ಕಲಾಕೃತಿಗಳಲ್ಲಿ ಸೀರೆ ಹಿರಿಮೆ
Team Udayavani, Jun 23, 2018, 11:38 AM IST
ಬೆಂಗಳೂರು: ನಾಡಿನ ಸಂಸ್ಕೃತಿ, ಪರಂಪರೆ ಮರೆಯಾಗುತ್ತಿರುವ ಇತ್ತೀಚಿನ ದಿನಗಳಲ್ಲಿ ಕಲಾವಿದರು ತಮ್ಮ ಕಲಾಕೃತಿಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಬೇಕಿದೆ ಎಂದು ಅಂತಾರಾಷ್ಟ್ರೀಯ ಚಿತ್ರಕಲಾವಿದ ಕಾಂತರಾಜ್ ಅಭಿಪ್ರಾಯಪಟ್ಟರು.
ಮಹಾತ್ಮಗಾಂಧಿ ರಸ್ತೆಯ ರಂಗೋಲಿ ಮೆಟ್ರೋ ಕಲಾ ಕೇಂದ್ರದಲ್ಲಿ ಶುಕ್ರವಾರ ಹುಬ್ಬಳ್ಳಿಯ ಯುವ ಚಿತ್ರ ಕಲಾವಿದ ಗಣೇಶ್ ಎಸ್. ಸಬೋಜಿ ಅವರ “ಮತ್ಸ’ ಕಲಾಕೃತಿಗಳ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತರ ಕರ್ನಾಟಕ ಭಾಗದ ಸುಪ್ರಸಿದ್ಧ ಇಳಕಲ್ ಸೀರೆ ಇಂದು ಆಧುನಿಕ ಬದುಕಿಗೆ ಸಿಲುಕಿ ತನ್ನ ವರ್ಚಸ್ಸು ಕಳೆದುಕೊಳ್ಳುತ್ತಿದೆ.
ಇದನ್ನು ಗಮನಿಸಿರುವ ಕಲಾವಿದ ಗಣೇಶ್ ಎಸ್. ಸಬೋಜಿ ಅವರು ಮತ್ಸ ಕಲ್ಪನೆ ಮೂಲಕ ತಮ್ಮ ಕಲಾಕೃತಿಯಲ್ಲಿ ಸೀರೆಯ ಮೌಲ್ಯ ಕಟ್ಟಿಕೊಡುವ ಪ್ರಯತ್ನಕ್ಕೆ ಮುಂದಾಗಿರುವುದು ಶ್ಲಾಘನೀಯ. ಮೊಬೈಲ್ ಯುಗದಲ್ಲಿ ಮುಳುಗಿ ಹೋಗಿರುವ ಇಂದಿನ ಯುವ ಪೀಳಿಗೆ ನಾಡಿನ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದು ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಹಿರಿಯ ಚಿತ್ರಕಲಾವಿದ ಗಣೇಶ್ ದೊಡಮನಿ ಮಾತನಾಡಿ, ಕಲಾವಿದನಿಗೆ ಕಲಾಕೃತಿ ಬಿಡಿಸುವ ನಿಪುಣತೆ ಇದ್ದರೆ ಸಾಲದು. ಆತನಿಗೆ ತಾನು ಬಿಡಿಸಿದ ಕಲಾಕೃತಿಗಳ ಬಗ್ಗೆ ಕಲಾರಸಿಕರಿಗೆ ಮನ ಮುಟ್ಟುವ ರೀತಿಯಲ್ಲಿ ವರ್ಣಿಸಿ ಹೇಳುವ ಕೌಶಲ್ಯ ಕೂಡ ಇರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.