ಜೂನ್ ಅಂತ್ಯದೊಳಗೆ ಕೆರೆಗಳ ವಿಸ್ತೀರ್ಣ ಸರ್ವೆ ಮಾಡಿ ತಂತಿಬೇಲಿ ಹಾಕಿ
Team Udayavani, May 27, 2017, 12:47 PM IST
ಬೆಂಗಳೂರು: ಜೂನ್ ಅಂತ್ಯದೊಳಗಾಗಿ ಮಹದೇವಪುರ ವಲಯದ ನೆಲ್ಲೂರಹಳ್ಳಿ, ಸಿದ್ದಾಪುರ ಹಾಗೂ ಶೀಲವಂತ ಕೆರೆಗಳ ಸರ್ವೆ ನಡೆಸಿ ತಂತಿಬೇಲಿ ಆಳವಡಿಸುವಂತೆ ಅಧಿಕಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಆದೇಶಿಸಿದ್ದಾರೆ.
ಶುಕ್ರವಾರ ವೈಟ್‌ಫೀಲ್ಡ್ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ನಂತರ ಸ್ಥಳೀಯರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮೂರು ಕೆರೆಗಳು ಸಂಪೂರ್ಣವಾಗಿ ಕಲುಷಿತಗೊಂಡಿದ್ದು, ಹೆಚ್ಚಿನ ಪ್ರಮಾಣದ ತ್ಯಾಜ್ಯ ಸುರಿಯಲಾಗುತ್ತಿದೆ ಎಂದು ಆರೋಪಿಸಿದರು.
ಇದಕ್ಕೆ ಸ್ಪಂದಿಸಿದ ಜಾರ್ಜ್ ಅವರು, ಮೂರು ಕೆರೆ ಪ್ರದೇಶಗಳಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಜೂನ್ ವೇಳೆಗೆ ಕೆರೆಯ ಅಳತೆಯನ್ನು ಸರ್ವೆ ನಡೆಸಿ ತಂತಿಬೇಲಿ ಅಳವಡಿಕೆಗೆ ಮುಂದಾಗಬೇಕು ಎಂದರು.
ವಿಬ್‌ಗಯಾರ್ ರಸ್ತೆ ಮತ್ತು ನಾರಾಯಣಪುರ ರಸ್ತೆಗಳ ವಿಸ್ತರಣೆಯ ಕುರಿತು ಪಾಲಿಕೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರಸ್ತೆ ವಿಸ್ತರಣೆಗೆ ಹೆಚ್ಚುವರಿ ಜಾಗದ ಅಗತ್ಯವಿದ್ದು, ಭೂ ಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದೆ ಎಂದ ಅವರು, ಪಾಲಿಕೆಯ ವಿಶೇಷ ಆಯುಕ್ತರಿಗೆ, ಟಿ.ಡಿ.ಆರ್‌ಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿ ಜೂನ್ ಅಂತ್ಯದೊಳಗೆ ಕಾಮಗಾರಿ ಪ್ರಾರಂಭಿಸುವಂತೆ ಆದೇಶಿಸಿದರು.
ಪಾಲಿಕೆಯಿಂದ ಹೋಪ್ ಫಾರ್ಮ್ ಬಳಿ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಗೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂವಾಗುವ ಬಗ್ಗೆ ಸ್ಥಳೀಯರ ಪ್ರಶ್ನೆಗೆ ಉತ್ತರಿಸಿದ ಜಾರ್ಜ್, ಉಂಟಾಗಿರುವ ಸಮಸ್ಯೆಗಳನ್ನು ಅತ್ಯಂತ ಶೀಘ್ರವಾಗಿ ಬಗೆಹರಿಸಿ ಏಕಕಾಲದಲ್ಲಿ ಹೂಡಿ, ಕುಂದಲಹಳ್ಳಿ ಹಾಗೂ ಹೋಪ್ ಫಾರ್ಮ್ ಸ್ಥಳಗಳಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಆದೇಶಿಸಿದರು.
ಪಾಲಿಕೆಯಿಂದ ಹೊಸದಾಗಿ ಚಾಲನೆ ನೀಡಿರುವ ಸ್ವಯಂ ಚಾಲಿತ ರಸ್ತೆ ಗುಡಿಯುವ ಯಂತ್ರಗಳಲ್ಲಿ ಒಂದು ಯಂತ್ರವನ್ನು ಮಹದೇವಪುರ ಭಾಗದಲ್ಲಿನ ಸ್ವತ್ಛತಾ ಕಾರ್ಯಕ್ಕೆ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ಸಚಿವರು, ಕೆಲವೇ ದಿನಗಳಲ್ಲಿ ಯಂತ್ರ ಕಾರ್ಯಾರಂಭ ಮಾಡಲಿದ್ದು, ವಾಹನ ನಿಲುಗಡೆ ಸ್ಥಳ ನಿಯೋಜನೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ಮಾತನಾಡಿದ ಅವರು, ಸಂವಾದ ಸಭೆಯಲ್ಲಿ ಕೈಗೊಂಡಿರುವ ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಲಾಗಿರುವ ಆದೇಶಗಳ ಕುರಿತು 45 ದಿನಗಳ ನಂತರ ಮತ್ತೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಆರ್ಷದ್, ಪಾಲಿಕೆ ವಿಶೇಷ ಆಯುಕ್ತ (ಹಣಕಾಸು) ಮನೋಜ್ ಕುಮಾರ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಬೆಳ್ಳಂದೂರು ಬಳಿ ನಿರ್ಮಾಣವಾಗುತ್ತಿರುವ ತ್ಯಾಜ್ಯ ನೀರು ಶುದ್ದೀಕರಣ ಘಟಕ ಜುಲೈನಿಂದಲೇ ಕಾರ್ಯಾರಂಭವಾಗಲಿದ್ದು, ಕೆರೆಯಲ್ಲಿನ ಜೊಂಡು ತೆರವುಗೊಳಿಸುವ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ. ಬೆಳ್ಳಂದೂರು ಕೆರೆ ಸ್ವತ್ಛಗೊಳಿಸುವ ಕಾರ್ಯ ಮುಗಿದ ನಂತರ ವರ್ತೂರು ಕೆರೆಯನ್ನು ಸ್ವತ್ಛಗೊಳಿಸಲಾಗುವುದು.
-ರಾಕೇಶ್ ಸಿಂಗ್, ಬಿಡಿಎ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.