದ ಪೀಠದ ಮುಂದೆಯೇ ಅರ್ಜಿ ವಿಚಾರಣೆಗೆ ಬರಲಿದೆ.
ಸಂವಿಧಾನದ ನಿಯಮಾವಳಿ ಬದಿಗೆ ತೂರಿ ರಾಜ್ಯಪಾಲರು ಬೋಪಯ್ಯ ಅವರನ್ನು ನೇಮಕ ಮಾಡಿದ್ದಾರೆ. ಅಲ್ಲದೆ 2009ರಿಂದ 2013ರ ವರೆಗೆ ಸ್ಪೀಕರ್ ಆಗಿದ್ದ ಬೋಪಯ್ಯ ಕೆಲವು ವಿವಾದಾತ್ಮಕ ನಿರ್ಧಾರ ತೆಗೆದುಕೊಂಡಿದ್ದರು. ಈ ನಿರ್ಧಾರಗಳನ್ನು ಸುಪ್ರೀಂ ವಜಾ ಮಾಡಿತ್ತು. ಹೀಗಾಗಿ ಕಳಂಕಿತ ಬೋಪಯ್ಯ ಅವರನ್ನು ಸ್ಪೀಕರ್ ಆಗಿ ಮುಂದುವರಿಸಬಾರದು.
ಇದು ನಮ್ಮ ಸಾವು ಬದುಕಿನ ಪ್ರಶ್ನೆಯಾಗಿದ್ದು ಈ ಕೂಡಲೇ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು 8 ಗಂಟೆ ಸುಮಾರಿಗೆ ಕಾಂಗ್ರೆಸ್‌ನ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂ Ì ಸುಪ್ರೀಂ ರಿಜಿಸ್ಟ್ರಾರ್‌ಗೆ ಮನವಿ ಸಲ್ಲಿಸಿದ್ದರು.ಅಲ್ಲದೆ ಯಾವುದೇ ಅಡ್ಡದಾರಿ ಹಿಡಿದಾದರೂ ಸರಿಯೇ ವಿಶ್ವಾಸಮತ ಗೆಲ್ಲಲೇಬೇಕೆಂದು ಬಿಜೆಪಿ ಹೊರಟಿದೆ. ಇದಕ್ಕಾಗಿಯೇ ಬಿ.ಎಸ್.ಯಡಿಯೂರಪ್ಪ ಆಪ್ತ ಬೋಪಯ್ಯ ಅವರನ್ನೇ ಹಂಗಾಮಿ ಸ್ಪೀಕರ್ ಮಾಡಲಾಗಿದೆ. ಇವರ ಆಯ್ಕೆ ಸರಿಯಲ್ಲ ಎಂದು ರಣದೀಪ್ ಸುಜೇìವಾಲ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.