ರಾಜ್ಯದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಚರ್ಚೆ

Team Udayavani, Mar 5, 2019, 12:30 AM IST

vidhana-soudha-750.jpg

ಬೆಂಗಳೂರು: ರಾಜ್ಯ ರಾಜಕಾರಣದ 70 ವರ್ಷಗಳ ಇತಿಹಾಸದಲ್ಲಿ ಹಲವು ಬಾರಿ ದಲಿತರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದನ್ನು  ತಪ್ಪಿಸಲಾಗಿದೆ ಎಂದು ಹಲವು ಸಂದರ್ಭಗಳಲ್ಲಿ ಆರೋಪಿಸಲಾಗಿತ್ತು. ಉಪ- ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ  ಕೂಡ ಕೆಲವು ದಿನಗಳ ಹಿಂದೆ ತಮಗೆ ಎರಡು ಬಾರಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಲಾಗಿತ್ತು ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಅದೇ  ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಛಲವಾದಿ ಮಹಾಸಭಾದ ರಾಜ್ಯ ಸಮಿತಿಯಿಂದ ಸೋಮವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ  ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್‌, “ತನಗೆ ಎರಡು ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಕೈತಪ್ಪಿತು’ ಎಂಬ ಹೇಳಿಕೆಯನ್ನು ಪುನರುಚ್ಚರಿಸಿದರೆ, ಇದನ್ನು ಅನುಮೋದಿಸುವಂತೆ ಮಾತನಾಡಿದ ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಅರ್ಹತೆ ಮತ್ತು ಅವಕಾಶ ಇದ್ದಾಗಲೂ ನಮ್ಮ ರಾಜ್ಯದಲ್ಲಿ ದಲಿತರನ್ನು ಸಿಎಂ ಸ್ಥಾನದಿಂದ ವಂಚಿತರನ್ನಾಗಿ ಮಾಡಿರುವುದು ನಿಜ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್‌,  ಎಲ್ಲ ಸಾಮರ್ಥಯ ಇದ್ದರೂ ಬಿ. ಬಸವಲಿಂಗಪ್ಪ, ಕೆ.ಎಚ್‌. ರಂಗನಾಥ್‌ ಮುಖ್ಯಮಂತ್ರಿ ಹುದ್ದೆಯಿಂದ ವಂಚಿತರಾದರು. ನನ್ನ ಕಣ್ಣೆದುರೇ ಮಲ್ಲಿಕಾರ್ಜುನ ಖರ್ಗೆಯವರಿಗೆ 2 ಬಾರಿ ಸಿಎಂ ಆಗುವ ಅವಕಾಶ ಕೈ ತಪ್ಪಿತ್ತು. ನನಗೂ 2-3 ಬಾರಿ ಅವಕಾಶ ತಪ್ಪಿ ಹೋಯಿತು ಎಂದು ನಾನು ಹೇಳಿದ್ದು ನಿಜ. ಆ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದರು.

ಹೇಳಿಕೆಗೆ ಬದ್ಧ: ಹಿಂದಿನ  ಹೇಳಿಕೆಗೆ “ನೀವು ಆ ರೀತಿ ಹೇಳಬಾರದಿತ್ತು ಎಂದು ನಮ್ಮವರೇ ಹೇಳಿದರು. ಅದರ ವಿರುದ್ಧ ದೆಹಲಿ ವರೆಗೆ ದೂರು ಹೋಯಿತು. ಅಲ್ಲಿ ಪ್ರಶ್ನೆ ಮಾಡಿದಾಗ ಆ ರೀತಿ ಹೇಳಿದ್ದು ನಿಜ. ಮುಂದೆ ಸಂದರ್ಭ ಬಂದರೆ ಅದನ್ನು ಪುನರುತ್ಛರಿಸಲು ಸಿದ್ಧ ಎಂದು  ತಿಳಿಸಿದೆ. ನನ್ನ ಮಾತು ಮತ್ತು ಯೋಚನೆ ಮೃದು ಆಗುವುದಿಲ್ಲ.  ಅಂಬೇಡ್ಕರ್‌ ವಿಚಾರಗಳೊಂದಿಗೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು ಡಿಸಿಎಂ.

ದಲಿತರನ್ನು ಸಿಎಂ ಮಾಡಿಲ್ಲ: ಇದಕ್ಕೂ ಮೊದಲು ಮಾತನಾಡಿದ್ದ  ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ದಲಿತರು ಸಿಎಂ ಆಗಬೇಕು ಎಂದು ಹೇಳಿದ್ದೆ ಎಂದು ಹಲವರು ಹೇಳುತ್ತಿದ್ದಾರೆ ಅದೆಲ್ಲ ಕಟ್ಟು ಕತೆಗಳು ಎಂದಿದ್ದಾರೆ. 2004ರಲ್ಲಿ ಖರ್ಗೆ ಪರ ಯಾರೂ ಮಾತನಾಡಲಿಲ್ಲ. 2008ರಲ್ಲಿ ನಮ್ಮನ್ನು ಯಾರೂ ಕೇಳಿಲ್ಲ. 2013ರಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ ಅವರ ನಡುವೆ ಅಧಿಕಾರ ಹಂಚಿಕೆ ಆಗುವಂತೆ ಪ್ರಯತ್ನ ಮಾಡಿದ್ದೆ. ಆದರೆ ಸನ್ನಿವೇಶ ಹಾಗೂ ಫ‌ಲಿತಾಂಶ ಬೇರೆ ಆಯಿತು. 70 ವರ್ಷಗಳಲ್ಲಿ ಈಗ ದಲಿತರೊಬ್ಬರಿಗೆ ಡಿಸಿಎಂ ಸ್ಥಾನ ಸಿಕ್ಕಿದೆ ಎಂದರು.

“ಕೈ’ಗೆ ಪರಂ ಸಿಎಂ
ಕಾರ್ಯಕ್ರಮದಲ್ಲಿ ಮಾತನಾಡಿದ ಛಲವಾದಿ ಮಹಾಸಭಾದ ಮುಖಂಡ ಎಚ್‌.ಕೆ. ಬಸವರಾಜ್‌, ರಾಜ್ಯದ 70 ವರ್ಷಗಳ ರಾಜಕೀಯ ಇತಿಹಾಸದಲ್ಲಿ ದಲಿತ (ಛಲವಾದಿ) ಸಮುದಾಯಕ್ಕೆ ಸೇರಿದವರೊಬ್ಬರು ಉಪ ಮುಖ್ಯಮಂತ್ರಿ ಆಗಿದ್ದಾರೆ. ಪರಮೇಶ್ವರ್‌ ಅವರು ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಆಗಿರಬಹುದು. ಆದರೆ, ಕಾಂಗ್ರೆಸ್‌ ಪಕ್ಷದ ವಿಚಾರಕ್ಕೆ ಬಂದಾಗ ಅವರೇ ಸಿಎಂ. ಕುಮಾರಸ್ವಾಮಿ ಸಿಎಂ ಆಗಬೇಕಾದಾಗ ಇಡೀ ಒಕ್ಕಲಿಗ ಸಮುದಾಯ ಅವರ ಬೆಂಬಲಕ್ಕೆ ನಿಂತಿತ್ತು. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಬೆಂಬಲಕ್ಕೆ ಅವರವರ ಸಮುದಾಯ ನಿಂತಿತ್ತು. ಅದೇ ರೀತಿ ಛಲವಾದಿ ಸೇರಿದಂತೆ ಇಡೀ ದಲಿತ ಸಮುದಾಯ ಪರಮೇಶ್ವರ್‌ ಬೆಂಬಲಕ್ಕೆ ನಿಂತು ಸಿಎಂ ಮಾಡಬೇಕು. ಇದೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ಛಲವಾದಿ ಸಮುದಾಯ ಸಂಘಟಿತವಾಗಬೇಕು ಎಂದರು.

ಟಾಪ್ ನ್ಯೂಸ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

12-bng

Bengaluru: ಅಂಗಡಿ ಮಾಲಿಕನಿಗೆ ಹಲ್ಲೆ: ಇಬ್ಬರ ಸೆರೆ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

11-bng

Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

10-bng

Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.