ಕಾನೂನು ತಜ್ಞರೊಂದಿಗೆ ಸಿಎಂ ಚರ್ಚೆ?
Team Udayavani, Nov 8, 2018, 6:35 AM IST
ಬೆಂಗಳೂರು:ಎಸ್ಸಿ -ಎಸ್ಟಿ ನೌಕರರ ಮುಂಬಡ್ತಿ ಸಂಬಂಧ ವಿಶೇಷ ಕಾಯ್ದೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್ ನ್ಯಾಯವಾದಿ ಬಸವಪ್ರಭು ಹಾಗೂ ಅಡ್ವಕೇಟ್ ಜನರಲ್ ಉದಯ್ ಹೊಳ್ಳ ಹಾಗೂ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಕಾರ್ಯದರ್ಶಿ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿಯವರ ಕಚೇರಿ ಮೂಲಗಳು ಇದನ್ನು ನಿರಾಕರಿಸಿ ಅಂತಹ ಯಾವುದೇ ಸಭೆ ನಡೆದಿಲ್ಲ ಎಂದು ತಿಳಿಸಿದೆ.
ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿಯೇ ಇದ್ದರೂ ಮುಖ್ಯಮಂತ್ರಿಯವರು ನಡೆಸಿದ ಸಭೆಗೆ ಆಹ್ವಾನ ಇರಲಿಲ್ಲ . ಈ ಬೆಳವಣಿಗೆಯ ನಂತರ ಡಾ.ಜಿ.ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಪ್ರತ್ಯೇಕ ಸಭೆ ನಡೆಸಿದರು. ರಾಜ್ಯ ಎಸ್ಸಿ- ಎಸ್ಟಿ ನೌಕರರು ಇದೇ ಸಂದರ್ಭದಲ್ಲಿ ಪರಮೇಶ್ವರ್ ಭೇಟಿ ಮಾಡಿ ಸರ್ಕಾರದ ನಿರ್ಧಾರ ಸ್ಪಷ್ಟ ಪಡಿಸುವಂತೆ ಒತ್ತಡ ಹೇರಿದರು ಎಂದು ಹೇಳಲಾಗಿದೆ.
ಪ್ರತ್ಯೇಕ ಸಭೆಯ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಯವರು ಸಭೆ ನಡೆಸಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಮ್ಮನ್ನು ಸಭೆಗೆ ಕರೆಯಬೇಕು ಎಂದಿದ್ದರೆ ಮೊದಲೇ ಹೇಳುತ್ತಿದ್ದರು. ಕಾನೂನು ತಜ್ಞರನ್ನು ಏಕೆ ಕರೆಸಿದ್ದರೋ, ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.
ಎಸ್ಸಿ -ಎಸ್ಟಿ ನೌಕರರ ಸಂಘದ ಅಧ್ಯಕ್ಷ ಶಿವಶಂಕರ್, ರಾಜ್ಯ ಸರ್ಕಾರ ಮಂಡಿಸಿದ್ದ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರ ಮಾರ್ಗಸೂಚಿ ಅನುಸರಿಸುವಲ್ಲಿ ಮೀನ ಮೇಷ ಎಣಿಸುತ್ತಿದೆ. ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿಯೇ ಇರುವಾಗ ಅವರ ಗಮನಕ್ಕೆ ತಾರದೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆ ನಡೆಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.