ಸ್ವಾಮಿ ನಾನು ಎಂಎಲ್‌ಎ ಕ್ಯಾಂಡಿಡೇಟ್‌, ದುರುದ್ದೇಶದಿಂದ ಬಂಧಿಸಿದ್ದಾರೆ


Team Udayavani, May 31, 2017, 12:57 PM IST

bomb-naga.jpg

ಬೆಂಗಳೂರು: ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆಯಲ್ಲಿ ಬಂಧನಕ್ಕೊಳಗಾಗಿರುವ ಪಾಲಿಕೆ ಮಾಜಿ ಸದಸ್ಯ ನಾಗರಾಜ್‌ ಶಾಸಕನಾಗುವ ಭ್ರಮೆಯಿಂದ ಇನ್ನು ಹೊರಬಂದಿಲ್ಲ. ಅದಕ್ಕೆ ಮಂಗಳವಾರ ನ್ಯಾಯಾಲಯವೂ ಸಾಕ್ಷಿಯಾಗಿದೆ. 

ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿದ್ದ ನಾಗರಾಜು, “ನನಗೆ ಮಾತನಾಡಲು ಅವಕಾಶ ನೀಡಬೇಕು,’ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದ. ಅವಕಾಶ ಕೊಡುತ್ತಿದ್ದಂತೆ “ಸ್ವಾಮಿ ನಾನು ಎಂಎಲ್‌ಎ ಅಭ್ಯರ್ಥಿ. ಪೊಲೀಸರು ದುರುದ್ದೇಶದಿಂದ ನನ್ನನ್ನು ಬಂಧಿಸಿ ಹಿಂಸೆ ನೀಡುತ್ತಿದ್ದಾರೆ. ನನಗೆ ಜೀವ ಭಯವಿದ್ದು, ನನ್ನ ವಿರುದ್ಧ ದಾಖಲಿಸಿರುವ ಯಾವ ಪ್ರಕರಣದಲ್ಲೂ ಸತ್ಯಾಂಶವಿಲ್ಲ’ ಎಂದು ನಾಗರಾಜು ಕಣ್ಣೀರು ಸುರಿಸಿದ್ದಾನೆ.

ನಂತರ “ನಾನು ಸಾಮಾಜಿಕ ಕಾರ್ಯಕರ್ತ, ಬಡ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕೊಟ್ಟು ಸಹಾಯ ಮಾಡಿದ್ದೇನೆ. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಿಲ್ಲ. ನನ್ನ ಕೈ ಮುರಿದಿದ್ದು, ಆರೋಗ್ಯ ತುಂಬಾ ಹದಗೆಟ್ಟಿದೆ. ಹೆಚ್ಚು ದಿನಗಳ ಕಾಲ ಜೈಲಿನಲ್ಲಿರಲು ಅವಕಾಶ ನೀಡಬೇಕು ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಇವೆ. ಜತೆಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ಕೂಡ ಸಿಗುತ್ತದೆ ಎಂದು ನಾಗರಾಜ್‌ಗೆ ಪ್ರತಿಕ್ರಿಯೆ ನೀಡಿದರು.

ಮತ್ತೆ ಏಳು ದಿನ ಪೊಲೀಸರ ವಶಕ್ಕೆ: ನಾಗರಾಜ್‌ ಮತ್ತು ಇಬ್ಬರು ಪುತ್ರರು ಸೇರಿದಂತೆ ಐದು ಮಂದಿಯನ್ನು ಹೆಚ್ಚಿನ ವಿಚಾರಣೆಗಾಗಿ ಶ್ರೀರಾಮಪುರ ಠಾಣೆ ಪೊಲೀಸರು 7 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಹೆಣ್ಣೂರು ಠಾಣೆ ಪೊಲೀಸರ ವಶದಲ್ಲಿದ್ದ ನಾಗರಾಜ್‌ನನ್ನು ಮಂಗಳವಾರ 7ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದ್ದರು.

ಇದೇ ವೇಳೆ ಶ್ರೀರಾಮಪುರ ಠಾಣೆ ಪೊಲೀಸರು, ತಮ್ಮ ಠಾಣೆಯಲ್ಲಿ ನಾಲ್ವರು ಉದ್ಯಮಿಗಳು ನಾಗರಾಜ್‌ ಮತ್ತು ಆತನ ಇಬ್ಬರು ಮಕ್ಕಳು ಸೇರಿದಂತೆ ಐವರ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗರಾಜ್‌ ಮತ್ತು ಮಕ್ಕಳಾದ ಶಾಸ್ತ್ರೀ, ಗಾಂಧಿ ಹಾಗೂ ಬೆಂಬಲಿಗರಾದ ಶರವಣ, ಜಯಕೃಷ್ಣನನ್ನು ವಶಕ್ಕೆ ಪಡೆಯಲು ಮನವಿ ಮಾಡಿದ್ದರು. ಇದಕ್ಕೆ ಪುರಸ್ಕರಿಸಿದ ನ್ಯಾಯಾಲಯ 7 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ.

ಟಾಪ್ ನ್ಯೂಸ್

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.