ಇಬ್ಬರು ಇನ್ಸ್ಪೆಕ್ಟರ್ಗಳ ಅಮಾನತು
Team Udayavani, May 10, 2020, 9:28 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್ಡೌನ್ ನಡುವೆಯೂ ಸಿಗರೇಟ್ ಸರಬರಾಜು ಮಾಡುತ್ತಿದ್ದ ಡೀಲರ್ ಗಳನ್ನು ಕಾನೂನು ಕುಣಿಕೆಯಿಂದ ತಪ್ಪಿಸಲು ಸಿಸಿಬಿ ಎಸಿಪಿ 25 ಲಕ್ಷ ರೂ. ಲಂಚ ಪಡೆದಿರುವ ಪ್ರಕರಣ ಸಂಬಂಧ ಇಬ್ಬರು ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ.
ಸಿಸಿಬಿ ಆರ್ಥಿಕ ವಿಭಾಗದ ಇನ್ಸ್ಪೆಕ್ಟರ್ ಗಳಾದ ಅಜಯ್ ಮತ್ತು ನಿರಂಜನ್ ಕುಮಾರ್ ಅಮಾನತಾದವರು. ಆದರೆ, ಆರ್ಥಿಕ ವಿಭಾಗದ ಎಸಿಪಿ ಪ್ರಭುಶಂಕರ ವಿರುದ್ಧ ಯಾವುದೇ ಕ್ರಮಕೈಗೊಳ್ಳದಿರುವುದು ಅನುಮಾನಗಳಿಗೆ ಎಡೆಮಾಡಿದೆ.
ಸಿಸಿಬಿ ಆಂತರಿಕ ತನಿಖೆಯಲ್ಲಿ ಸಿಗರೇಟ್ ಡೀಲರ್ಗಳಿಂದ ಎಸಿಪಿ ಪ್ರಭುಶಂಕರ 25 ಲಕ್ಷ ರೂ. ಪಡೆದಿರುವುದು ಖಚಿತಪಟ್ಟಿತ್ತು. ಎಸಿಪಿಯಿಂದ 25 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಈ ಕುರಿತ ವರದಿಗಾಗಿ ಹಾಗೂ ಆರೋಪಿತ ಎಸಿಪಿ ವಿರುದ್ಧ ಕಠಿಣ ಕ್ರಮಕ್ಕಾಗಿ ನಗರ ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಲಾಗಿತ್ತು. ಲಾಕ್ಡೌನ್ ನಡುವೆ ಸಿಗರೇಟ್ ಸರಬರಾಜು ಮಾಡುತ್ತಿದ್ದ ಮೇರೆಗೆ ಎಸಿಪಿ ಪ್ರಭುಶಂಕರ್ ನೇತೃತ್ವದ ತಂಡ ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿತ್ತು.
ಇದಾದ ಬಳಿಕ ಆ ಆರೋಪಿಯಿಂದ ಮೂವರು ಡೀಲರ್ಗಳ ಬಗ್ಗೆ ಮಾಹಿತಿ ಪಡೆದು ಅವರನ್ನು ಸಂಪರ್ಕಿಸಿದ್ದ ಎಸಿಪಿ ಪ್ರಭುಶಂಕರ, ಪ್ರಕರಣ ದಾಖಲಿಸದಿರಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಸಿಗರೇಟ್ ಡೀಲರ್ ಗಳಾದ ಆದಿಲ್, ಭೂಷಣ್, ಭಾನು ಅವರಿಂದ 25 ಲಕ್ಷ ರೂ. ಪಡೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.