ಸಮೀಕ್ಷೆ ನಂಬಲ್ಲ:120 ಸ್ಥಾನ ಗ್ಯಾರಂಟಿ; ದೇವೇಗೌಡ
Team Udayavani, Apr 15, 2018, 7:05 AM IST
ಬೆಂಗಳೂರು: ಈ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನ ಗೆದ್ದು ಅಧಿಕಾರಕ್ಕೆ ಬರುವುದು ಖಚಿತ. ಯಾವುದೇ ಸಮೀಕ್ಷೆಗಳನ್ನೂ ನಾನು ನಂಬುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಜೆಡಿಎಸ್ ಕಚೇರಿ “ಜೆಪಿ ‘ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, 2013 ರ ಚುನಾವಣೆಯಲ್ಲಿ ಜೆಡಿಎಸ್‌ಗೆ 13 ಸ್ಥಾನ ಬರುತ್ತೆ ಅಂತ ಸಮೀಕ್ಷೆಯಲ್ಲಿ ಹೇಳಿದ್ದರು, 40 ಸ್ಥಾನ ಬಂತು. ಇದೀಗ 43 ಅಂತ ಹೇಳಿದ್ದಾರೆ, 120 ಸ್ಥಾನ ಗೆಲೆ¤àವೆ ಎಂದು ಹೇಳಿದರು.
ಇಂಡಿಯಾ ಟುಡೆ ಸಮೀಕ್ಷೆಯಲ್ಲಿ ಕೊಟ್ಟಿರೋ ಅಂಕಿಯನ್ನು 3 ರಿಂದ ಗುಣಿಸಿದರೆ ಬರುವುದೇ ಜೆಡಿಎಸ್ ಫಲಿತಾಂಶ. ನನಗೆ ರಾಜ್ಯದ ಜನರಲ್ಲಿ ವಿಶ್ವಾಸವಿದೆ. ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಜನತೆ ತಿರಸ್ಕರಿಸಲಿದ್ದಾರೆ ಎಂದರು.
ಬಿಡುಗಡೆ ಮಾಡಿ
ಇದಕ್ಕೂ ಮುನ್ನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲರನ್ನೂ ಉದ್ಧಾರ ಮಾಡುತ್ತೇವೆ ಎಂದು ಜಾತಿ ಜನಗಣತಿ ಮಾಡಿದ್ರು ಯಾಕೆ ವರದಿ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿದರು.
ಮಾಜಿ ಸಚಿವ ಪಿ.ಜಿ.ಆರ್.ಸಿಂದ್ಯಾ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚುನಾವಣೆ ಬಂತು ಎಂದಾಗ ಮಾತ್ರ ದಲಿತರ ನೆನಪಾಗುತ್ತದೆ. ಇದೀಗ ನ್ಯಾ.ಸದಾಶಿವ ಆಯೋಗದ ವರದಿ ಬಗ್ಗೆ ಮಾತನಾಡುತ್ತಿದ್ದಾರೆ ಇಷ್ಟು ದಿನ ಯಾಕೆ ಮೌನವಾಗಿದ್ದರು ಎಂದು ಟೀಕಿಸಿದರು.
ದೇವೇಗೌಡರು ಸದಾ ಎಲ್ಲ ಜಾತಿಗಳ ಬಗ್ಗೆಯೂ ಸಮಾನ ಗೌರವ ಪ್ರೀತಿ ಹೊಂದಿದ್ದಾರೆ. ಅವರ ಆಡಳಿತದಲ್ಲಿ ಎಲ್ಲರಿಗೂ ಸಮಾನ ಅವಕಾಶ ಕೊಟ್ಟಿದ್ದರು. ರಾಜಕಾರಣದಲ್ಲಿ ಎರಡನೇ ಹಂತದ ನಾಯಕರನ್ನು ಬೆಳೆಸಿದ್ದು ದೇವೇಗೌಡರು ಎಂದು ಹೇಳಿದರು.
ಎಚ್‌ಸಿಎಂ ಎಂಬಿಬಿಎಸ್ ಮಾಡಿದ್ರಾ
ಎಚ್.ಸಿ.ಮಹದೇವಪ್ಪ ಅವರನ್ನು ರಾಜಕೀಯಕ್ಕೆ ಕರೆತಂದಿದ್ದು ದೇವೇಗೌಡರು. ಎಂಬಿಬಿಎಸ್ ಮುಗಿಸದಿದ್ದರೂ ಆರೋಗ್ಯ ಸಚಿವರನ್ನಾಗಿ ಮಾಡಿದ್ರು ಎಂದು ಹೇಳಿದ ಸಿಂದ್ಯಾ. ಮಹದೇವಪ್ಪ ಎಂಬಿಬಿಎಸ್ ಪೂರ್ಣ ಮಾಡಿದ್ರಾ ಎಂದು ಪ್ರಶ್ನಿಸಿ ತಕ್ಷಣವೇ ಅದು ಅವರ ವೈಯಕ್ತಿಕ ವಿಚಾರ. ಅದನ್ನು ನಾನು ಕೆಣಕಲ್ಲ ಎಂದು ಸುಮ್ಮನಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.