ನೂತನ ಮೇಲ್ಮನೆ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ
Team Udayavani, Jun 19, 2018, 6:05 AM IST
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ ಸದಸ್ಯರು ಸೋಮವಾರ
ಅಧಿಕಾರ ಹಾಗೂ ಗೌಪ್ಯತೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರ ಮೂರ್ತಿಯವರು ನೂತನ ಸದಸ್ಯರಿಗೆ ಪ್ರಮಾಣವಚನಬೋಧಿಸಿದರು.
ಕಾಂಗ್ರೆಸ್‌ನ ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಅರವಿಂದ ಕುಮಾರ್ ಅರಳಿ, ಕೆ.ಹರೀಶ್, ಬಿಜೆಪಿಯ
ಡಾ.ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ, ರಘುನಾಥ್‌ರಾವ್ ಮಲ್ಕಾಪುರೆ, ಎನ್.ರವಿ ಕುಮಾರ್, ಎಸ್. ರುದ್ರೇಗೌಡ
ಹಾಗೂ ಜೆಡಿಎಸ್‌ನ ಬಿ.ಎಂ. ಫಾರುಕ್, ಎಸ್.ಎಲ್ ಧರ್ಮೇಗೌಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಜೆಪಿಯ ಎನ್. ರವಿಕುಮಾರ್ ಅವರು ಭಾರತಮಾತೆಯ ಹೆಸರಿನಲ್ಲಿ,ಜೆಡಿಎಸ್‌ನ ಬಿ.ಎಂ.ಫಾರೂಕ್ ಅಲ್ಲಾನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ಸದಸ್ಯರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಜೂನ್ 17ಕ್ಕೆ ನಿವೃತ್ತಿ ಹೊಂದಿದ ಎಂ. ಆರ್.ಸೀತಾರಾಂ, ಮೋಟಮ್ಮ, ಡಿ.ಎಸ್.ವೀರಯ್ಯ, ಭಾನು ಪ್ರಕಾಶ್ ಮತ್ತು ಬಿ.ಜೆ.ಪುಟ್ಟ ಸ್ವಾಮಿಗೆ ಬೀಳ್ಕೊಡ ಲಾಯಿತು.
ಡಿಸಿಎಂ ಡಾ.ಜಿ. ಪರಮೇಶ್ವರ್, ಸಚಿವರಾದ ಕೃಷ್ಣಬೈರೇ ಗೌಡ, ಜಯಮಾಲಾ, ಪ್ರತಿಪಕ್ಷದ ನಾಯಕ ಯಡಿಯೂರಪ್ಪ
ಉಪಸ್ಥಿತರಿದ್ದರು. ಜೂ.21ರಂದು ರಾಮಚಂದ್ರಗೌಡ, ಅಮರನಾಥ ಪಾಟೀಲ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಮೇಶ್ ಬಾಬು, ಡಿ.ಎಚ್.ಶಂಕರಮೂರ್ತಿ, ಮರಿತಿಬ್ಬೇಗೌಡ ನಿವೃತ್ತಿ ಹೊಂದಲಿದ್ದಾರೆ. ಈ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆದು ಮರಿತಿಬ್ಬೇಗೌಡಪುನರಾಯ್ಕೆಗೊಂಡಿದ್ದಾರೆ.
ವೈ.ಎ.ನಾರಾಯಣಸ್ವಾಮಿ, ಡಾ.ಚಂದ್ರಶೇಖರ ಪಾಟೀಲ್, ಬೋಜೇಗೌಡ, ಆಯನೂರು ಮಂಜುನಾಥ್, ಅ.ದೇವೇಗೌಡ ಹೊಸದಾಗಿ ಆಯ್ಕೆಯಾಗಿದ್ದಾರೆ.
ಸೌಮ್ಯಾ ಪ್ರಮಾಣ: ಜಯನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸೌಮ್ಯಾರೆಡ್ಡಿ ಅವರು ಸೋಮವಾರ
ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಕೊಠಡಿಯಲ್ಲಿ ಸೋಮವಾರ ಭಗವಂತನ ಹೆಸರಿನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಅವರಿಗೆ ಸದನದ ನಡಾವಳಿಗಳ ಬಗ್ಗೆ ಸಭಾಧ್ಯಕ್ಷರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಯಿ, ಸಹೋದರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.