ರಸ್ತೆಗಳ ಸ್ವಚ್ಛತೆಗೆ ಸ್ವೀಪಿಂಗ್‌ ಮೆಷಿನ್‌

Team Udayavani, Oct 7, 2017, 12:09 PM IST

sweeping.jpg

ಬೆಂಗಳೂರು: ರಾಜಧಾನಿಯಲ್ಲಿ ಶೇ.60ಕ್ಕಿಂತ ಹೆಚ್ಚು ವಾಹನಗಳು ಸಂಚರಿಸುವ 1,180 ಕಿ.ಮೀ. ಪ್ರಮುಖ ರಸ್ತೆಗಳು ಹಾಗೂ ನೂರಾರು ಕಿ.ಮೀ.  ಮೇಲ್ಸೇತುವೆ, ಕೆಳಸೇತುವೆಗಳ ಸ್ವಚ್ಛತೆಗೆ ಬಿಬಿಎಂಪಿ ಯಾಂತ್ರಿಕ ಕಸ ಗುಡಿಸುವ (ಮೆಕ್ಯಾನಿಕಲ್‌ ಸ್ವೀಪಿಂಗ್‌ ಮೆಷಿನ್‌) ವಾಹನಗಳ ಮೊರೆ ಹೋಗಿದೆ. 

ಪಾಲಿಕೆಯ ಎಂಟು ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಹಿಂದೆ ನಿಯೋಜಿಸಲಾದ ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸ್ವಚ್ಛತೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆ ವ್ಯಾಪಕ ಬಳಕೆಗೆ ಮತ್ತೆ 34 ವಾಹನಗಳ ಖರೀದಿಗೆ ಮುಂದಾಗಿದೆ. ಪೌರಕಾರ್ಮಿಕರ ನಿಯೋಜನೆ ಗಿಂತಲೂ ಯಂತ್ರಗಳು ಆರ್ಥಿಕ ಮಿತವ್ಯಯಕಾರಿ ಹಾಗೂ ಸ್ವಚ್ಛತೆಗೂ ಪರಿಣಾಮಕಾರಿ ಎಂಬ ಕಾರಣದಿಂದ ಪಾಲಿಕೆ ಈ ನಿರ್ಧಾರ ಕೈಗೊಂಡಿದೆ.

ನಗರದ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಸರ್ಕಾರ ಈ ಹಿಂದೆ 9 ವಾಹನಗಳನ್ನು ಖರೀದಿತ್ತು. ಅದರಂತೆ ಪ್ರತಿ ವಲಯಕ್ಕೆ ಒಂದರಂತೆ ವಾಹನವನ್ನು ಕಾರ್ಯಾಚರಣೆಗೆ ನೀಡಲಾಗುತ್ತು. ಪಾಲಿಕೆಯ ಎಲ್ಲ ವಲಯಗಳಲ್ಲಿ ವಾಹನಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಎಲ್ಲ ವಲಯಗಳ ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ಹಾಗೂ ಮೇಲ್ಸೇತುವೆ ರಸ್ತೆಗಳನ್ನು ಸ್ವಚ್ಛಗೊಳಿಸಲು ವಾಹನಗಳ ಖರೀದಿಗೆ ಟೆಂಡರ್‌ ಕರೆಯಲು ಅಗತ್ಯ ಸಿದ್ಧತೆ ನಡೆಸಿದೆ.

ಮೇ ತಿಂಗಳಲ್ಲಿಯೇ ವಾಹನಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರಾದರೂ, ಸಾರಿಗೆ ಇಲಾಖೆಯಲ್ಲಿ ವಾಹನಗಳ ನೋಂದಣಿಯಾಗದ ಕಾರಣ  ಮೊದಲ ಒಂದು ತಿಂಗಳು ಸೇವೆ ಲಭ್ಯವಾಗಿರಲಿಲ್ಲ. ಆದರೆ, ಕಳೆದ ಮೂರು ತಿಂಗಳಿಂದ 9 ವಾಹನಗಳು ಕಾರ್ಯ ನಿರ್ವಹಿಸುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ತೊಂದರೆಗಳು ಎದುರಾಗಿಲ್ಲ ಎಂದು ಪಾಲಿಕೆಯ ಅಧಿಕಾರಿ ತಿಳಿಸಿದ್ದಾರೆ.

“ನಗರದ ಪ್ರಮುಖ ರಸ್ತೆಗಳಲ್ಲಿ ಪೌರಕಾರ್ಮಿಕರು ಅಪಾಯದ ನಡುವೆ ರಸ್ತೆಗಳನ್ನು ಸ್ವಚ್ಛಗೊಳಿಸಬೇಕಾಗುತ್ತದೆ. ಇಂತಹ ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಧೂಳು, ಮಣ್ಣಿರುವುದರಿಂದ ಕಸಗುಡಿಸುವಾಗ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ. ಇನ್ನು ಕಾರ್ಮಿಕರನ್ನು ರಾತ್ರಿ ಪಾಳಿಯಲ್ಲಿ ರಸ್ತೆ ಸ್ವಚ್ಛಗೊಳಿಸಲು ಬಳಸಲು ಸಾಧ್ಯವಾಗುವುದಿಲ್ಲ. ಆದರೆ, ವಾಹನಗಳ ಮೂಲಕ ಪ್ರಮುಖ ರಸ್ತೆಗಳನ್ನು ಸುಲಭವಾಗಿ ಸ್ವಚ್ಛಗೊಳಿಸ ಬಹುದಾಗಿದೆ” ಎಂದು ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಯಂತ್ರಗಳು ಕಾರ್ಯನಿರ್ವಹಿಸುತ್ತಿವೆ: ಬಿಬಿಎಂಪಿ ವತಿಯಿಂದ ಖರೀದಿಸಿರುವ 9 ಯಾಂತ್ರಿಕ ಕಸ ಗುಡಿಸುವ ವಾಹನಗಳು ಶೆಡ್‌ಗಳಲ್ಲಿ ಇರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ, ಎಂಟು ವಲಯಗಳಲ್ಲಿಯೂ ಯಂತ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಾಹನಗಳು ಕೆಲಸ ಮಾಡುವ ಎಲ್ಲ ಮಾಹಿತಿಯನ್ನು ಪಾಲಿಕೆಯ ವೆಬ್‌ಸೈಟ್‌ನಲ್ಲಿ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 

ಕ್ಷಣ ಕ್ಷಣದ ಮಾಹಿತಿ ಲಭ್ಯ: ಪಾಲಿಕೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ವಾಹನಕ್ಕೂ ಜಿಪಿಎಸ್‌ ಸಾಧನ, ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಇದರಿಂದಾಗಿ ವಾಹನಗಳು ನಿತ್ಯ ಎಲ್ಲಿ ಎಷ್ಟು ಸಮಯ ಕೆಲಸ ಮಾಡಿವೆ, ದೂರ ಕ್ರಮಿಸಿವೆ ಎಂಬ ಸಂಪೂರ್ಣ ಮಾಹಿತಿ ಪಾಲಿಕೆಯ ಅಧಿಕಾರಿಗಳಿಗೆ ದೊರೆಯಲಿದೆ. ಜತೆಗೆ ವಾಹನಗಳು ಕೆಲಸ ಮಾಡದೆ ನಿಂತಿರುವುದು ಸೇರಿ ಕ್ಷಣ ಕ್ಷಣದ ಮಾಹಿತಿ ಪಾಲಿಕೆಗೆ ಲಭ್ಯವಾಗಲಿದ್ದು, ಸುಳ್ಳು ದಾಖಲೆಗಳನ್ನು ನೀಡಿ ಬಿಲ್‌ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. 

ಪಾಲಿಕೆಗೆ ಉಳಿತಾಯ: 100 ಮಂದಿ ಪೌರಕಾರ್ಮಿಕರು ಮಾಡುವ ಕೆಲಸ ಒಂದು ವಾಹನ ಮಾಡಲಿದ್ದು, ಇದರಿಂದ ಸಮಯ ಉಳಿತಾಯವಾಗಲಿದೆ. ಒಂದು ಯಂತ್ರಕ್ಕೆ ಪಾಲಿಕೆಯಿಂದ ತಿಂಗಳಿಗೆ 6 ಲಕ್ಷ ರೂ. ನೀಡಲಾಗುತ್ತಿದ್ದು, ಅದೇ 100 ಪೌರಕಾರ್ಮಿಕರಿಂದ ಆ ಕೆಲಸವನ್ನು ಮಾಡಿಸಿದರೆ 17 ಲಕ್ಷ ವೆಚ್ಚವಾಗುತ್ತದೆ. ಇದರೊಂದಿಗೆ ಪೌರಕಾರ್ಮಿಕರು ವಾಹನ ದಟ್ಟಣೆಯ ನಡುವೆ ಕೆಲಸ ಮಾಡಲು ಕಷ್ಟವಾಗುತ್ತದೆ. ಹಾಗಂತ ಪೌರಕಾರ್ಮಿಕರಿಗೆ ಕೆಲಸವಿಲ್ಲದಂತಾಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿಯಾಗಿದ್ದು, ವಾರ್ಡ್‌ ರಸ್ತೆಗಳನ್ನು ಸ್ವಚ್ಛಗೊಳಿಸಲು ಅವರನ್ನು ಬಳಸಿಕೊಳ್ಳಲಾಗುವುದು ಎಂದು ಘನತ್ಯಾಜ್ಯ ವಿಭಾಗದ ಹಿರಿಯ ಅಧಿಕಾರಿ ವಿವರಿಸಿದರು. 

ನಗರದ ಎಂಟು ವಲಯಗಳಲ್ಲಿ ಯಾಂತ್ರಿಕ ಕಸ ಗುಡಿಸುವ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. ಜಿಪಿಎಸ್‌ ಮೂಲಕ ವಾಹನಗಳು ಕಾರ್ಯನಿರ್ವಹಿಸುವ ಮಾಹಿತಿ ಪಡೆಯಲಾಗುತ್ತಿದ್ದು, ಅದನ್ನು ಆಧರಿಸಿ ಗುತ್ತಿಗೆದಾರರಿಗೆ ವೇತನ ನೀಡಲಾಗುತ್ತದೆ. ಹಾಗಾಗಿ ಮತ್ತೆ 34 ಯಂತ್ರಗಳನ್ನು ಖರೀದಿಗೆ ಟೆಂಡರ್‌ ಸಿದ್ಧಪಡಿಸಲಾಗುತ್ತಿದೆ. 
-ಸಫ‌ರಾಜ್‌ ಖಾನ್‌, ಘನತ್ಯಾಜ್ಯ ಮತ್ತು ಆರೋಗ್ಯ ವಿಭಾಗದ ಜಂಟಿ ಆಯುಕ್ತ

ಕಳೆದೊಂದು ತಿಂಗಳಲ್ಲಿ ವಾಹನಗಳು ಸ್ವಚ್ಛಗೊಳಿಸಿದ ರಸ್ತೆಯ ಉದ್ದ 
-ವಲಯ    ದೂರ (ಕಿ.ಮೀ.ಗಳಲ್ಲಿ)
-ಪೂರ್ವ  1,104
-ಪಶ್ಚಿಮ  1,072
-ದಕ್ಷಿಣ  1,071
-ಯಲಹಂಕ  1,164
-ಮಹದೇವಪುರ  966
-ಬೊಮ್ಮನಹಳ್ಳಿ  1,030
-ಆರ್‌.ಆರ್‌.ನಗರ  1,096
-ಕೇಂದ್ರ ಕಚೇರಿ  1,122

* ವೆಂ. ಸುನೀಲ್‌ ಕುಮಾರ್‌ 

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್‌ ಸಮಸ್ಯೆ

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್‌ ಫಾಲ್ಸ್‌ ಸೀಲಿಂಗ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.