ಸಿಂಡಿಕೇಟ್ ಬ್ಯಾಂಕ್ಗೆ 359 ಕೋಟಿ ನಿವ್ವಳ ಲಾಭ
Team Udayavani, May 11, 2017, 10:30 AM IST
ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಿಂಡಿಕೇಟ್ ಬ್ಯಾಂಕ್ 2016-17ನೇ ಸಾಲಿನ ಹಣಕಾಸು ವರ್ಷಾಂತ್ಯಕ್ಕೆ 359 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ಅವಧಿಗೆ 1,643 ಕೋಟಿ ರೂ. ನಷ್ಟದಲ್ಲಿದ್ದ ಬ್ಯಾಂಕ್ ಸಾಲ ವಸೂಲಾತಿ ಹಾಗೂ ಇನ್ನಿತರ ಬದಲಾವಣೆಗಳನ್ನು ಚಾಲ್ತಿಗೆ ತಂದಿದ್ದರಿಂದ ಈ ಬಾರಿ ದಾಖಲೆ ಚೇತರಿಕೆ ಕಂಡುಕೊಂಡಿದೆ.
ಈ ವಿತ್ತ ವರ್ಷದ ನಾಲ್ಕನೇ ತ್ತೈಮಾಸಿಕದಲ್ಲಿ ಬ್ಯಾಂಕಿನ ಕಾಯಾಚರಣೆ ಲಾಭವು 1,514 ಕೋಟಿ ರೂ.ಗಳಾಗಿದ್ದು, ಇದು ಕಳೆದ ಸಾಲಿಗಿಂತ ಶೇ.53 ರಷ್ಟು ಹೆಚ್ಚಳ ಎನಿಸಿದೆ. ಬಡ್ಡಿ ಮೇಲಿನ ನಿವ್ವಳ ಆದಾಯದಲ್ಲೂ ಕೂಡ ಶೇ.34 ರಷ್ಟು ಹೆಚ್ಚಳವಾಗಿದ್ದರೆ, ಬಡ್ಡಿ ರಹಿತ ಆದಾಯ ವರ್ಷದಿಂದ ವರ್ಷಕ್ಕೆ ಶೇ.38 ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕಿನ ಕಾರ್ಪೋರೇಟ್ ಕಚೇರಿ ಪ್ರಕಟಣೆ ತಿಳಿಸಿದೆ.
4ನೇ ತ್ತೈಮಾಸಿಕದಲ್ಲಿ ಬ್ಯಾಂಕು ತೆರಿಗೆ ನಂತರ ವ್ಯವಹಾರಗಳಿಂದ 104 ಕೋಟಿ ರೂ. ನಿವ್ವಳ ಲಾಭ ಗಳಿಸಿದರೆ, 2017ರ ಮಾರ್ಚ್ ಅಂತ್ಯಕ್ಕೆ ಉಳಿತಾಯ ಖಾತೆಯಲ್ಲಿ ಹೂಡಿಕೆ ಕಳೆದ ಸಾಲಿಗಿಂತ ಶೇ.23 ರಷ್ಟು ವೃದ್ಧಿಯನ್ನು ಕಂಡುಕೊಂಡಿದೆ. ಸಿಆರ್ಎಆರ್ (ಬ್ರಸೆಲ್-3)ರಲ್ಲಿ ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ.11.16 ರಷ್ಟಿದ್ದರೆ ಈ ಸಾಲಿನಲ್ಲಿ ಶೇ.12.03 ಹೆಚ್ಚಳವಾಗಿದೆ. ಅದೇ ರೀತಿ ಆಸ್ತಿ ಆದಾಯ 2016-17ರಲ್ಲಿ ಶೇ.0.14, ಷೇರು ಆದಾಯ ಶೇ.3.34 ಗಳಿಸಿದೆ. ಕಳೆದ ಹಣಕಾಸು ವರ್ಷದ ನಾಲ್ಕನೇ ತ್ತೈಮಾಸಿಕದಲ್ಲಿ ನಿವ್ವಳ ಅನುತ್ಪಾದಕ ಆಸ್ತಿ (ಎನ್ಪಿಎ) ಶೇ.8.69 ಇದ್ದದ್ದು ಈ ಸಾಲಿನ ಶೇ.5.21ಕ್ಕೆ ಇಳಿಕೆಯಾಗಿರುವುದು ಬ್ಯಾಂಕಿನ ಅಭಿವೃದ್ಧಿಯನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.