ಯಲಹಂಕ ವಾಯುನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿ ಬಂಧನ
Team Udayavani, Feb 7, 2017, 12:06 PM IST
ಬೆಂಗಳೂರು: ಯಲಹಂಕ ವಾಯು ನೆಲೆ ಯಲ್ಲಿ ಕೆಲಸಕ್ಕೆ ನಿಯೋಜನೆಗೊಂಡಿದ್ದ ಉತ್ತರ ಪ್ರದೇಶ ಮೂಲದ ಕಾರ್ಮಿಕ ನನ್ನು ಅನುಮಾನಾಸ್ಪದ ವರ್ತನೆ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಮ್ನೂನ್ (24) ಬಂಧಿತ. ವಾಯುನೆಲೆಯ ಭದ್ರತಾ ಅಧಿಕಾರಿ ಸುಬೇಂದ್ರ ಮಿಶ್ರಾ ಅವರು ಫೆ.5ರಂದು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ .
ಬಂಧಿತನ ಮೊಬೈಲ್‌ನಲ್ಲಿ ವಾಯುನೆಲೆಯ ನಿಷೇಧಿತ ಪ್ರದೇಶದ ಛಾಯಾ ಚಿತ್ರಗಳು, 9 ಮೊಬೈಲ್ ಸಿಮ್‌ಕಾರ್ಡ್ ಗಳು, ಸೌದಿ ಅರೇಬಿಯಾದಲ್ಲಿರುವ ವ್ಯಕ್ತಿ ಯೊಬ್ಬರಿಗೆ ಕರೆ ಮಾಡಿರುವ ಮಾಹಿತಿ ಗಳು ಲಭ್ಯವಾಗಿರುವುದರಿಂದ ಸಮಗ್ರ ತನಿಖೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಲಹಂಕ ವಾಯುನೆಲೆಯಲ್ಲಿ ಫೆ.14 ರಿಂದ 18ರ ತನಕ ಏರ್ ಶೋ ಕಾರ್ಯಕ್ರಮ ನಡೆಯಲಿದ್ದು ಇಂತಹ ಸಂದರ್ಭದಲ್ಲೇ ಈ ವಿದ್ಯಮಾನ ನಡೆದಿರುವುದು ಆತಂಕ ಮೂಡಿಸಿದೆ.
ಏರ್ ಶೋ ಕಾರ್ಯಕ್ರಮದ ಹಿನ್ನೆಲೆ ಯಲ್ಲಿಯೇ ಉತ್ತರ ಪ್ರದೇಶದ ಮೂಲದ ಮಮ್ನೂನ್‌ನನ್ನು ಆಯೋಜಕರು ಇಲ್ಲಿಗೆ ಕೆಲಸಕ್ಕೆ ಕರೆ ತಂದಿದ್ದರು. ಈತ ಯಲಹಂಕ ವಾಯುನೆಲೆಯ ನಿಷೇಧಿತ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಅಲ್ಲದೆ, ವಾಯುನೆಲೆಯ ಪ್ರಮುಖ ಸ್ಥಳ ಗಳ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದುಕೊಂಡಿದ್ದ. ಈತನ ವರ್ತನೆ ಯಿಂದ ಅನುಮಾನಗೊಂಡ ವಾಯು ನೆಲೆ ಅಧಿಕಾರಿ ಯಲಹಂಕ ಪೊಲೀಸರಿಗೆ ದೂರು ನೀಡಿದ್ದರು.
ಮಮ್ನೂನ್ ವಾಯುನೆಲೆಯಲ್ಲಿ ಫೆ.4ರಂದು ರಾತ್ರಿ ಸುಮಾರು 9.20ರ ಸುಮಾರಿಗೆ ನಿಷೇ ಧಿತ ಪ್ರದೇಶದಲ್ಲಿ ನಿಂತು ಕರೆ ಮಾಡುತ್ತಿದ್ದ. ಅನುಮಾನ ಬಂದ ಅಧಿಕಾರಿಗಳು ಈತನನ್ನು ಕರೆಸಿ ವಿಚಾರಣೆ ನಡೆಸಿದ್ದರು. ಈತನ ಮೊಬೈಲ್‌ನಲ್ಲಿ ನಿಷೇಧಿತ ಪ್ರದೇಶದ ಫೋಟೋಗಳು ಇದ್ದಿದ್ದರಿಂದ ಅಲ್ಲಿನ ಅಧಿಕಾರಿಗಳು ದೂರು ನೀಡಿ, ಆತನನ್ನು ನಮ್ಮ ವಶಕ್ಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.